ವಿದ್ಯಾರ್ಥಿಗಳು ನಿರಂತರ ಅಧ್ಯಯನಶೀಲರಾಗಬೇಕು : ಜಿಲ್ಲಾಧಿಕಾರಿ ನಿತೀಶ್ ಕೆ.
ರಾಯಚೂರು, 27 ಏಪ್ರಿಲ್ (ಹಿ.ಸ.) : ಆ್ಯಂಕರ್ : ವಿದ್ಯಾರ್ಥಿಗಳು ನಿರಂತರ ಅಧ್ಯಯನಶೀಲರಾದಾಗ ಮಾತ್ರ ಪರೀಕ್ಷೆಯಲ್ಲಿ ಉತ್ತಮ ಅಂಕ ಪಡೆದು ಉನ್ನತ ಜೀವನ ನಡೆಸಲು ಸಹಕಾರಿಯಾಗುತ್ತದೆ ಎಂದು ಜಿಲ್ಲೆಯ ಜಿಲ್ಲಾಧಿಕಾರಿಗಳಾದ ನಿತೀಶ್ ಕೆ. ಅವರು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು. ಸೋಮವಾರ ದಂದು ನಗರದ ನೂತನ ಜ
ವಿದ್ಯಾರ್ಥಿಗಳು ನಿರಂತರ ಅಧ್ಯಯನಶೀಲರಾಗಬೇಕು: ಜಿಲ್ಲಾಧಿಕಾರಿ ನಿತೀಶ್ ಕೆ.


ವಿದ್ಯಾರ್ಥಿಗಳು ನಿರಂತರ ಅಧ್ಯಯನಶೀಲರಾಗಬೇಕು: ಜಿಲ್ಲಾಧಿಕಾರಿ ನಿತೀಶ್ ಕೆ.


ವಿದ್ಯಾರ್ಥಿಗಳು ನಿರಂತರ ಅಧ್ಯಯನಶೀಲರಾಗಬೇಕು: ಜಿಲ್ಲಾಧಿಕಾರಿ ನಿತೀಶ್ ಕೆ.


ವಿದ್ಯಾರ್ಥಿಗಳು ನಿರಂತರ ಅಧ್ಯಯನಶೀಲರಾಗಬೇಕು: ಜಿಲ್ಲಾಧಿಕಾರಿ ನಿತೀಶ್ ಕೆ.


ವಿದ್ಯಾರ್ಥಿಗಳು ನಿರಂತರ ಅಧ್ಯಯನಶೀಲರಾಗಬೇಕು: ಜಿಲ್ಲಾಧಿಕಾರಿ ನಿತೀಶ್ ಕೆ.


ವಿದ್ಯಾರ್ಥಿಗಳು ನಿರಂತರ ಅಧ್ಯಯನಶೀಲರಾಗಬೇಕು: ಜಿಲ್ಲಾಧಿಕಾರಿ ನಿತೀಶ್ ಕೆ.


ವಿದ್ಯಾರ್ಥಿಗಳು ನಿರಂತರ ಅಧ್ಯಯನಶೀಲರಾಗಬೇಕು: ಜಿಲ್ಲಾಧಿಕಾರಿ ನಿತೀಶ್ ಕೆ.


ವಿದ್ಯಾರ್ಥಿಗಳು ನಿರಂತರ ಅಧ್ಯಯನಶೀಲರಾಗಬೇಕು: ಜಿಲ್ಲಾಧಿಕಾರಿ ನಿತೀಶ್ ಕೆ.


ರಾಯಚೂರು, 27 ಏಪ್ರಿಲ್ (ಹಿ.ಸ.) :

ಆ್ಯಂಕರ್ : ವಿದ್ಯಾರ್ಥಿಗಳು ನಿರಂತರ ಅಧ್ಯಯನಶೀಲರಾದಾಗ ಮಾತ್ರ ಪರೀಕ್ಷೆಯಲ್ಲಿ ಉತ್ತಮ ಅಂಕ ಪಡೆದು ಉನ್ನತ ಜೀವನ ನಡೆಸಲು ಸಹಕಾರಿಯಾಗುತ್ತದೆ ಎಂದು ಜಿಲ್ಲೆಯ ಜಿಲ್ಲಾಧಿಕಾರಿಗಳಾದ ನಿತೀಶ್ ಕೆ. ಅವರು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.

ಸೋಮವಾರ ದಂದು ನಗರದ ನೂತನ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆಯಲ್ಲಿ ಅತಿಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ವಿಶೇಷ ಸನ್ಮಾನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಎಸ್.ಎಸ್.ಎಲ್.ಸಿ. ಫಲಿತಾಂಶವನ್ನು ಹೆಚ್ಚಿಸಲು ಜಿಲ್ಲೆಯ ಜಿಲ್ಲಾ ಮಟ್ಟದಿಂದ ಗ್ರಾಮೀಣ ಮಟ್ಟದವರೆಗೂ ವಿಶೇಷವಾದ ತಂಡಗಳನ್ನು ರಚಿಸಲಾಗಿತ್ತು. ಜೊತೆಗೆ ಪ್ರತಿ ತಾಲೂಕಿಗೆ ನೋಡೆಲ್ ಅಧಿಕಾರಿಗಳನ್ನು ನೇಮಕ ಮಾಡಿ, ಅಭ್ಯಾಸದಲ್ಲಿ ಹಿಂದುಳಿದ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಿ, ಅವರಿಗೆ ವಿಶೇಷವಾದ ಕಲಿಕಾ ಚಟುವಟಿಕೆಗಳನ್ನು ನಡೆಸಿ, ಜಿಲ್ಲೆಯ ಫಲಿತಾಂಶವನ್ನು ಸುಧಾರಿಸಲಾಗಿದೆ. ಮತ್ತು ಕಲಿಕೆಯಲ್ಲಿ ಹಿಂದುಳಿದ ವಿದ್ಯಾರ್ಥಿಗಳನ್ನು ಉತ್ತೀಣಗೊಳಿಸುವ ನಿಟ್ಟಿನಲ್ಲಿ ಶಿಕ್ಷಕರು, ಶಿಕ್ಷಣ ಇಲಾಖೆಯ ಅಧಿಕಾರಿಗಳು ಅತ್ಯಂತ ಹೆಚ್ಚಿನ ಶ್ರಮ ವಹಿಸಿ ಕಾರ್ಯ ನಿರ್ವಹಿಸಿದ್ದಾರೆ ಎಂದರು.

ರಾಜ್ಯಕ್ಕೆ 21ನೇ ಸ್ಥಾನದಲ್ಲಿದ್ದೇವೆ ಎಂದು ನಮ್ಮನ್ನು ನಾವು ಬೆನ್ನು ತಟ್ಟಿಕೊಳ್ಳದೇ, ಜಿಲ್ಲೆಯ ಶೈಕ್ಷಣಿಕ ಪರಿಸ್ಥಿತಿಯನ್ನು ಸುಧಾರಿಸಲು ಇಂದಿನಿ0ದಲೇ ರೂಪು ರೇಷೆಗಳನ್ನು ಹಾಕಿಕೊಳ್ಳಬೇಕಾಗಿದೆ. ಅದಕ್ಕಾಗಿ ಪ್ರತಿಯೊಬ್ಬ ವಿದ್ಯಾರ್ಥಿಗೆ ಶೈಕ್ಷಣಿಕ ಪ್ರೋತ್ಸಾಹ ನೀಡುವುದು ಅತ್ಯಗತ್ಯವಾಗಿದೆ. ಬೇರೆ ಜಿಲ್ಲೆಗಳಿಗೆ ಹೋಲಿಸಿದರೇ ನಮ್ಮಲ್ಲಿ ಶಿಕ್ಷಕರ ಕೊರತೆ ಇದ್ದು, ಈ ಸವಾಲಿನ ಮಧ್ಯೆಯೂ ಈ ಬಾರಿ ಶೈಕ್ಷಣಿಕ ಪ್ರಗತಿಯನ್ನು ಉತ್ತಮವಾಗಿ ಸಾಧಿಸಿದ್ದೇವೆ. ಇದೇ ರೀತಿ ನಿರಂತರವಾಗಿ ಶೈಕ್ಷಣಿಕ ಪ್ರಗತಿ ಹೆಚ್ಚಳಕ್ಕೆ ಎಲ್ಲಾ ಅಧಿಕಾರಿಗಳು ಶ್ರಮಿಸಬೇಕು ಎಂದರು.

ಎಸ್.ಎಸ್.ಎಲ್.ಸಿ. ಎಂದರೇ ಕೇವಲ ಪ್ರೌಢ ಶಿಕ್ಷಕ್ಕೆ ಮಾತ್ರ ಸೀಮಿತವಾಗಿರುವುದಿಲ್ಲ. ಇದು ಮುಂದಿನ ಸ್ಪರ್ಧಾತ್ಮಕ ಪರೀಕ್ಷೆಗಳಿಗೂ ಸಹಕಾರಿಯಾಗುತ್ತದೆ. ಎಸ್.ಎಸ್.ಎಲ್.ಸಿಯಲ್ಲಿ ವಿದ್ಯಾರ್ಥಿಗಳು ಕಷ್ಟ ಪಟ್ಟು ಅಭ್ಯಾಸ ಮಾಡಿದರೆ ಮುಂದಿನ ಭವಿಷ್ಯ ಉತ್ತಮವಾಗಿರುತ್ತದೆ ಎಂದು ಸಲಹೆ ನೀಡಿದರು.

ವಿದ್ಯಾರ್ಥಿಗೆ ಶತೃವೆಂದರೇ ಅದು ಮೊಬೈಲ್ ಫೋನ್ ಆಗಿದ್ದು, ಅದನ್ನು ಒಳ್ಳೆ ಕೆಲಸಗಳಿಗೆ ಮತ್ತು ಶಿಕ್ಷಣದ ವಿಚಾರವಾಗಿ ಬಳಸಿದರೇ ಮಾತ್ರ ಉಪಯೋಗವಾಗುತ್ತದೆ. ಕೇವಲ ಸಾಮಾಜಿಕ ಜಾಲತಾಣದಲ್ಲಿ ಕಾಲಕಳೆಯುವುದರಿಂದ ಸಮಯವೂ ವ್ಯರ್ಥವಾಗುತ್ತದೆ ಎಂದರು.

ವಿದ್ಯಾರ್ಥಿಗಳ ಪಾಲಕರ ಪರಿಶ್ರಮಕ್ಕೆ ಪ್ರತಿಫಲವೆಂದರೇ ಅದು ವಿದ್ಯಾರ್ಥಿ ಉತ್ತಮ ಫಲಿತಾಂಶವನ್ನು ತೆಗೆವುದು ಮಾತ್ರ ಆಗಿರುತ್ತದೆ. ಶಿಕ್ಷಣ ಇಲಾಖೆ ಈ ಬಾರಿ ಉತ್ತಮವಾಗಿ ಕಾರ್ಯ ನಿರ್ವಹಿಸಿದ್ದು, ಇದೀಗ ಶಿಕ್ಷಣ ಇಲಾಖೆಯ ಜವಾಬ್ದಾರಿ ಇನ್ನೂ ಹೆಚ್ಚಾಗಿದ್ದು, ನಿರಂತರ ಶ್ರಮದಿಂದ ಕಾರ್ಯ ನಿರ್ವಹಿಸುವ ಮೂಲಕ ರಾಜ್ಯದಲ್ಲಿ ಇನ್ನೂ ಉನ್ನತ ಸ್ಥಾನಕ್ಕೆ ತಲುಪಬಹುದು, ಮುಂದಿನ ದಿನಗಳಲ್ಲಿ ಇದೇ ರೀತಿ ಶ್ರಮವಹಿಸಿ ಕೆಲಸ ಮಾಡಿದರೇ ಮೊದಲನೇ ಸ್ಥಾನಕ್ಕೆ ಬರುವುದರಲ್ಲಿ ಸಂದೇಹವೇ ಇಲ್ಲ ಎಂದು ಹೇಳಿದರು.

ವಿದ್ಯಾರ್ಥಿಗಳಿಗೆ ಸನ್ಮಾನ: ಕಾರ್ಯಕ್ರಮದಲ್ಲಿ ಎಸ್.ಎಸ್.ಎಲ್.ಸಿ.ಯಲ್ಲಿ ಅತಿ ಹೆಚ್ಚು ಅಂಕಗಳಿಸಿದ ಜಿಲ್ಲೆಯ ಮಾನ್ವಿ ತಾಲೂಕಿನ ಸುಖದೇವ (625), ಸಿಂಧನೂರಿನ ನಿಖಿಲ್ ಮೇಟಿ (622), ಲಿಂಗಸುಗೂರಿನ ಪ್ರವೀಣ್ (622), ದೇವದುರ್ಗದ ಮಲ್ಲಿಕಾರ್ಜುನ ಸ್ವಾಮಿ (622) ಹಾಗೂ ರಾಯಚೂರಿನ ಸೌಮ್ಯ ಪ್ಯಾಟಿ (619) ವಿದ್ಯಾರ್ಥಿಗಳಿಗೆ ಸನ್ಮಾನಿಸಿ ಗೌರವಿಸಲಾಯಿತು.

ವಿದ್ಯಾರ್ಥಿಗಳ ಅನಿಸಿಕೆ : ಎಸ್.ಎಸ್.ಎಲ್.ಸಿ.ಪರೀಕ್ಷೆಯಲ್ಲಿ 625ಕ್ಕೆ 625 ಅಂಕಗಳನ್ನು ಪಡೆದು, ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿರುವ ಜಿಲ್ಲೆಯ ಮಾನ್ವಿಯ ಬಿವಿಆರ್ ಪ್ರೌಢ ಶಾಲೆಯ ವಿದ್ಯಾರ್ಥಿ ಸುಖುದೇವ ಅವರು ಮಾತನಾಡಿ, ಐಐಟಿ ಪದವಿ ಪಡೆದು ತಂತ್ರಜ್ಞಾನ ಕ್ಷೇತ್ರದಲ್ಲಿ ಸಾಧನೆ ಮಾಡುವ ಗುರಿ ಇದೆ. ಇನ್ನೂ ಹೆಚ್ಚಿನ ಮಟ್ಟದಲ್ಲಿ ಸಾಧನೆ ಮಾಡುವ ಆಶೆ ಇದೆ ಎಂದರು.

ನನ್ನ ಈ ಸಾಧನೆಗೆ ತಂದೆ-ತಾಯಿ ಹಾಗೂ ಶಿಕ್ಷಕರ ಪಾತ್ರ ಹೆಚ್ಚಾಗಿದೆ. ಜಿಲ್ಲಾಡಳಿತದಿಂದ ಸನ್ಮಾನಿಸಿದ್ದು, ಇನ್ನೂ ಹೆಚ್ಚಿನ ಸಾಧನೆ ಮಾಡಲು ಪ್ರೇರಣಿಯಾಗಿದೆ ಎಂದು ಶಕ್ತಿನಗರ ಕೆ.ಪಿ,ಸಿ.ಎಲ್ ಪ್ರೌಢ ಶಾಲೆಯ ವಿದ್ಯಾರ್ಥಿ ಸೌಮ್ಯ ಪ್ಯಾಟಿ ಅವರು ಅಭಿಪ್ರಾಯಪಟ್ಟರು.

ಜಿಲ್ಲೆಯ ಮಾನ್ವಿಯ ಬಿವಿಆರ್ ಪ್ರೌಢ ಶಾಲೆಯ ವಿದ್ಯಾರ್ಥಿ ಸುಖುದೇವ ಅವರಿಗೆ ಜಿಲ್ಲಾಧಿಕಾರಿಗಳಿಂದ 10 ಸಾವಿರ ರೂಪಾಯಿ ಚೆಕ್ ಅನ್ನು ವಿತರಣೆ ಮಾಡಲಾಯಿತು.

ಇದೇ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಶಿವಾನಂದ, ಜಿಲ್ಲಾ ಪಂಚಾಯತ್ ಮುಖ್ಯ ಲೆಕ್ಕಾಧಿಕಾರಿ ವಿಜಯ ಶಂಕರ್, ರಾಯಚೂರು ತಹಶೀಲ್ದಾರ್ ಸುರೇಶ ವರ್ಮಾ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಕೆ.ಡಿ.ಬಡಿಗೇರ, ಅಭಿವೃದ್ಧಿ ವಿಭಾಗದ ಉಪ ನಿರ್ದೇಶಕ ಚಂದ್ರಶೇಖರ ಭಂಡಾರಿ ಸೇರಿದಂತೆ ಜಿಲ್ಲೆಯ ವಿವಿಧ ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಗಳು ಇತರರು ಇದ್ದರು.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande