ಸಾರ್ವಜನಿಕ ಸ್ಥಳದಲ್ಲಿ ತಂಬಾಕು ಬಳಕೆ : ದಂಡ ₹200ರಿಂದ ₹1000ಕ್ಕೆ ಏರಿಕೆ – ಧಾರವಾಡ ಪೊಲೀಸರ ಎಚ್ಚರಿಕೆ
ಧಾರವಾಡ, 26 ಏಪ್ರಿಲ್ (ಹಿ.ಸ.) : ಆ್ಯಂಕರ್ : ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು ಉತ್ಪನ್ನಗಳ ಬಳಕೆಗೆ ಸಂಬಂಧಿಸಿದಂತೆ ದಂಡವನ್ನು ₹200ರಿಂದ ₹1000ಕ್ಕೆ ಹೆಚ್ಚಿಸಲಾಗಿದೆ ಎಂದು ಧಾರವಾಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗುಂಜನ್ ಆರ್ಯ ತಿಳಿಸಿದ್ದಾರೆ. ಈ ಕುರಿತು ಪ್ರಕಟಣೆ ನೀಡಿದ ಅವರು, ಸಿಗರೇಟು ಮತ್ತ
ಸಾರ್ವಜನಿಕ ಸ್ಥಳದಲ್ಲಿ ತಂಬಾಕು ಬಳಕೆ : ದಂಡ ₹200ರಿಂದ ₹1000ಕ್ಕೆ ಏರಿಕೆ – ಧಾರವಾಡ ಪೊಲೀಸರ ಎಚ್ಚರಿಕೆ


ಧಾರವಾಡ, 26 ಏಪ್ರಿಲ್ (ಹಿ.ಸ.) :

ಆ್ಯಂಕರ್ : ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು ಉತ್ಪನ್ನಗಳ ಬಳಕೆಗೆ ಸಂಬಂಧಿಸಿದಂತೆ ದಂಡವನ್ನು ₹200ರಿಂದ ₹1000ಕ್ಕೆ ಹೆಚ್ಚಿಸಲಾಗಿದೆ ಎಂದು ಧಾರವಾಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗುಂಜನ್ ಆರ್ಯ ತಿಳಿಸಿದ್ದಾರೆ.

ಈ ಕುರಿತು ಪ್ರಕಟಣೆ ನೀಡಿದ ಅವರು, ಸಿಗರೇಟು ಮತ್ತು ಇತರ ತಂಬಾಕು ಉತ್ಪನ್ನಗಳ (ಜಾಹಿರಾತು ನಿಷೇಧ ಮತ್ತು ವ್ಯಾಪಾರ, ಉತ್ಪಾದನೆ, ಸರಬರಾಜು ಹಾಗೂ ವಿತರಣೆಯ ವಿನಿಯಮನ) (ಕರ್ನಾಟಕ ತಿದ್ದುಪಡಿ) ಅಧಿನಿಯಮ, 2024 ರ ಕಲಂ 4 ಪ್ರಕಾರ ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು ಬಳಕೆ ಸಂಪೂರ್ಣ ನಿಷೇಧಿತವಾಗಿದೆ ಎಂದು ಹೇಳಿದ್ದಾರೆ. ನಿಯಮ ಉಲ್ಲಂಘಿಸಿದರೆ ಈಗ ₹1000ವರೆಗೆ ದಂಡ ವಿಧಿಸಲಾಗುತ್ತದೆ ಎಂದು ಸ್ಪಷ್ಟಪಡಿಸಿದರು.

ಹುಕ್ಕಾ ಬಾರ್ಗಳಿಗೆ ಸಂಬಂಧಿಸಿದಂತೆ ಕಠಿಣ ಕ್ರಮ ಕೈಗೊಳ್ಳಲಾಗಿದ್ದು, ಕಲಂ 4ಎ ಅಡಿ ನಿಯಮ ಉಲ್ಲಂಘನೆ ಮಾಡಿದವರಿಗೆ ಕನಿಷ್ಠ 1 ವರ್ಷದಿಂದ 3 ವರ್ಷಗಳವರೆಗೆ ಜೈಲು ಶಿಕ್ಷೆ ಹಾಗೂ ₹50,000ರಿಂದ ₹1 ಲಕ್ಷದವರೆಗೆ ದಂಡ ವಿಧಿಸಲಾಗುತ್ತದೆ ಎಂದು ತಿಳಿಸಿದರು.

ಇದಲ್ಲದೆ, ಕಲಂ 6ಎ ಪ್ರಕಾರ 21 ವರ್ಷಕ್ಕಿಂತ ಕಡಿಮೆ ವಯಸ್ಸಿನವರಿಗೆ ತಂಬಾಕು ಉತ್ಪನ್ನಗಳ ಮಾರಾಟ ನಿಷೇಧ ಆಗಿದೆ. ಶಿಕ್ಷಣ ಸಂಸ್ಥೆಗಳ 100 ಮೀಟರ್ ವ್ಯಾಪ್ತಿಯೊಳಗೆ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುವುದೂ ಕಾನೂನುಬಾಹಿರವಾಗಿದೆ. ಈ ನಿಯಮ ಉಲ್ಲಂಘಿಸಿದರೆ ₹1000ವರೆಗೆ ದಂಡ ವಿಧಿಸಲಾಗುತ್ತದೆ ಎಂದು ಎಚ್ಚರಿಸಿದರು.

ಸಾರ್ವಜನಿಕರು ಕಾನೂನು ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ, ಆರೋಗ್ಯಕರ ಸಮಾಜ ನಿರ್ಮಾಣಕ್ಕೆ ಸಹಕರಿಸಬೇಕು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗುಂಜನ್ ಆರ್ಯ ಮನವಿ ಮಾಡಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande