
ವಿಜಯಪುರ, 26 ಏಪ್ರಿಲ್ (ಹಿ.ಸ.) :
ಆ್ಯಂಕರ್ : ವಿಜಯಪುರ ನಗರದ ಆಶ್ರಮ ರಸ್ತೆಯಲ್ಲಿ ನೂತನವಾಗಿ ನಿರ್ಮಿಸಲಾದ ಯಂಡಿಗೇರಿ ಆಸ್ಪತ್ರೆಯ ಪ್ರಾರಂಭೋತ್ಸವ ಹಾಗೂ ವಾಸ್ತುಶಾಂತಿ ಹೋಮ ಕಾರ್ಯಕ್ರಮವನ್ನು ಜಿಲ್ಲಾ ಉಸ್ತುವಾರಿ ಸಚಿವ ಎಂ ಬಿ ಪಾಟೀಲ್ ನೆರವೇರಿಸಿದರು.
ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಈ ಆಸ್ಪತ್ರೆ ಸಾರ್ವಜನಿಕರಿಗೆ ಉತ್ತಮ ಮತ್ತು ಸಮರ್ಪಕ ವೈದ್ಯಕೀಯ ಸೇವೆಗಳನ್ನು ಒದಗಿಸುವಲ್ಲಿ ಪ್ರಮುಖ ಪಾತ್ರ ವಹಿಸಲಿದೆ ಎಂದು ತಿಳಿಸಿದರು. ಆರೋಗ್ಯ ಕ್ಷೇತ್ರದಲ್ಲಿ ಇನ್ನಷ್ಟು ಗುಣಮಟ್ಟದ ಸೇವೆ ಲಭ್ಯವಾಗುವಂತೆ ಈ ಆಸ್ಪತ್ರೆ ಸಹಕಾರಿ ಆಗಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಡಾ|| ಪ್ರೀತಿಶ್ ಯಂಡಿಗೇರಿ ಹಾಗೂ ಡಾ|| ಅಶ್ವಿನಿ ಯಂಡಿಗೇರಿ ದಂಪತಿಗೆ ಮತ್ತು ಅವರ ಕುಟುಂಬ ಸದಸ್ಯರಿಗೆ ಹೃತ್ಪೂರ್ವಕ ಅಭಿನಂದನೆಗಳು ಹಾಗೂ ಶುಭಾಶಯಗಳನ್ನು ತಿಳಿಸಲಾಯಿತು.
ಕಾರ್ಯಕ್ರಮದಲ್ಲಿ ಕುಟುಂಬಸ್ಥರು, ಸ್ನೇಹಿತರು ಹಾಗೂ ಗಣ್ಯರು ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / jyothi deshpande