
ಬೆಂಗಳೂರು, 27 ಏಪ್ರಿಲ್ (ಹಿ.ಸ.) :
ಆ್ಯಂಕರ್ : ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಹತ್ವದ ಕಾರ್ಯಾಚರಣೆ ನಡೆಸಿದ ಕಸ್ಟಮ್ಸ್ ಅಧಿಕಾರಿಗಳು, ಬ್ಯಾಂಕಾಕ್ನಿಂದ ಆಗಮಿಸುತ್ತಿದ್ದ ಇಬ್ಬರು ಪ್ರಯಾಣಿಕರಿಂದ ಭಾರೀ ಪ್ರಮಾಣದ ಮಾದಕ ವಸ್ತುವನ್ನು ವಶಪಡಿಸಿಕೊಂಡಿದ್ದಾರೆ.
ಪರಿಶೀಲನೆಯ ವೇಳೆ, ಪ್ರಯಾಣಿಕರ ಚೆಕ್-ಇನ್ ಬ್ಯಾಗೇಜ್ನಲ್ಲಿ ಚಾಕಚಕ್ಯದಿಂದ ಬಚ್ಚಿಟ್ಟಿದ್ದ ಸುಮಾರು 19.57 ಕೆಜಿ ಹೈಡ್ರೋಪೋನಿಕ್ ಗಾಂಜಾವನ್ನು ಪತ್ತೆಹಚ್ಚಲಾಗಿದೆ. ವಶಪಡಿಸಿಕೊಂಡ ಮಾದಕ ವಸ್ತುವಿನ ಮೌಲ್ಯವು ಸುಮಾರು ₹6.85 ಕೋಟಿ ಎಂದು ಅಂದಾಜಿಸಲಾಗಿದೆ.
ಈ ಸಂಬಂಧ ಇಬ್ಬರು ಆರೋಪಿಗಳನ್ನು ಎನ್ ಡಿ ಪಿ ಎಸ್ ಅಡಿಯಲ್ಲಿ ಬಂಧಿಸಲಾಗಿದೆ ಎಂದು ಕಸ್ಟಮ್ಸ್ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa