ಮಲೇರಿಯಾ ತಡೆಗೆ ಸಹಕರಿಸಿ : ಡಾ.ಶಾಕೀರ್
ರಾಯಚೂರು, 27 ಏಪ್ರಿಲ್ (ಹಿ.ಸ.) : ಆ್ಯಂಕರ್ : ಸಾರ್ವಜನಿಕರು ಯಾವುದೇ ಜ್ವರವಿರಲಿ, ಮೊದಲು ರಕ್ತಲೇಪನ ಪರೀಕ್ಷೆ ಮಾಡಿಸಬೇಕು. ಇದರಿಂದ ಮಲೇರಿಯಾ ಸೇರಿದಂತೆ ಸೋಂಕಿತ ಸೊಳ್ಳೆಗಳ ಕಚ್ಚುವಿಕೆಯಿಂದ ಹರಡುವ ರೋಗಗಳ ನಿಯಂತ್ರಣಕ್ಕೆ ಸಾಧ್ಯವಾಗುವುದು ಎಂಬುದನ್ನು ವ್ಯಾಪಕ ಜನಜಾಗೃತಿಗಾಗಿ ಜಿಲ್ಲಾ ಕ್ಷಯರೋಗ ನಿರ್
ಮಲೇರಿಯಾ ತಡೆಗೆ ಸಹಕರಿಸಿ: ಡಾ.ಶಾಕೀರ್


ಮಲೇರಿಯಾ ತಡೆಗೆ ಸಹಕರಿಸಿ: ಡಾ.ಶಾಕೀರ್


ರಾಯಚೂರು, 27 ಏಪ್ರಿಲ್ (ಹಿ.ಸ.) :

ಆ್ಯಂಕರ್ : ಸಾರ್ವಜನಿಕರು ಯಾವುದೇ ಜ್ವರವಿರಲಿ, ಮೊದಲು ರಕ್ತಲೇಪನ ಪರೀಕ್ಷೆ ಮಾಡಿಸಬೇಕು. ಇದರಿಂದ ಮಲೇರಿಯಾ ಸೇರಿದಂತೆ ಸೋಂಕಿತ ಸೊಳ್ಳೆಗಳ ಕಚ್ಚುವಿಕೆಯಿಂದ ಹರಡುವ ರೋಗಗಳ ನಿಯಂತ್ರಣಕ್ಕೆ ಸಾಧ್ಯವಾಗುವುದು ಎಂಬುದನ್ನು ವ್ಯಾಪಕ ಜನಜಾಗೃತಿಗಾಗಿ ಜಿಲ್ಲಾ ಕ್ಷಯರೋಗ ನಿರ್ಮೂಲನಾಧಿಕಾರಿ ಹಾಗೂ ಪಾಲಿಕೆ ಆರೋಗ್ಯಾಧಿಕಾರಿ ಡಾ ಮಹಮ್ಮದ್ ಶಾಕೀರ್ ಮನವಿ ಮಾಡಿದರು.

ನಗರದ ಮಹಾನಗರ ಪಾಲಿಕೆಯ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಮಹಾನಗರ ಪಾಲಿಕೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ತಾಲೂಕಾ ಆರೋಗ್ಯಾಧಿಕಾರಿಗಳ ಕಾರ್ಯಾಲಯ ರಾಯಚೂರು ಇವರ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ವಿಶ್ವ ಮಲೇರಿಯಾ ದಿನದ ಜಾಗೃತಿ ಕಾರ್ಯಕ್ರಮದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ನಗರದ ಎಲ್ಲ ಪ್ರದೇಶಗಳಲ್ಲಿ ಮನೆಯ ಸುತ್ತಲಿನ ಜಾಗಗಳಲ್ಲಿ ಶಾಶ್ವತ ನೀರು ನಿಲ್ಲುವ ಸ್ಥಳಗಳಿದ್ದರೆ. ನೀರು ನಿಲ್ಲದಂತೆ ನಿಗಾ ವಹಿಸಲು ಜನತೆಗೆ ಜಾಗೃತಿ ನೀಡಲು ತಿಳಿಸಿದರು.

ಮುಖ್ಯವಾಗಿ ಮಲೇರಿಯಾ ಹರಡುವ ಅನಾಪೀಲಿಸ್ ಸೊಳ್ಳೆ ಉತ್ಪತ್ತಿ ತಾಣಗಳನ್ನು ಗುರ್ತಿಸುವುದು, ಕೀಟ ನಾಶಕ ಸಿಂಪರಣೆಗೆ ಸಾರ್ವಜನಿಕರ ಸಹಕಾರ ಅಗತ್ಯವಿದೆ ಎಂದು ತಿಳಿಸಿದರು.

ಜಿಲ್ಲಾ ಡಿಪಿಡಿಓ ಡಾ ಚಂದ್ರಶೇಖರಯ್ಯ ಸ್ವಾಮಿ ಅವರು ಮಾತನಾಡಿ, ಮಲೇರಿಯಾ ಜ್ವರವು ಪ್ಲಾಸ್ಮೋಡಿಯಂ ಎಂಬ ಪರಾವಲಂಭಿ ಸೂಕ್ಷ್ಮಾಣುವಿನಿಂದ ಉಂಟಾಗಬಹುದಾಗಿದ್ದು, ಹೆಣ್ಣು ಅನಾಫಿಲೀಸ್ ಸೊಳ್ಳೆಯ ಕಚ್ಚುವಿಕೆಯಿಂದ ಒಬ್ಬರಿಂದ ಒಬ್ಬರಿಗೆ ಹರಡುತ್ತದೆ ಎಂದರು.

ಮಲೇರಿಯಾ ರೋಗ ಲಕ್ಷಣಗಳು: ಚಳಿ, ನಡುಕ, ಬಿಟ್ಟು ಬಿಟ್ಟು ಜ್ವರ ಬರುವುದು, ವಾಕರಿಕೆ, ಮೈ ಬೆವರುವುದು ಲಕ್ಷಣಗಳಾಗಿವೆ. ಈ ಲಕ್ಷಣಗಳು ಕಂಡು ಬಂದಲ್ಲಿ ಮಲೇರಿಯಾ ಜ್ವರ ಇರಬಹುದು ಎಂದು ಭಾವಿಸಿ ಹತ್ತಿರದ ಸರ್ಕಾರಿ ಆಸ್ಪತ್ರೆಯಲ್ಲಿ ರಕ್ತ ಲೆಪನ ಪರೀಕ್ಷೆಗೆ ಒಳಪಟ್ಟು ಖಚಿತಪಟ್ಟಲ್ಲಿ ಸೂಕ್ತ ಉಚಿತ ಚಿಕಿತ್ಸೆ ಪಡೆದು ಗುಣ ಹೊಂದಬಹುದಾಗಿದೆ ಎಂದು ಹೇಳಿದರು.

ನಿಯಂತ್ರಣಕ್ಕೆ ಸಹಕಾರ : ಮಲೇರಿಯಾ ಪ್ರಕರಣಗಳ ತಡೆಗೆ ಮನೆಯ ಒಳಭಾಗ ಆರೋಗ್ಯ ಇಲಾಖೆಯಿಂದ ಕೈಗೊಳ್ಳುವ ಕೀಟನಾಶಕ ಸಿಂಪರಣೆಗೆ ಸಾರ್ವಜನಿಕರು ಸಹಕರಿಸಬೇಕು. ಸ್ವಯಂ ರಕ್ಷಣಾ ಕ್ರಮಗಳಾದ ಮಲಗುವಾಗ ಸೊಳ್ಳೆ ಪರದೆ ಬಳಕೆ ಮಾಡಬೇಕು. ಕಿಟಕಿಗಳಿಗೆ ಸೊಳ್ಳೆಗಳು ನುಸುಳದಂತೆ ಜಾಲರಿ ಅಳವಡಿಸುವುದು. ಆರೋಗ್ಯ ಇಲಾಖೆಯಿಂದ ನೀಡಲ್ಪಡುವ ಲಾರ್ವಹಾರಿ ಗಪ್ಪಿ ಮತ್ತು ಗಂಬೂಷಿಯಾ ಮೀನುಗಳನ್ನು ಶಾಶ್ವತವಾಗಿ ನೀರು ನಿಲ್ಲುವ ಸ್ಥಳಗಳಲ್ಲಿ ಬಿಡಲು ಉಚಿತವಾಗಿ ಪಡೆಯಬಹುದಾಗಿದೆ ಎಂದರು.

ಇದೇ ಸಂದರ್ಭದಲ್ಲಿ ಪಾಲಿಕೆಯ ಪರಿಸರ ಅಭಿಯಂತರರು ಜಯಪಾಲ ರೆಡ್ಡಿ, ಬಿಹೆಚ್ಇಓ ಸರೋಜಾ ಕೆ, ಎಮ್ಟಿಎಸ್ ಸಂಧ್ಯಾ ಸೇರಿದಂತೆ ಮಹಾನಗರ ಪಾಲಿಕೆ ಹಾಗೂ ಆರೋಗ್ಯ ಇಲಾಖೆಯ ಸಿಬ್ಬಂದಿ ಇದ್ದರು.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande