
ತೆಹಟ್ಟಾ, 26 ಏಪ್ರಿಲ್ (ಹಿ.ಸ.) :
ಆ್ಯಂಕರ್ : ಅಮಿತ್ ಶಾ ಅವರು ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿ ನೇತೃತ್ವದ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿ, ರೈತರಿಗೆ ಅನ್ಯಾಯ ಮಾಡಲಾಗಿದೆ ಎಂದು ಆರೋಪಿಸಿದ್ದಾರೆ.
ನಾಡಿಯಾ ಜಿಲ್ಲೆಯ ತೆಹಟ್ಟಾದಲ್ಲಿ ನಡೆದ ಚುನಾವಣಾ ರ‍್ಯಾಲಿಯನ್ನುದ್ದೇಶಿಸಿ ಮಾತನಾಡಿದ ಅವರು, ಮೊದಲ ಹಂತದ ಮತದಾನದಲ್ಲೇ ಬಂಗಾಳದ ಜನರು “ದೀದಿ”ಗೆ ತಿರುಗೇಟು ನೀಡಿದ್ದಾರೆ ಎಂದು ಹೇಳಿದರು. ಮೊದಲ ಹಂತದಲ್ಲಿ ಭಾರತೀಯ ಜನತಾ ಪಕ್ಷ 150 ಸ್ಥಾನಗಳಲ್ಲಿ ಸುಮಾರು 110 ಸ್ಥಾನಗಳನ್ನು ಗೆಲ್ಲಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಈ ವೇಳೆ, ರಾಜ್ಯದ ಬೆಳ್ಳುಳ್ಳಿ ಬೆಳೆಗಾರರ ಸಮಸ್ಯೆಯನ್ನು ಪ್ರಸ್ತಾಪಿಸಿದ ಅಮಿತ್ ಶಾ, “ಮಮತಾ ದೀದಿ ಬೆಳ್ಳುಳ್ಳಿ ರೈತರಿಗೆ ದ್ರೋಹ ಮಾಡಿದ್ದಾರೆ. ದೇಶದ ಇತರ ಭಾಗಗಳಲ್ಲಿ ಬೆಳ್ಳುಳ್ಳಿ ಬೆಲೆ ಪ್ರತಿ ಕೆಜಿಗೆ ಸುಮಾರು ₹200 ಇದ್ದರೆ, ಬಾಂಗ್ಲಾದೇಶದಿಂದ ಬರುತ್ತಿರುವ ನಕಲಿ ಚೈನೀಸ್ ಬೆಳ್ಳುಳ್ಳಿಯಿಂದಾಗಿ ಇಲ್ಲಿ ರೈತರಿಗೆ ಕೇವಲ ₹12 ಮಾತ್ರ ಸಿಗುತ್ತಿದೆ” ಎಂದು ಆರೋಪಿಸಿದರು.
ಬಿಜೆಪಿ ಅಧಿಕಾರಕ್ಕೆ ಬಂದರೆ ಚೀನೀ ಬೆಳ್ಳುಳ್ಳಿಯನ್ನು ನಿಷೇಧಿಸಿ, ಸ್ಥಳೀಯ ರೈತರಿಗೆ ಉತ್ತಮ ಬೆಲೆ ದೊರಕುವಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.
ಹಾಗೇ, ಮಹಿಳೆಯರು ಮತ್ತು ಕುಟುಂಬಗಳಿಗೆ ಕಲ್ಯಾಣ ಯೋಜನೆಗಳನ್ನು ಘೋಷಿಸಿದ ಅವರು, “ಮೇ ತಿಂಗಳಿನಿಂದ ಪ್ರತಿಯೊಬ್ಬ ಮಹಿಳೆಯ ಬ್ಯಾಂಕ್ ಖಾತೆಗೆ ₹3000 ಜಮಾ ಮಾಡಲಾಗುವುದು. ಜೊತೆಗೆ ನಿರುದ್ಯೋಗಿ ಯುವಕರಿಗೆ ಪ್ರತಿ ತಿಂಗಳು ₹3000 ನೀಡಲಾಗುವುದು ಹಾಗೂ ಗರ್ಭಿಣಿ ತಾಯಂದಿರಿಗೆ ₹21,000 ಸಹಾಯಧನ ನೀಡಲಾಗುವುದು” ಎಂದು ತಿಳಿಸಿದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa