ಅಮ್ಮಿನಭಾವಿ ಗ್ರಾಮದಲ್ಲಿ ನೂತನ ಸಮುದಾಯ ಆರೋಗ್ಯ ಕೇಂದ್ರ ಲೋಕಾರ್ಪಣೆ
ಧಾರವಾಡ, 27 ಏಪ್ರಿಲ್ (ಹಿ.ಸ.) : ಆ್ಯಂಕರ್ : ಧಾರವಾಡ ಜಿಲ್ಲೆ ಅಮ್ಮಿನಭಾವಿ ಗ್ರಾಮದಲ್ಲಿ ನೂತನ ಸಮುದಾಯ ಆರೋಗ್ಯ ಕೇಂದ್ರದ ಕಟ್ಟಡವನ್ನು ಇಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಲೋಕಾರ್ಪಣೆ ಮಾಡಿದರು. ಈ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲ
Inauguration


ಧಾರವಾಡ, 27 ಏಪ್ರಿಲ್ (ಹಿ.ಸ.) :

ಆ್ಯಂಕರ್ : ಧಾರವಾಡ ಜಿಲ್ಲೆ ಅಮ್ಮಿನಭಾವಿ ಗ್ರಾಮದಲ್ಲಿ ನೂತನ ಸಮುದಾಯ ಆರೋಗ್ಯ ಕೇಂದ್ರದ ಕಟ್ಟಡವನ್ನು ಇಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಲೋಕಾರ್ಪಣೆ ಮಾಡಿದರು.

ಈ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಉಪಸ್ಥಿತರಿದ್ದು, ಸಂಯುಕ್ತವಾಗಿ ಉದ್ಘಾಟನಾ ಸಮಾರಂಭಕ್ಕೆ ಚಾಲನೆ ನೀಡಿದರು.

ಕಾರ್ಯಕ್ರಮದಲ್ಲಿ ಮಾತನಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು, ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಪುನೀತ್ ರಾಜ್ಕುಮಾರ್ ಹೃದಯ ಜ್ಯೋತಿ ಯೋಜನೆ ಕುರಿತು ವಿವರಿಸಿದರು. ಹೃದಯಾಘಾತ ಸಂಭವಿಸಿದ ತಕ್ಷಣ ನೀಡಬೇಕಾಗುವ ದುಬಾರಿ ಜೀವ ರಕ್ಷಕ ‘ಟೆನೆಕ್ಟೆಪ್ಲಸ್’ ಇಂಜೆಕ್ಷನ್ ಅನ್ನು ಈ ಯೋಜನೆಯಡಿ ಉಚಿತವಾಗಿ ನೀಡಲಾಗುತ್ತಿದೆ ಎಂದು ತಿಳಿಸಿದರು.

ಈ ಯೋಜನೆಯಡಿ ಇದುವರೆಗೆ 3000ಕ್ಕೂ ಹೆಚ್ಚು ಜನರ ಜೀವ ಉಳಿಸಲಾಗಿದೆ ಎಂದು ಹೇಳಿದ ಅವರು, ಆರೋಗ್ಯ ಸಚಿವರಾಗಿ ಈ ಯೋಜನೆ ಬಗ್ಗೆ ಹೆಮ್ಮೆ ವ್ಯಕ್ತಪಡಿಸಿದರು. ಗ್ರಾಮೀಣ ಭಾಗಗಳಲ್ಲಿ ಹೃದಯಾಘಾತಕ್ಕೊಳಗಾದವರಿಗೆ ತಾಲ್ಲೂಕು ಮಟ್ಟದಲ್ಲೇ ತಕ್ಷಣ ಚಿಕಿತ್ಸೆ ದೊರಕುವಂತೆ ಮಾಡುವುದೇ ಈ ಯೋಜನೆಯ ಪ್ರಮುಖ ಉದ್ದೇಶವಾಗಿದೆ ಎಂದರು.

ಗ್ರಾಮೀಣ ಪ್ರದೇಶಗಳ ಪ್ರತಿಯೊಬ್ಬ ನಾಗರಿಕನಿಗೂ ಗುಣಮಟ್ಟದ ಆರೋಗ್ಯ ಸೇವೆ ತಲುಪಿಸಲು ಸರ್ಕಾರ ಬದ್ಧವಾಗಿದೆ ಎಂದು ಅವರು ಭರವಸೆ ನೀಡಿದರು.

ಕಾರ್ಯಕ್ರಮದಲ್ಲಿ ಕ್ಷೇತ್ರದ ಶಾಸಕರು, ಸ್ಥಳೀಯ ಮುಖಂಡರು ಹಾಗೂ ಆರೋಗ್ಯ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande