ಎಸ್ಎಸ್ಎಲ್ಸಿಯಲ್ಲಿ ಪ್ರಥಮ ಸ್ಥಾನ : ವಿದ್ಯಾರ್ಥಿನಿ ಉಮೇರಾಗೆ ಡಿಸಿ ಸನ್ಮಾನ
ವಿಜಯಪುರ, 27 ಏಪ್ರಿಲ್ (ಹಿ.ಸ.) : ಆ್ಯಂಕರ್ : ಪ್ರಸಕ್ತ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ವಿಜಯಪುರ ಜಿಲ್ಲೆಯ ಸಿಂದಗಿ ತಾಲ್ಲೂಕಿಗೆ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿನಿ ಉಮೇರಾ ಉತ್ತಾದ ಅವರಿಗೆ ಜಿಲ್ಲಾಧಿಕಾರಿಗಳು ಸನ್ಮಾನಿಸಿ ಅಭಿನಂದಿಸಿದರು. ಸಿಂದಗಿ ತಾಲ್ಲೂಕಿನ ಬಳಗಾನೂರ ಗ್ರಾಮದ ಸರ್ಕಾರಿ ಶಾ
ಸನ್ಮಾನ


ವಿಜಯಪುರ, 27 ಏಪ್ರಿಲ್ (ಹಿ.ಸ.) :

ಆ್ಯಂಕರ್ : ಪ್ರಸಕ್ತ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ವಿಜಯಪುರ ಜಿಲ್ಲೆಯ ಸಿಂದಗಿ ತಾಲ್ಲೂಕಿಗೆ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿನಿ ಉಮೇರಾ ಉತ್ತಾದ ಅವರಿಗೆ ಜಿಲ್ಲಾಧಿಕಾರಿಗಳು ಸನ್ಮಾನಿಸಿ ಅಭಿನಂದಿಸಿದರು.

ಸಿಂದಗಿ ತಾಲ್ಲೂಕಿನ ಬಳಗಾನೂರ ಗ್ರಾಮದ ಸರ್ಕಾರಿ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ಉಮೇರಾ ಉತ್ತಾದ ಅವರು ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಒಟ್ಟು 625 ಅಂಕಗಳಲ್ಲಿ 620 ಅಂಕಗಳನ್ನು ಪಡೆದು ಅತ್ಯುತ್ತಮ ಸಾಧನೆ ಮೆರೆದಿದ್ದಾರೆ. ಅವರ ಈ ಸಾಧನೆಗೆ ಜಿಲ್ಲಾಧಿಕಾರಿಗಳು ಮೆಚ್ಚುಗೆ ವ್ಯಕ್ತಪಡಿಸಿ, ಮುಂದಿನ ದಿನಗಳಲ್ಲಿ ಇನ್ನಷ್ಟು ಉನ್ನತ ಗುರಿಗಳನ್ನು ಸಾಧಿಸಲು ಪ್ರೋತ್ಸಾಹಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾಧಿಕಾರಿಗಳು, ಗ್ರಾಮೀಣ ಪ್ರದೇಶದ ವಿದ್ಯಾರ್ಥಿನಿಯರು ಸಹ ಕಠಿಣ ಪರಿಶ್ರಮ ಮತ್ತು ಸಂಕಲ್ಪದ ಮೂಲಕ ಉನ್ನತ ಸಾಧನೆ ಮಾಡಬಹುದೆಂಬುದಕ್ಕೆ ಉಮೇರಾ ಉತ್ತಾದ ಅವರೇ ಉತ್ತಮ ಉದಾಹರಣೆ ಎಂದು ಹೇಳಿದರು.

ಸಾಧನೆ ಮಾಡಿದ ವಿದ್ಯಾರ್ಥಿನಿಯ ಈ ಯಶಸ್ಸಿಗೆ ಶಾಲೆಯ ಶಿಕ್ಷಕರು, ಪಾಲಕರು ಹಾಗೂ ಗ್ರಾಮಸ್ಥರು ಹರ್ಷ ವ್ಯಕ್ತಪಡಿಸಿದ್ದು, ಮುಂದಿನ ಶಿಕ್ಷಣ ಜೀವನದಲ್ಲಿ ಇನ್ನಷ್ಟು ಸಾಧನೆ ಮಾಡಲಿ ಎಂದು ಶುಭ ಹಾರೈಸಿದರು.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande