
ಗಂಗಾವತಿ, 27 ಏಪ್ರಿಲ್ (ಹಿ.ಸ.) :
ಆ್ಯಂಕರ್ : ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ ಮೈಸೂರು ಇವರ ಸಂಯೋಗದಲ್ಲಿ ಶ್ರೀ ಕೊಟ್ಟೂರು ಬಸವೇಶ್ವರ ದೇವಸ್ಥಾನ ಸಮಿತಿ, ಬಸವ ಜಯಂತಿ ಉತ್ಸವ ಸಮಿತಿ ಹಾಗೂ ಕೊಪ್ಪಳ ಜಿಲ್ಲಾ ಶರಣ ಸಾಹಿತ್ಯ ಪರಿಷತ್ ಮೇ 1ರಂದು ಕಾರ್ಮಿಕ ದಿನಾಚರಣೆಯ ನಿಮಿತ್ಯ ಕಾಯಕ ದಿನಾಚರಣೆ, ಕಾಯಕಶೀಲ ಪ್ರಶಸ್ತಿ ಪ್ರಧಾನ ಸಮಾರಂಭ ಕಾರ್ಯಕ್ರಮವನ್ನು ಶ್ರೀ ಕೊಟ್ಟೂರು ಬಸವೇಶ್ವರ ವೇದಿಕೆಯಲ್ಲಿ ಹಮ್ಮಿಕೊಂಡಿದ್ದಾರೆ.
ಈ ಸಮಾರಂಭದಲ್ಲಿ ಗಂಗಾವತಿ ನಿವಾಸಿಯಾದ ಖಾಜಾಬಿ ಅಲ್ಲಾಸಾಬ್ ಇವರು ಸುಮಾರು 40 ವರ್ಷಗಳಿಂದ ತಾಲೂಕ್ ಪಂಚಾಯ್ತಿ ಹಾಗೂ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಭವನಕ್ಕೆ ತಮ್ಮದೇ ಆದಂತ ಸೇವೆ ಸಲ್ಲಿಸಿದ್ದಾರೆ. ಇವರ ನಿಷ್ಠೆ, ಪ್ರಾಮಾಣಿಕತೆ ಎಲ್ಲವೂ ಆದರ್ಶ ಹಾಗೂ ಅನುಕರಣನೀಯ. ಗುರುತಿಸಿ, ಆ ಪ್ರಯುಕ್ತ ಶರಣ ಸಾಹಿತ್ಯ ಪರಿಷತ್ ವತಿಯಿಂದ 2026ನೇ ಸಾಲಿನ ಕಾಯಕಶೀಲ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಗುತ್ತಿದೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್