ಯಡಿಯೂರಪ್ಪ ಅಭಿಮಾನೋತ್ಸವ’ – ತರಳಬಾಳು ಶ್ರೀಗಳಿಗೆ ವಿಜಯೇಂದ್ರ ಆಹ್ವಾನ
ಚಿತ್ರದುರ್ಗ, 26 ಏಪ್ರಿಲ್ (ಹಿ.ಸ.) : ಆ್ಯಂಕರ್ : ಬಿ.ಎಸ್. ಯಡಿಯೂರಪ್ಪ ಅವರ 50 ವರ್ಷಗಳ ಸಾರ್ವಜನಿಕ ಜೀವನದ ಸಾರ್ಥಕ ಸಾಧನೆಗಳನ್ನು ಗೌರವಿಸುವ ಸಲುವಾಗಿ ಮೇ 9ರಂದು ಚಿತ್ರದುರ್ಗದಲ್ಲಿ ಪಕ್ಷದ ವತಿಯಿಂದ ಆಯೋಜಿಸಿರುವ “ಬಿ.ಎಸ್. ಯಡಿಯೂರಪ್ಪ ಅಭಿಮಾನೋತ್ಸವ” ಕಾರ್ಯಕ್ರಮಕ್ಕೆ ಸಿರಿಗೆರೆಯ ತರಳಬಾಳು ಜಗದ್ಗು
ಯಡಿಯೂರಪ್ಪ ಅಭಿಮಾನೋತ್ಸವ’ – ತರಳಬಾಳು ಶ್ರೀಗಳಿಗೆ ವಿಜಯೇಂದ್ರ ಆಹ್ವಾನ


ಚಿತ್ರದುರ್ಗ, 26 ಏಪ್ರಿಲ್ (ಹಿ.ಸ.) :

ಆ್ಯಂಕರ್ : ಬಿ.ಎಸ್. ಯಡಿಯೂರಪ್ಪ ಅವರ 50 ವರ್ಷಗಳ ಸಾರ್ವಜನಿಕ ಜೀವನದ ಸಾರ್ಥಕ ಸಾಧನೆಗಳನ್ನು ಗೌರವಿಸುವ ಸಲುವಾಗಿ ಮೇ 9ರಂದು ಚಿತ್ರದುರ್ಗದಲ್ಲಿ ಪಕ್ಷದ ವತಿಯಿಂದ ಆಯೋಜಿಸಿರುವ “ಬಿ.ಎಸ್. ಯಡಿಯೂರಪ್ಪ ಅಭಿಮಾನೋತ್ಸವ” ಕಾರ್ಯಕ್ರಮಕ್ಕೆ ಸಿರಿಗೆರೆಯ ತರಳಬಾಳು ಜಗದ್ಗುರು ಪರಮಪೂಜ್ಯ ಡಾ. ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮೀಜಿ ಅವರನ್ನು ಬಿ.ವೈ.ವಿಜಯೇಂದ್ರ ಭೇಟಿ ಮಾಡಿ ಕ ಆಹ್ವಾನಿಸಿದರು.

ಮಹನೀಯ ಸಂತರುಗಳ ಆಶೀರ್ವಾದ, ಮಾರ್ಗದರ್ಶನ ಹಾಗೂ ಪವಿತ್ರ ಉಪಸ್ಥಿತಿ ಈ ಐತಿಹಾಸಿಕ ಸಮಾರಂಭಕ್ಕೆ ವಿಶೇಷ ಮೆರುಗು ನೀಡಲಿದೆ ಎಂದು ತಿಳಿಸಿ. ಪೂಜ್ಯ ತರಳಬಾಳು ಶ್ರೀಗಳೊಂದಿಗೆ ಕಾರ್ಯಕ್ರಮದ ರೂಪುರೇಷೆಗಳ ಬಗ್ಗೆ ಚರ್ಚಿಸಿ, ಅವರ ಆಶೀರ್ವಾದ ಪಡೆದರು.

ಈ ಸಂದರ್ಭದಲ್ಲಿ ಮಾಜಿ ಉಪಮುಖ್ಯಮಂತ್ರಿಗಳು, ಅಭಿಮಾನೋತ್ಸವ ಸಮಿತಿ ಅಧ್ಯಕ್ಷರು ಹಾಗೂ ಸಂಸದ ಗೋವಿಂದ ಎಂ. ಕಾರಜೋಳ ಸೇರಿದಂತೆ ಹಲವು ಪ್ರಮುಖರು ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande