ಕುಡಿಯುವ ನೀರಿನ ಸಮಸ್ಯೆಗೆ ಕ್ರಮ ವಹಿಸಿ : ಸಂತೋಷ ಲಾಡ್
ಧಾರವಾಡ, 27 ಏಪ್ರಿಲ್ (ಹಿ.ಸ.) : ಆ್ಯಂಕರ್ : ಬೇಸಿಗೆ ಮುಗಿಯುವವರೆಗೆ ಧಾರವಾಡ ಜಿಲ್ಲೆಯಲ್ಲಿ ಯಾವುದೇ ಗ್ರಾಮ ಹಾಗೂ ಪಟ್ಟಣಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ತಹಶೀಲ್ದಾರರು ಮತ್ತು ತಾಲೂಕಾ ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿಗಳು ನಿರಂತರವಾಗಿ ನಿಗಾವಹಿಸಬೇಕು ಎಂದು ಕಾರ್ಮಿಕ ಹಾಗೂ ಧಾರವಾಡ ಜಿ
Kdp meeting lad


ಧಾರವಾಡ, 27 ಏಪ್ರಿಲ್ (ಹಿ.ಸ.) :

ಆ್ಯಂಕರ್ : ಬೇಸಿಗೆ ಮುಗಿಯುವವರೆಗೆ ಧಾರವಾಡ ಜಿಲ್ಲೆಯಲ್ಲಿ ಯಾವುದೇ ಗ್ರಾಮ ಹಾಗೂ ಪಟ್ಟಣಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ತಹಶೀಲ್ದಾರರು ಮತ್ತು ತಾಲೂಕಾ ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿಗಳು ನಿರಂತರವಾಗಿ ನಿಗಾವಹಿಸಬೇಕು ಎಂದು ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಅವರು ಸೂಚನೆ ನೀಡಿದರು.

ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ಯೋಜನೆಯಡಿ ನಾಲ್ಕನೇಯ ತ್ರೈಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆ ನಡೆಸಿ ಮಾತನಾಡಿದರು.

ಈಗಾಗಲೇ ಜಿಲ್ಲೆಯ ವಿವಿಧ ತಾಲೂಕುಗಳ 15 ಗ್ರಾಮಗಳಲ್ಲಿ 17 ಕೊಳವೆಬಾವಿಗಳ ಮೂಲಕ ಕುಡಿಯುವ ನೀರು ಸರಬರಾಜು ಮಾಡಲಾಗುತ್ತಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದು, ಜಿಲ್ಲಾಡಳಿತ ಮೇಲಸ್ತುವಾರಿಯಲ್ಲಿ ಕ್ರಮವಹಿಸಿ, ಸಾರ್ವಜನಿಕರಿಗೆ ಕುಡಿಯುವ ನೀರಿನ ತೊಂದರೆಯಾಗದಂತೆ ನೋಡಿಕೊಳ್ಳಬೇಕೆಂದು ಹೇಳಿದರು.

ಮುಂಗಾರು ಪೂರ್ವದಲ್ಲಿ ಮಳೆಗಳು ಹೆಚ್ಚಾಗುತ್ತಿದ್ದು, ಯಾವುದೇ ಹಾನಿಯಾಗದಂತೆ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಅಧಿಕಾರಿಗಳು ಕೈಗೊಳ್ಳಬೇಕು. ಕೃಷಿ ಚಟುವಟಿಕೆಗಳು ಆರಂಭವಾಗಿದ್ದು, ರೈತರಿಗೆ ಅಗತ್ಯವಿರುವ ಬೀಜ, ರಸಗೊಬ್ಬರ ಪೂರೈಕೆಯಾಗಬೇಕು. ಬಿತ್ತನೆ ಸಮಯದಲ್ಲಿ ಯಾವುದೇ ಗೊಂದಲ ಉಂಟಾಗದಂತೆ ಕೃಷಿ ಇಲಾಖೆ ಯೋಜನಾ ಬದ್ಧವಾಗಿ ಬೀಜ, ರಸಗೊಬ್ಬರ ವಿತರಣೆಯನ್ನು ಮಾಡಬೇಕೆಂದು ಸಚಿವರು ಸೂಚಿಸಿದರು.

ಕೃಷಿ ಉತ್ಪನ್ನ ಮಾರುಕಟ್ಟೆ ಇಲಾಖೆಯು ಜಿಲ್ಲೆಯ ಎಪಿಎಂಸಿ ಗಳ ಸುಧಾರಣೆಗೆ ಅಗತ್ಯವಾದ ಪ್ರಸ್ತಾವನೆಯನ್ನು ರೂಪಿಸಬೇಕು. ಪಿಪಿಟಿ ಮೂಲಕ ಇಲಾಖೆಯಿಂದ ಜನಪ್ರತಿನಿಧಿಗಳ ಮುಂದೆ ಪ್ರದರ್ಶನ ನೀಡಿ, ಎಪಿಎಂಸಿ ಗಳ ಅಭಿವೃದ್ಧಿಗೆ ಯಾವೆಲ್ಲ ಕ್ರಮಗಳನ್ನು ಕೈಗೊಳ್ಳಬೇಕೆಂದು ವಿವರಿಸಬೇಕು. ಅಗತ್ಯವಿದ್ದಲ್ಲಿ ಸರ್ಕಾರಿಂದ ವಿಶೇಷ ಅನುದಾನ ತರಲು ಪ್ರಯತ್ನಿಸಲಾಗುವುದು. ಬೆಂಬಲ ಬೆಲೆ ಯೋಜನೆಯಡಿ ಕಡಲೆಕಾಳು ಖರೀದಿ ಕೇಂದ್ರಗಳಲ್ಲಿ ಚೀಲಗಳ ಕೊರತೆಯಾದ ಕುರಿತು ಮನವಿ ಸಲ್ಲಿಕೆಯಾಗುತ್ತಿವೆ. ಈ ಕುರಿತು ಕ್ರಮವಹಿಸಿ, ಜಿಲ್ಲೆಗೆ ಅಗತ್ಯವಿರುವ ಗೋಣಿಚೀಲಗಳನ್ನು ತರಿಸಬೇಕು. ಮತ್ತು ಬ್ಯಾಹಟ್ಟಿ ಖರೀದಿ ಕೇಂದ್ರದಿಂದ ಖರೀದಿಸಿದ್ದ ರೈತರ ಹೆಸರು ಕಾಳು ಕುರಿತು ಹಣ ಪಾವತಿಸುವಲ್ಲಿ ತಾಂತ್ರಿಕ ಸಮಸ್ಯೆ ಆಗಿದ್ದು, ಸಂಬಂಧಿಸಿದ ಅಧಿಕಾರಿಗಳು ಪರಿಶೀಲಿಸಿ, ಸಮಸ್ಯೆ ಬಗೆಹರಿಸಬೇಕು ಎಂದು ಸಚಿವರು ನಿರ್ದೇಶಿಸಿದರು.

ಕುಡಿಯುವ ನೀರು ಸಂಬಂಧಿತ ಜಲಜೀವನ ಮಿಷನ್ ಯೋಜನೆಯು ನಿಧಾನಗತಿಯಲ್ಲಿ ಸಾಗುತ್ತಿದೆ. ಸಾಕಷ್ಟು ಬಾರಿ ಎಚ್ಚರಿಕೆ ನೀಡಿ, ಎಲ್ ಆ್ಯಂಡ್ ಟಿ ಕಂಪನಿಗೆ ಈಗಾಗಲೇ ರೂ. 30 ಕೋಟಿ ದಂಡ ವಿಧಿಸಲಾಗಿದೆ. ಮೇ ಅಂತ್ಯದೊಳಗೆ 28 ಗ್ರಾಮಗಳಿಗೆ ಯೋಜನೆಯಡಿ ಕುಡಿಯುವ ನೀರು ಸರಬರಾಜು ಮಾಡಲು ಕ್ರಮ ವಹಿಸಿದ್ದಾರೆ. ಮಾರ್ಚ 2027 ರವರೆಗೆ ಜಿಲ್ಲೆಯ ಎಲ್ಲ ಗ್ರಾಮಗಳಿಗೆ ಕುಡಿಯುವ ನೀರು ಸರಬರಾಜು ಯೋಜನೆಯನ್ನು ಪೂರ್ಣಗೊಳಿಸಲಾಗುವುದು ಎಂದು ತಿಳಿಸಲಾಗಿದೆ. ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಅಧಿಕಾರಿಗಳು ಜಲಜೀವನ ಮಿಷನ್ ಕಾಮಗಾರಿಗಳು ಗುಣಮಟ್ಟದಿಂದ ಮತ್ತು ಒಪ್ಪಂದದಂತೆ ಅನುಷ್ಠಾನಗೊಳ್ಳುವುದನ್ನು ಖಾತರಿಪಡಿಸಿಕೊಳ್ಳಬೇಕು ಮತ್ತು ಸರಿಯಾಗಿ ಮೇಲುಸ್ತುವಾರಿ ವಹಿಸಬೇಕೆಂದು ಸಚಿವರು ಸೂಚನೆ ನೀಡಿದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande