ಬಮ್ಮನಹಳ್ಳಿಯಲ್ಲಿ ಡಾ. ಬಿ.ಆರ್. ಅಂಬೇಡ್ಕರ್ 135ನೇ ಜಯಂತಿ ಅಂಗವಾಗಿ ಮೆರವಣಿಗೆಗೆ ಚಾಲನೆ
ವಿಜಯಪುರ, 27 ಏಪ್ರಿಲ್ (ಹಿ.ಸ.) : ಆ್ಯಂಕರ್ : ವಿಜಯಪುರ ಜಿಲ್ಲೆಯ ಸಿಂದಗಿ ಮತಕ್ಷೇತ್ರದ ಬಮ್ಮನಹಳ್ಳಿ ಗ್ರಾಮದಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಅವರ 135ನೇ ಜಯಂತ್ಯೋತ್ಸವ ಅಂಗವಾಗಿ ಹಮ್ಮಿಕೊಂಡಿದ್ದ ಮೆರವಣಿಗೆಗೆ ಇಂದು ಶಾಸಕ ಅಶೋಕ ಮನಗೂಳಿ ಚಾಲನೆ ನೀಡಿದರು. ಗ್ರಾಮದಲ್ಲಿ ಭವ್ಯವಾಗಿ ನಡೆದ ಈ ಮೆರವಣಿಗೆ
ಜಯಂತಿ


ವಿಜಯಪುರ, 27 ಏಪ್ರಿಲ್ (ಹಿ.ಸ.) :

ಆ್ಯಂಕರ್ : ವಿಜಯಪುರ ಜಿಲ್ಲೆಯ

ಸಿಂದಗಿ ಮತಕ್ಷೇತ್ರದ ಬಮ್ಮನಹಳ್ಳಿ ಗ್ರಾಮದಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಅವರ 135ನೇ ಜಯಂತ್ಯೋತ್ಸವ ಅಂಗವಾಗಿ ಹಮ್ಮಿಕೊಂಡಿದ್ದ ಮೆರವಣಿಗೆಗೆ ಇಂದು ಶಾಸಕ ಅಶೋಕ ಮನಗೂಳಿ ಚಾಲನೆ ನೀಡಿದರು.

ಗ್ರಾಮದಲ್ಲಿ ಭವ್ಯವಾಗಿ ನಡೆದ ಈ ಮೆರವಣಿಗೆಯಲ್ಲಿ ಅಂಬೇಡ್ಕರ್ ಅವರ ಭಾವಚಿತ್ರವನ್ನು ಅಲಂಕರಿಸಿ, ಘೋಷಣೆಗಳೊಂದಿಗೆ ಸಾರ್ವಜನಿಕರು ಸಂಭ್ರಮದಿಂದ ಪಾಲ್ಗೊಂಡರು. ಅಂಬೇಡ್ಕರ್ ಅವರ ತತ್ವಗಳು ಮತ್ತು ಸಾಮಾಜಿಕ ನ್ಯಾಯದ ಸಂದೇಶಗಳನ್ನು ಈ ಸಂದರ್ಭದಲ್ಲಿ ಸ್ಮರಿಸಲಾಯಿತು.

ಈ ಕಾರ್ಯಕ್ರಮದಲ್ಲಿ ಅಂಬೇಡ್ಕರ್ ಅಭಿಮಾನಿಗಳು, ವಿವಿಧ ದಲಿತ ಸಂಘರ್ಷ ಸಮಿತಿಯ ಮುಖಂಡರು, ಕಾರ್ಯಕರ್ತರು, ಗ್ರಾಮದ ಮುಖಂಡರು ಸೇರಿದಂತೆ ಮಹಿಳೆಯರು ಹಾಗೂ ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಮೆರವಣಿಗೆಯನ್ನು ಯಶಸ್ವಿಗೊಳಿಸಿದರು.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande