
ಬಾಗಲಕೋಟೆ, 26 ಏಪ್ರಿಲ್ (ಹಿ.ಸ.) :
ಆ್ಯಂಕರ್ : ಮಹಿಳೆಯರು ಒಂಟಿಯಾಗಿ ಸಂಚರಿಸುವಾಗ ಹೆಚ್ಚು ಜಾಗರೂಕರಾಗಿರಬೇಕು ಎಂದು ಬಾಗಲಕೋಟೆ ಜಿಲ್ಲಾ ಪೊಲೀಸ್ ಇಲಾಖೆ ಸಲಹೆ ನೀಡಿದೆ.
ಸಾರ್ವಜನಿಕ ಸ್ಥಳಗಳಲ್ಲಿ ಸಂಚರಿಸುವ ವೇಳೆ ಬೆಲೆಬಾಳುವ ಆಭರಣಗಳನ್ನು ಪ್ರದರ್ಶಿಸದೇ ಇರುವುದು ಉತ್ತಮ. ಯಾವುದೇ ಅನುಮಾನಾಸ್ಪದ ವ್ಯಕ್ತಿಗಳು ಅಥವಾ ಚಟುವಟಿಕೆಗಳು ಕಂಡುಬಂದರೆ ತಕ್ಷಣ ಸಮೀಪದ ಪೊಲೀಸ್ ಠಾಣೆಗೆ ಮಾಹಿತಿ ನೀಡುವಂತೆ ಮನವಿ ಮಾಡಲಾಗಿದೆ.
ಮಹಿಳೆಯರ ಸುರಕ್ಷತೆಗಾಗಿ ಬಾಗಲಕೋಟೆ ಜಿಲ್ಲಾ ಪೊಲೀಸ್ ಸದಾ ಸಜ್ಜಾಗಿದ್ದು, ಸಾರ್ವಜನಿಕರು ಸಹಕರಿಸಬೇಕು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / jyothi deshpande