
ಸಂಡೂರು, 27 ಏಪ್ರಿಲ್ (ಹಿ.ಸ.) :
ಆ್ಯಂಕರ್ : ಸಂಡೂರು ತಾಲ್ಲೂಕಿನ ವಡ್ಡಿನಕಟ್ಟಿ ಗ್ರಾಮದಲ್ಲಿರುವ ಪರಿಶಿಷ್ಟ ವರ್ಗದ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆ ಹಾಗೂ ಉನ್ನತೀಕರಿಸಿದ ಪದವಿ ಪೂರ್ವ ವಿಜ್ಞಾನ ಕಾಲೇಜಿನಲ್ಲಿ 2026-27ನೇ ಶೈಕ್ಷಣಿಕ ಸಾಲಿಗೆ ಪ್ರಥಮ ಪಿಯುಸಿ (ವಿಜ್ಞಾನ ವಿಭಾಗ) ಪ್ರವೇಶ ಪಡೆಯಲು ಇಚ್ಛಿಸುವ ವಿದ್ಯಾರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಅಧಿಕೃತ ವೆಬ್ಸೈಟ್ http://kreis.karnataka.gov.in ಗೆ ಭೇಟಿ ನೀಡಬಹುದು. ಅರ್ಜಿ ಸಲ್ಲಿಸಲು ಏ.29 ಕೊನೆಯ ದಿನವಾಗಿದೆ.
ಹೆಚ್ಚಿನ ಮಾಹಿತಿಗಾಗಿ ಆಸಕ್ತ ವಿದ್ಯಾರ್ಥಿಗಳು ಹಾಗೂ ಪೋಷಕರು ಪ್ರಾಂಶುಪಾಲರಾದ ಶಂಕ್ರಪ್ಪ ಚಲವಾದಿ (ಮೊ.9611279510) ಇವರನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಶಾಷು ಮೋದ್ದಿನ್ ಅವರು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್