ತಂಬಾಕು ಸೇವನೆಯ ದುಷ್ಪರಿಣಾಮಗಳ ಬಗ್ಗೆ ಜಾಗೃತಿ ಕಾರ್ಯಕ್ರಮ
ತಂಬಾಕು ಸೇವನೆಯ ದುಷ್ಪರಿಣಾಮಗಳ ಬಗ್ಗೆ ಜಾಗೃತಿ ಕಾರ್ಯಕ್ರಮ
ಕೋಲಾರದ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ (ಮಹಿಳಾ)ಅಂತರಗAಗೆ ರಸ್ತೆ  ತಂಬಾಕು ಸೇವನೆಯಿಂದಾಗುವ ದುಷ್ಪರಿಣಾಮಗಳ ಕುರಿತ ಜಾಗೃತಿ ಕಾರ್ಯಕ್ರಮ ನಡೆಯಿತು.


ಕೋಲಾರ, ೨೭ ಏಪ್ರಿಲ್ (ಹಿ.ಸ) :

ಆ್ಯಂಕರ್ : ತಂಬಾಕು ಉತ್ಪನ್ನಗಳಾದ ಬೀಡಿ , ಸಿಗರೇಟ್, ಗುಟ್ಕಾ , ಖೈನಿ ಮತ್ತು ಜಗಿಯುವ ತಂಬಾಕು ಉತ್ಪನ್ನಗಳ ಸೇವನೆಯು ಯಿಂದ ಕ್ಯಾನ್ಸರ್, ಹೃದಯಾಘಾತ, ಶ್ವಾಸಕೋಶದ ಕಾಯಿಲೆಗಳು ಮತ್ತು ಅಕಾಲಿಕ ಮರಣಕ್ಕೆ ಪ್ರಮುಖ ಕಾರಣವಾಗಿದ್ದು, ವ್ಯಕ್ತಿಯ ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ನಾಶಪಡಿಸುತ್ತದೆ ಇದು ಮನುಷ್ಯನ ಜೀವ ತೆಗೆಯುವ ಕೊಲೆಗಾರ ಎಂದು ತಂಬಾಕು ನಿಯಂತ್ರಣ ಘಟಕದ ಜಿಲ್ಲಾ ಸಲಹೆಗಾರ ಪಿ.ಮಹಮದ್ ಎಚ್ಚರಿಕೆ ನೀಡಿದರು.

ಜಿಲ್ಲಾ ತಂಬಾಕು ನಿಯಂತ್ರಣ ಕೋಶ,ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿ, ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ (ಮಹಿಳಾ)ಅಂತರಗ0ಗೆ ರಸ್ತೆ ಕೋಲಾರ ಇವರ ಸಹಯೋಗದೊಂದಿಗೆ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ ಸಭಾಂಗಣದಲ್ಲಿ ರಾಷ್ಟಿçÃಯ ತಂಬಾಕು ನಿಯಂತ್ರಣ ಕಾರ್ಯಕ್ರಮದಡಿ ಸೋಮವಾರ ನಡೆದ ಕಾಲೇಜು ಜಾಗೃತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.

ಬಾಯಿ, ಗಂಟಲು, ಶ್ವಾಸಕೋಶದ ಕ್ಯಾನ್ಸರ್ ಮಾತ್ರವಲ್ಲದೆ, ದೀರ್ಘಕಾಲದ ಉಸಿರಾಟದ ಸಮಸ್ಯೆಗಳು, ಹಲ್ಲುಗಳ ಹಳದಿ ಬಣ್ಣ, ಚರ್ಮದ ಸುಕ್ಕು ಮತ್ತು ರೋಗನಿರೋಧಕ ಶಕ್ತಿಯ ಕುಸಿತಕ್ಕೆ ಇದು ದಾರಿ ಮಾಡಿಕೊಡುತ್ತದೆ ಧೂಮಪಾನವು ಮನುಷ್ಯನ ಜೀವಿತಾವಧಿಯ ಜೀವನ ತೆಗೆಯುವ ಪೀಡೆಯಾಗಿದೆ. ತಂಬಾಕು ಉತ್ಪನ್ನಗಳ ಚಟಕ್ಕೆ ಒಮ್ಮೆ ಅಂಟಿಕೊ0ಡರೆ ಬಿಡುವುದು ಕಷ್ಟ. ನಿರಂತರ ಸೇವನೆಯಿಂದ ಅನೇಕ ರೋಗಗಳಿಗೆ ತುತ್ತಾಗಬೇಕಾಗುತ್ತದೆ ತಂಬಾಕು ಉತ್ಪನ್ನಗಳ ಸೇವನೆಗಳಿಂದ ಶರೀರ ಬಲಹೀನಗೊಳ್ಳುತ್ತದೆ. ವ್ಯಕ್ತಿಯ ಮೇಲೆ ಭಾವನಾತ್ಮಕ, ದೈಹಿಕ ಮತ್ತು ಮಾನಸಿಕವಾಗಿ ಪ್ರಭಾವ ಬೀರುತ್ತದೆ. ವ್ಯಸನಕ್ಕೆ ಬಲಿಯಾದರೆ ವ್ಯಕ್ತಿ ಹಣ, ಸಮಯ, ಜೀವನವನ್ನೇ ವ್ಯರ್ಥ ಮಾಡಿಕೊಳ್ಳುತ್ತಾನೆ. ನಮಗೆ ದೊರೆತಿರುವ ಜೀವನ ಅಮೂಲ್ಯವಾದ್ದದ್ದು. ಭವಿಷ್ಯವನ್ನು ಉತ್ತಮವಾಗಿ ರೂಪಿಸಿಕೊಳ್ಳಲು ಹದಿಹರೆದವರು ,ಯುವಕರು, ನಾಗರಿಕರು ಮಾದಕ ವ್ಯಸನದ ದಾಸರಾಗದೆ ಸಮಾಜದ ಮುಖ್ಯವಾಹಿನಿಗೆ ಬಂದು ಗೌರವಯುತ ಜೀವನ ನಡೆಸಬೇಕು ಎಂದು ತಿಳಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ಪ್ರಾಂಶುಪಾಲ ಗೋಪಾಲ್, ಮಾತನಾಡಿ, ಧೂಮಪಾನದ ದಾಸರಾಗದಿರಿ, ಅದು ನಿಮ್ಮ ಜೀವನದ ದಿಕ್ಕನ್ನೆ ಬದಲಿಸಿ ಸಾವಿನೆಡೆ ಕರೆದುಕೊಂಡು ಹೋಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಸರ್ಕಾರ ಶಾಲಾ-ಕಾಲೇಜು ಆವರಣದಿಂದ ೨೦೦ ಮೀಟರ್ ವ್ಯಾಪ್ತಿಯಲ್ಲಿ ತಂಬಾಕು ಮಾರಾಟ ನಿಷೇಧ ಹಾಕಿದೆ ಎಂದ ಅವರು, ವಿದ್ಯಾರ್ಥಿ ಸಮುದಾಯ ತಂಬಾಕಿನ ದಾಸರಾಗದಿರಿ, ನಿಮ್ಮ ಅಮೂಲ್ಯ ಜೀವನವನ್ನು ನಿಮ್ಮ ಶೈಕ್ಷಣಿಕ ಗುರಿ ಸಾಧನೆಗೆ ಬಳಸಿಕೊಳ್ಳಿ ಎಂದರು.

ಕಾರ್ಯಕ್ರಮದಲ್ಲಿ ಜಿಲ್ಲಾ ನೌಕರರ ಸಂಘದ ಹಿರಿಯ ಉಪಾಧ್ಯಕ್ಷ ಕೆ.ಟಿ.ಶಿವಕುಮಾರ್,ಸಂಸ್ಥೆಯ ತರಬೇತಿ ಅಧಿಕಾರಿಗಳು, ಮಂಜುನಾಥ್, ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಹಿಂದೂಸ್ತಾನ್ ಸಮಾಚಾರ್ / ಎಸ್.ಚಂದ್ರಶೇಖರ್


 rajesh pande