ಜಮಖಂಡಿ ತಹಶೀಲ್ದಾರ್ ಅನೀಲ್ ಬಡಿಗೇರ್ ದಿಢೀರ್ ದಾಳಿ, 40 ಮೂಟೆ ಪಡಿತರ ಅಕ್ಕಿ ಜಪ್ತಿ
ಬಾಗಲಕೋಟೆ, 27 ಏಪ್ರಿಲ್ (ಹಿ.ಸ.) : ಆ್ಯಂಕರ್ : ಬಾಗಲಕೋಟೆ ಜಿಲ್ಲೆಯ ಜಮಖಂಡಿ ನಗರದಲ್ಲಿ ಅಕ್ರಮವಾಗಿ ಪಡಿತರ ಅಕ್ಕಿ ಸಂಗ್ರಹಿಸಿ ಮಾರಾಟ ಮಾಡಲು ಯತ್ನಿಸುತ್ತಿದ್ದ ಖದೀಮರ ಪ್ಲಾನ್ ತಹಶೀಲ್ದಾರ್ ಅವರ ದಿಢೀರ್ ದಾಳಿಯಿಂದ ಉಲ್ಟಾ ಹೊಡೆದ ಘಟನೆ ಬೆಳಕಿಗೆ ಬಂದಿದೆ. ತಹಶೀಲ್ದಾರ್ ಅನೀಲ್ ಬಡಿಗೇರ್ ಅವರ ನೇತೃತ್
ಅಕ್ಕಿ


ಬಾಗಲಕೋಟೆ, 27 ಏಪ್ರಿಲ್ (ಹಿ.ಸ.) :

ಆ್ಯಂಕರ್ : ಬಾಗಲಕೋಟೆ ಜಿಲ್ಲೆಯ

ಜಮಖಂಡಿ ನಗರದಲ್ಲಿ ಅಕ್ರಮವಾಗಿ ಪಡಿತರ ಅಕ್ಕಿ ಸಂಗ್ರಹಿಸಿ ಮಾರಾಟ ಮಾಡಲು ಯತ್ನಿಸುತ್ತಿದ್ದ ಖದೀಮರ ಪ್ಲಾನ್ ತಹಶೀಲ್ದಾರ್ ಅವರ ದಿಢೀರ್ ದಾಳಿಯಿಂದ ಉಲ್ಟಾ ಹೊಡೆದ ಘಟನೆ ಬೆಳಕಿಗೆ ಬಂದಿದೆ.

ತಹಶೀಲ್ದಾರ್ ಅನೀಲ್ ಬಡಿಗೇರ್ ಅವರ ನೇತೃತ್ವದಲ್ಲಿ ನಡೆದ ದಾಳಿಯಲ್ಲಿ ನಗರದ ಒಂದು ಮನೆಯಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಸುಮಾರು 40 ಮೂಟೆಗಳ ಪಡಿತರ ಅಕ್ಕಿಯನ್ನು ಅಧಿಕಾರಿಗಳು ಜಪ್ತಿ ಮಾಡಿದ್ದಾರೆ. ಸಾರ್ವಜನಿಕ ವಿತರಣಾ ವ್ಯವಸ್ಥೆ (ಪಿಡಿಎಸ್) ಅಡಿಯಲ್ಲಿ ಬಡವರಿಗೆ ವಿತರಿಸಬೇಕಾದ ಅಕ್ಕಿಯನ್ನು ಕಳ್ಳಬಜಾರ್ಗೆ ಹರಿಸುವ ಯತ್ನ ನಡೆಯುತ್ತಿದೆ ಎಂಬ ಮಾಹಿತಿ ದೊರೆತ ಹಿನ್ನೆಲೆಯಲ್ಲಿ ಈ ಕಾರ್ಯಾಚರಣೆ ಕೈಗೊಳ್ಳಲಾಗಿದೆ ಎಂದು ತಿಳಿದು ಬಂದಿದೆ.

ದಾಳಿ ವೇಳೆ ಮನೆಯೊಳಗೆ ಅಕ್ಕಿ ಸಂಗ್ರಹಿಸಿದ್ದ ರೀತಿ, ಅದರ ಪ್ಯಾಕಿಂಗ್ ಹಾಗೂ ಸಾಗಣೆ ವಿಧಾನಗಳನ್ನು ಪರಿಶೀಲಿಸಿದ ಅಧಿಕಾರಿಗಳು, ಇದು ಸಂಘಟಿತ ಅಕ್ರಮ ಜಾಲವಾಗಿರುವ ಸಾಧ್ಯತೆ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದಾರೆ. ಸ್ಥಳಕ್ಕೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಅಧಿಕಾರಿಗಳು ಕೂಡ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ. ಅಕ್ರಮ ಪಡಿತರ ವಸ್ತುಗಳ ಸಂಗ್ರಹ ಮತ್ತು ಮಾರಾಟಕ್ಕೆ ತಡೆ ನೀಡಲು ಅಧಿಕಾರಿಗಳು ಕಟ್ಟುನಿಟ್ಟಿನ ಕ್ರಮ ಮುಂದುವರಿಸಲಿದ್ದಾರೆ ಎಂದು ತಿಳಿಸಿದರು.

ತಹಶೀಲ್ದಾರ್ ಅನೀಲ್ ಬಡಿಗೇರ್ ಅವರು ಮಾತನಾಡಿ, “ಬಡವರಿಗೆ ನೀಡಬೇಕಾದ ಪಡಿತರವನ್ನು ಅಕ್ರಮವಾಗಿ ಸಂಗ್ರಹಿಸಿ ಮಾರಾಟ ಮಾಡುವವರ ವಿರುದ್ಧ ಯಾವುದೇ ರೀತಿಯ ಸಡಿಲಿಕೆ ಇರದು. ಇಂತಹ ಪ್ರಕರಣಗಳು ಕಂಡುಬಂದರೆ ತಕ್ಷಣ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ” ಎಂದು ಎಚ್ಚರಿಕೆ ನೀಡಿದರು.

ಈ ದಿಢೀರ್ ದಾಳಿ ನಗರದಲ್ಲಿ ಚರ್ಚೆಗೆ ಗ್ರಾಸವಾಗಿದ್ದು, ಸಾರ್ವಜನಿಕ ವಿತರಣಾ ವ್ಯವಸ್ಥೆಯ ಪಾರದರ್ಶಕತೆ ಮತ್ತು ಜವಾಬ್ದಾರಿತ್ವದ ಕುರಿತು ಜನರಲ್ಲಿ ಜಾಗೃತಿ ಮೂಡಿಸಿದೆ. ಸ್ಥಳೀಯರು ಅಧಿಕಾರಿಗಳ ಕ್ರಮವನ್ನು ಸ್ವಾಗತಿಸಿದ್ದು, ಇಂತಹ ದಾಳಿಗಳು ಮುಂದುವರಿಯಬೇಕು ಎಂದು ಅಭಿಪ್ರಾಯಪಟ್ಟಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande