
ಬಾಗಲಕೋಟೆ, 27 ಏಪ್ರಿಲ್ (ಹಿ.ಸ.) :
ಆ್ಯಂಕರ್ : ಬಾಗಲಕೋಟೆ ಜಿಲ್ಲೆಯ
ಕಮತಗಿ ವಿದ್ಯಾವರ್ಧಕ ಸಂಘದ ಗ್ರಾಮೀಣ ಕಲಾ ಹಾಗೂ ವಾಣಿಜ್ಯ ಮಹಾವಿದ್ಯಾಲಯ ವತಿಯಿಂದ ಆಯೋಜಿಸಿರುವ ಕ್ರೀಡೆ, ಸಾಂಸ್ಕೃತಿಕ ಹಾಗೂ ಎನ್ಎಸ್ಎಸ್ ಚಟುವಟಿಕೆಗಳ ಸಮಾರೋಪ ಸಮಾರಂಭ ನಾಳೆ (ಏ.28) ಮಂಗಳವಾರ ಬೆಳಿಗ್ಗೆ 10.30ಕ್ಕೆ ಮಹಾವಿದ್ಯಾಲಯದ ಸಭಾಂಗಣದಲ್ಲಿ ಜರುಗಲಿದೆ.
ಕಾರ್ಯಕ್ರಮದ ದಿವ್ಯಸಾನಿಧ್ಯವನ್ನು ಶ್ರೀ ಹುಚ್ಚೇಶ್ವರ ಮಹಾಸ್ವಾಮಿಗಳು ವಹಿಸಲಿದ್ದು, ಅಧ್ಯಕ್ಷತೆಯನ್ನು ವಿದ್ಯಾಧರ ಆರ್ ಮಳ್ಳಿ ವಹಿಸುವರು. ಮುಖ್ಯ ಅತಿಥಿಯಾಗಿ ಬಾಗಲಕೋಟ ವಿಶ್ವವಿದ್ಯಾಲಯ ಜಮಖಂಡಿ ಕುಲಸಚಿವರಾದ ಸೋಮಲಿಂಗ ಗೆಣ್ಣೂರ ಭಾಗವಹಿಸಲಿದ್ದಾರೆ.
ಇನ್ನೂ ಅತಿಥಿಗಳಾಗಿ ಗಂಗಪ್ಪ ಭೂತಲ ಸೇರಿದಂತೆ ಆಡಳಿತ ಮಂಡಳಿಯ ಸದಸ್ಯರು, ಆಡಳಿತಾಧಿಕಾರಿಗಳು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ, ವಿದ್ಯಾರ್ಥಿಗಳು ಉಪಸ್ಥಿತರಿರಲಿದ್ದಾರೆ ಎಂದು ಪ್ರಾಚಾರ್ಯರಾದ ಡಾ. ಪಿ. ಎಂ. ಗುರುವಿನಮಠ ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / jyothi deshpande