
ವಿಜಯಪುರ, 27 ಏಪ್ರಿಲ್ (ಹಿ.ಸ.) :
ಆ್ಯಂಕರ್ : ವಿಜಯಪುರ ಜಿಲ್ಲೆಯ ಬಬಲೇಶ್ವರ ಮತ ಕ್ಷೇತ್ರದ ವ್ಯಾಪ್ತಿಯ ಬರಟಗಿ ಎಲ್ಟಿ ನಂ.3 ತಾಂಡಾದಲ್ಲಿ ನಡೆದ ಅಂಬಾಭವಾನಿ ಜಾತ್ರಾ ಮಹೋತ್ಸವ ಭಕ್ತಿಭಾವದಿಂದ ನೆರವೇರಿತು.
ಜಾತ್ರಾ ಮಹೋತ್ಸವದಲ್ಲಿ ಭಾಗವಹಿಸಿದ ಬಬಲೇಶ್ವರ ಮತಕ್ಷೇತ್ರದ ಶಾಸಕ ಉಸ್ತುವಾರಿ ಸಚಿವ ಎಂ ಬಿ ಪಾಟೀಲ್ ಭಾಗವಹಿಸಿ ಪೂಜೆ ಸಲ್ಲಿಸಿ
ಜನರ ಒಳಿತಿಗಾಗಿ ಪ್ರಾರ್ಥನೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಜಾತ್ರೆಯ ಸಂಭ್ರಮದಲ್ಲಿ ಗ್ರಾಮಸ್ಥರು ಉತ್ಸಾಹದಿಂದ ಪಾಲ್ಗೊಂಡು ಭಕ್ತಿ ಪರವಶರಾಗಿದ್ದರು. ಜಾತ್ರೆಗಳು, ದೇವತಾ ಕಾರ್ಯಗಳು ಜನರನ್ನು ಒಗ್ಗೂಡಿಸುವ ಶಕ್ತಿ ಹೊಂದಿದ್ದು, ಸಮಾಜದಲ್ಲಿ ಸಂತಸ ಮತ್ತು ಸಂಭ್ರಮವನ್ನು ಪಸರಿಸುತ್ತವೆ. ಇಂತಹ ಧಾರ್ಮಿಕ ಉತ್ಸವಗಳು ನಮ್ಮ ಪಾರಂಪರಿಕ ಸಂಸ್ಕೃತಿ, ಸಂಪ್ರದಾಯಗಳ ವೈಭವವನ್ನು ಉಳಿಸಿಕೊಂಡು ಸಮಾಜದಲ್ಲಿ ಏಕತೆ ಮತ್ತು ಸೌಹಾರ್ದತೆಯನ್ನು ಮತ್ತಷ್ಟು ಬಲಪಡಿಸುತ್ತವೆ ಎಂಬ ಅಭಿಪ್ರಾಯ ವ್ಯಕ್ತವಾಯಿತು.
ಗ್ರಾಮದ ಹಿರಿಯರು, ಯುವಕರು, ಮಹಿಳೆಯರು ಸೇರಿದಂತೆ ಅನೇಕರು ಭಾಗವಹಿಸಿ ಜಾತ್ರೆಯನ್ನು ಯಶಸ್ವಿಗೊಳಿಸಿದರು.
ಹಿಂದೂಸ್ತಾನ್ ಸಮಾಚಾರ್ / jyothi deshpande