
ಬೆಂಗಳೂರು, 27 ಏಪ್ರಿಲ್ (ಹಿ.ಸ.) :
ಆ್ಯಂಕರ್ : ರಾಜ್ಯದಾದ್ಯಂತ ಇಂದು ಒಣ ಹವಾಮಾನ ಹಾಗೂ ಬಿಸಿಲಿನ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಳಿಗ್ಗೆ ಮತ್ತು ಮಧ್ಯಾಹ್ನ ವೇಳೆಯಲ್ಲಿ ತಾಪಮಾನ ಹೆಚ್ಚಾಗುವ ಸಾಧ್ಯತೆಯಿದ್ದು, ಜನರು ಉಷ್ಣತೆಗೆ ಎಚ್ಚರಿಕೆಯಿಂದ ಇರಬೇಕಾಗಿದೆ.
ಮಧ್ಯಾಹ್ನ ನಂತರ ರಾಜ್ಯದ ಹಲವೆಡೆ ಮೋಡ ಕವಿದ ವಾತಾವರಣ ನಿರ್ಮಾಣವಾಗುವ ಸಾಧ್ಯತೆ ಇದೆ. ಕೆಲವು ಜಿಲ್ಲೆಗಳಲ್ಲಿ ಗುಡುಗು, ಸಿಡಿಲು ಸಹಿತ ಜೋರಾದ ಗಾಳಿಯೊಂದಿಗೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ತಿಳಿಸಲಾಗಿದೆ.
ಉತ್ತರ ಒಳನಾಡು, ದಕ್ಷಿಣ ಒಳನಾಡು ಹಾಗೂ ಕರಾವಳಿ ಭಾಗಗಳಲ್ಲೂ ಕೆಲವೆಡೆ ಮಳೆಯಾಗುವ ನಿರೀಕ್ಷೆಯಿದೆ. ಗಾಳಿ ವೇಗ ಹೆಚ್ಚಾಗುವ ಸಾಧ್ಯತೆಯಿಂದ ಸಾರ್ವಜನಿಕರು ಮತ್ತು ರೈತರು ಅಗತ್ಯ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ.
ಗುಡುಗು-ಸಿಡಿಲಿನ ಸಂದರ್ಭಗಳಲ್ಲಿ ತೆರೆಯಾದ ಜಾಗಗಳಲ್ಲಿ ನಿಲ್ಲಬಾರದು, ಮರಗಳ ಕೆಳಗೆ ಆಶ್ರಯ ಪಡೆಯುವುದನ್ನು ತಪ್ಪಿಸಬೇಕು ಎಂದು ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa