
ಗಂಗಾವತಿ, 27 ಏಪ್ರಿಲ್ (ಹಿ.ಸ.) :
ಆ್ಯಂಕರ್ : ಸಮಾಜ ಕಲ್ಯಾಣ ಇಲಾಖೆಯ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಗಂಗಾವತಿಯ ಡಾ. ಬಿ.ಆರ್ ಅಂಬೇಡ್ಕರ್ ಸರ್ಕಾರಿ ಮೆಟ್ರಿಕ್ ನಂತರದ ಬಾಲಕರ ವಸತಿ ನಿಲಯದ ನಿರ್ವಹಣೆಗಾಗಿ ಗಂಗಾವತಿ ನಗರ ವ್ಯಾಪ್ತಿಯಲ್ಲಿ 200 ವಿದ್ಯಾರ್ಥಿಗಳು ವಾಸ್ತವ್ಯವಿರಲು ಒಂದು ಸುಸಜ್ಜಿತವಾದ ಕಟ್ಟಡವನ್ನು ಮಾಹೆಯಾನ ಬಾಡಿಗೆ ರೂಪದಲ್ಲಿ ಪಡೆಯಲು ಅವಶ್ಯಕತೆ ಇದ್ದು, ಆಸ್ತಕ ಮಾಲೀಕರಿಗೆ ಆಹ್ವಾನಿಸಲಾಗಿದೆ.
ಆಸಕ್ತ ಕಟ್ಟಡದ ಮಾಲೀಕರು ಸಹಾಯಕ ನಿರ್ದೇಶಕರ ಕಛೇರಿ, ಸಮಾಜ ಕಲ್ಯಾಣ ಇಲಾಖೆ ಗಂಗಾವತಿ ಮೊ.ಸಂ: 7022694905 ಗೆ ಸಂಪರ್ಕಿಸಬೇಕೆಂದು ಗಂಗಾವತಿ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್