ವಸತಿ ಕಾಲೇಜು - ಪ್ರಥಮ ಪಿ.ಯು.ಸಿ ವಿಜ್ಞಾನಕ್ಕೆ ಅರ್ಜಿ ಆಹ್ವಾನ
ಕೊಪ್ಪಳ, 27 ಏಪ್ರಿಲ್ (ಹಿ.ಸ.) : ಆ್ಯಂಕರ್ : ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಕೊಪ್ಪಳ ಜಿಲ್ಲೆಯ ಮೊರಾರ್ಜಿ ದೇಸಾಯಿ ಪದವಿ ಪೂರ್ವ ವಸತಿ ವಿಜ್ಞಾನ ಕಾಲೇಜುಗಳಿಗೆ 2026-27ನೇ ಶೈಕ್ಷಣಿಕ ಸಾಲಿನ ಪ್ರಥಮ ಪಿಯುಸಿ ವಿಜ್ಞಾನ ವಿಭಾಗಕ್ಕೆ ಅರ್ಜಿ ಆಹ್ವಾನಿಸಲ
ವಸತಿ ಕಾಲೇಜು - ಪ್ರಥಮ ಪಿ.ಯು.ಸಿ ವಿಜ್ಞಾನಕ್ಕೆ ಅರ್ಜಿ ಆಹ್ವಾನ


ಕೊಪ್ಪಳ, 27 ಏಪ್ರಿಲ್ (ಹಿ.ಸ.) :

ಆ್ಯಂಕರ್ : ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಕೊಪ್ಪಳ ಜಿಲ್ಲೆಯ ಮೊರಾರ್ಜಿ ದೇಸಾಯಿ ಪದವಿ ಪೂರ್ವ ವಸತಿ ವಿಜ್ಞಾನ ಕಾಲೇಜುಗಳಿಗೆ 2026-27ನೇ ಶೈಕ್ಷಣಿಕ ಸಾಲಿನ ಪ್ರಥಮ ಪಿಯುಸಿ ವಿಜ್ಞಾನ ವಿಭಾಗಕ್ಕೆ ಅರ್ಜಿ ಆಹ್ವಾನಿಸಲಾಗಿದೆ.

ಜಿಲ್ಲೆಯ ಕೊಪ್ಪಳ ತಾಲ್ಲೂಕಿನ ಹಿರೇಸಿಂದೋಗಿಯ ಮೊರಾರ್ಜಿ ದೇಸಾಯಿ ಪದವಿ ಪೂರ್ವ ವಸತಿ ವಿಜ್ಞಾನ ಕಾಲೇಜು, ಗಂಗಾವತಿ ತಾಲ್ಲೂಕಿನ ಸಿದ್ದಾಪೂರ(ಜಮಾಪೂರ) ಮೊರಾರ್ಜಿ ದೇಸಾಯಿ ಪದವಿ ಪೂರ್ವ ವಸತಿ ವಿಜ್ಞಾನ ಕಾಲೇಜು ಹಾಗೂ ಯಲಬುರ್ಗಾ ತಾಲ್ಲೂಕಿನ ತಾಳಕೇರಾ ಮೊರಾರ್ಜಿ ದೇಸಾಯಿ ಪದವಿ ಪೂರ್ವ ವಸತಿ ವಿಜ್ಞಾನ ಕಾಲೇಜು, ಈ ಮೂರು ಕಾಲೇಜುಗಳಿಗೆ 2026-27ನೇ ಶೈಕ್ಷಣಿಕ ಸಾಲಿನ ಪ್ರಥಮ ಪಿಯುಸಿ ವಿಜ್ಞಾನ ವಿಭಾಗದ ಪಿಸಿಎಮ್ಬಿ ಮತ್ತು ಪಿಸಿಎಮ್ಸಿಎಸ್ ಸಂಯೋಜನೆಗಳಿಗೆ 10ನೇ ತರಗತಿಯಲ್ಲಿ ತೇರ್ಗಡೆಗೊಂಡ ವಿದ್ಯಾರ್ಥಿಗಳಿಗೆ ಮೆರಿಟ್ ಹಾಗೂ ಸರ್ಕಾರದ ಮೀಸಲಾತಿ ಆಧಾರದ ಮೇಲೆ ಪ್ರವೇಶ ನೀಡಲಾಗುವುದು. ಆಯ್ಕೆಯಾದ ವಿದ್ಯಾರ್ಥಿಗಳಿಗೆ ಉಚಿತವಾಗಿ ಸಮವಸ್ತ್ರ, ಪಠ್ಯಪುಸ್ತಕ, ಹಾಗೂ ಇನ್ನೀತರ ಸಾಮಾಗ್ರಿಗಳನ್ನು ನೀಡುವುದರ ಜೊತೆಗೆ ಗುಣಮಟ್ಟದ ವಿದ್ಯಾಭ್ಯಾಸ ನೀಡಲಾಗುವುದು.

ಎಲ್ಲಾ ವರ್ಗದ ವಿದ್ಯಾರ್ಥಿಗಳಿಗೆ ಅಂದರೆ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗ ಮತ್ತು ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಪ್ರವೇಶ ಲಭ್ಯವಿದ್ದು, 2026-27ನೇ ಸಾಲೀನ ಪ್ರಥಮ ಪಿಯುಸಿಗೆ ತಲಾ 80 ವಿದ್ಯಾರ್ಥಿಗಳಂತೆ ಒಟ್ಟು 3 ಕಾಲೇಜುಗಳಿಗೆ 240 ವಿದ್ಯಾರ್ಥಿಗಳಿಗೆ ಪ್ರವೇಶ ನೀಡಲಾಗುವುದು.

ಶೇ. 50 ಸ್ಥಾನಗಳು ವಿದ್ಯಾರ್ಥಿನಿಯರಿಗೆ ಮೀಸಲು ವ್ಯವಸ್ಥೆ ಕಲ್ಪಿಸಿದ್ದು, ಅರ್ಹ ಅಭ್ಯಾರ್ಥಿಗಳು, ಪೋಷಕರು ಅರ್ಜಿಗಳನ್ನು ಆನ್ಲೈನ್ನಲ್ಲಿ ಕ್ರೈಸ್ (ಏಖಇIS) ವೆಬ್ಸೈಟ್: http://kreis.karnataka.gov.in ಅಥವಾ https://kreisportal.karnataka.gov.in/ipuappin/forms/ online1 link ಮೂಲಕ ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಸಲು ಏಪ್ರಿಲ್ 29 ಕೊನೆಯ ದಿನವಾಗಿದ್ದು, ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಸಮನ್ವಯಾಧಿಕಾರಿಗಳು ಹಾಗೂ ಹಿರೇಸಿಂದೋಗಿಯ ಮೊರಾರ್ಜಿ ದೇಸಾಯಿ ಪದವಿ ಪೂರ್ವ ವಸತಿ ವಿಜ್ಞಾನ ಕಾಲೇಜಿನ (ಎಸ್ಸಿ-928) ಪ್ರಾಚಾರ್ಯರಾದ ಶರಣಗೌಡ ಮೊ.ಸಂ: 7411999371, ಸಿದ್ದಾಪೂರ(ಜಮಾಪೂರ) ಮೊರಾರ್ಜಿ ದೇಸಾಯಿ ಪದವಿ ಪೂರ್ವ ವಸತಿ ವಿಜ್ಞಾನ ಕಾಲೇಜಿನ (ಎಸ್ಸಿ-373) ಪ್ರಾಚಾರ್ಯರಾದ ಶರಣಪ್ಪ ಮೊ.ಸಂ: 9880089531 ಹಾಗೂ ತಾಳಕೇರಾ ಮೊರಾರ್ಜಿ ದೇಸಾಯಿ ಪದವಿ ಪೂರ್ವ ವಸತಿ ವಿಜ್ಞಾನ ಕಾಲೇಜಿನ (ಬಿಸಿ-537) ಪ್ರಾಚಾರ್ಯರಾದ ಶಿವಪ್ಪ ಹರವಾಳ ಮೊ.ಸಂ: 6362982973, ಇವರನ್ನು ಸಂಪರ್ಕಿಸುವಂತೆ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಕೊಪ್ಪಳ ಜಿಲ್ಲಾ ಸಮನ್ವಯಾಧಿಕಾರಿಗಳು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande