ಸಿಪಿಐ ವಿರುದ್ಧ ಕ್ರಮಕ್ಕೆ ಕರವೇ ಆಗ್ರಹ : ಸುಳ್ಳು ಪ್ರಕರಣ ಖಂಡನೆ, ಅಮಾನತಿಗೆ ಒತ್ತಾಯ
ಅಮಾನತು
ಕರವೆ


ವಿಜಯಪುರ, 27 ಏಪ್ರಿಲ್ (ಹಿ.ಸ.) :

ಆ್ಯಂಕರ್ : ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ಸಿಪಿಐ ಗುರುಶಾಂತ್ ದಾಶ್ಯಾಳ ಅವರು ರಾಜಕಾರಣಿಗಳ ಕೈಗೊಂಬೆಯಾಗಿ ವರ್ತಿಸಿ, ಲಂಚದ ಆಸೆಯಿಂದ ಕರವೇ ನಾಯಕ ಅಶೋಕ್ ಹಾರಿವಾಳ ಅವರ ಮೇಲೆ ಸುಳ್ಳು ಪ್ರಕರಣ ದಾಖಲಿಸಿರುವುದನ್ನು ಖಂಡಿಸಿ, ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ಇಂದು ಜಿಲ್ಲಾಧಿಕಾರಿಗಳು ಹಾಗೂ ಎಸ್ಪಿ ಅವರಿಗೆ ಮನವಿ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಕರವೇ ಮುಖಂಡರು ಮಾತನಾಡಿ, ರಾಜಕೀಯ ಒತ್ತಡಕ್ಕೆ ಮಣಿದು ಪ್ರಾಮಾಣಿಕ ಹೋರಾಟಗಾರರ ಮೇಲೆ ಪ್ರಕರಣ ದಾಖಲಿಸುವುದು ಹಾಗೂ ಅಕ್ರಮ ದಂಧೆಗಳಿಗೆ ಸಾಥ್ ನೀಡುತ್ತಿರುವ ಸಿಪಿಐ ಅವರನ್ನು ಕೂಡಲೇ ಅಮಾನತುಗೊಳಿಸಬೇಕು ಎಂದು ಆಗ್ರಹಿಸಿದರು.

ಅಮಾನತು ಕ್ರಮ ಕೈಗೊಳ್ಳದಿದ್ದರೆ ಮುಂದಿನ ದಿನಗಳಲ್ಲಿ ಧರಣಿ ಸತ್ಯಾಗ್ರಹ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.

ಈ ಹೋರಾಟದಲ್ಲಿ ಕರವೇ ಸಂಘಟನೆಯ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಭಾಗವಹಿಸಿದ್ದರು.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande