ಮಹಿಳಾ ಮೀಸಲಾತಿ ಮಸೂದೆ ; ಮೋಸ ರಾಜಕಾರಣದ ಸೋಲು
ವಿಜಯಪುರ, 27 ಏಪ್ರಿಲ್ (ಹಿ.ಸ.) : ಆ್ಯಂಕರ್ : ವಿಜಯಪುರ ನಗರದ ಜಿಲ್ಲಾ ಕಾಂಗ್ರೆಸ್ ಕಾರ್ಯಾಲಯದಲ್ಲಿ ಮಹಿಳಾ ಮೀಸಲಾತಿ ವಿಷಯದ ಕುರಿತು ಕಾಂಗ್ರೆಸ್ ನಾಯಕಿ ಕಾಂತಾನಾಯಕ ಮಾಧ್ಯಮ ಗೋಷ್ಠಿ ನಡೆಸಿದರು. ಸಂವಿಧಾನದ 131ನೇ ತಿದ್ದುಪಡಿ ಮಸೂದೆ ಸೋಲು ಮಹಿಳಾ ಮೀಸಲಾತಿಯ ಸೋಲು ಅಲ್ಲ; ಅದು ಬಿಜೆಪಿ ನಡೆಸಿದ ಮೋಸದ ರ
ಸಭೆ


ವಿಜಯಪುರ, 27 ಏಪ್ರಿಲ್ (ಹಿ.ಸ.) :

ಆ್ಯಂಕರ್ : ವಿಜಯಪುರ ನಗರದ ಜಿಲ್ಲಾ ಕಾಂಗ್ರೆಸ್ ಕಾರ್ಯಾಲಯದಲ್ಲಿ ಮಹಿಳಾ ಮೀಸಲಾತಿ ವಿಷಯದ ಕುರಿತು ಕಾಂಗ್ರೆಸ್ ನಾಯಕಿ ಕಾಂತಾನಾಯಕ ಮಾಧ್ಯಮ ಗೋಷ್ಠಿ ನಡೆಸಿದರು. ಸಂವಿಧಾನದ 131ನೇ ತಿದ್ದುಪಡಿ ಮಸೂದೆ ಸೋಲು ಮಹಿಳಾ ಮೀಸಲಾತಿಯ ಸೋಲು ಅಲ್ಲ; ಅದು ಬಿಜೆಪಿ ನಡೆಸಿದ ಮೋಸದ ರಾಜಕಾರಣದ ಸೋಲು ಎಂದು ಅವರು ಆರೋಪಿಸಿದರು.

‘ನಾರಿ ಶಕ್ತಿ’ ಹೆಸರಿನಲ್ಲಿ ಬಿಜೆಪಿ ಸರ್ಕಾರ ಡಿಲಿಮಿಟೇಶನ್ ಮಸೂದೆ 2026 ಹಾಗೂ ಯೂನಿಯನ್ ಟೆರಿಟರೀಸ್ ತಿದ್ದುಪಡಿ ಮಸೂದೆಗಳನ್ನು ಹಿಂಬಾಗಿಲಿನಲ್ಲಿ ಜಾರಿಗೊಳಿಸಲು ಪ್ರಯತ್ನಿಸಿದೆ ಎಂದು ಟೀಕಿಸಲಾಯಿತು. 2011ರ ಹಳೆಯ ಜನಗಣತಿ ಆಧಾರದ ಮೇಲೆ ಕ್ಷೇತ್ರ ಮರುರಚನೆ ಮಾಡಲು ಮುಂದಾಗಿರುವುದು ಪ್ರಜಾಪ್ರಭುತ್ವದ ಆತ್ಮಕ್ಕೆ ವಿರುದ್ಧವಾಗಿದ್ದು, ದೇಶದ ಜನರ ಪ್ರತಿನಿಧಿತ್ವಕ್ಕೆ ಧಕ್ಕೆಯಾಗಿದೆ ಎಂದು ಅಭಿಪ್ರಾಯಪಟ್ಟರು.

ಈ ಮಸೂದೆಗೆ ಹಲವಾರು ಮಹಿಳಾ ಸಂಘಟನೆಗಳು ಹಾಗೂ ನಾಗರಿಕ ಸಮಾಜಗಳು ವಿರೋಧ ವ್ಯಕ್ತಪಡಿಸಿರುವುದನ್ನೂ ಅವರು ಉಲ್ಲೇಖಿಸಿದರು.

ಮಹಿಳಾ ಮೀಸಲಾತಿ ವಿಷಯದಲ್ಲಿ ಬಿಜೆಪಿ ಪಕ್ಷವು ಮೋಸದ ರಾಜಕಾರಣ ನಡೆಸುತ್ತಿದೆ ಎಂದು ಖಂಡನೆ ವ್ಯಕ್ತಪಡಿಸಿ, ಕಾಂಗ್ರೆಸ್ ಪಕ್ಷವು 33 ಶೇಕಡಾ ಮಹಿಳಾ ಮೀಸಲಾತಿಗೆ ಬದ್ಧವಾಗಿದೆ ಎಂದು ಸ್ಪಷ್ಟಪಡಿಸಿದರು.

ಈ ಸಂದರ್ಭದಲ್ಲಿ ಬಾಗಲಕೋಟ ಲೋಕ ಸಭೆ ಕಾಂಗ್ರೆಸ್ ಅಭ್ಯರ್ಥಿ ಸಂಯುಕ್ತಾ ಪಾಟೀಲ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರುಕ್ಸಾನಾ ಉಸ್ತಾದ್, ಮಾಜಿ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ವಿದ್ಯಾರಾಣಿ ತುಂಗಳ, ಪಾಲಿಕೆ ಸದಸ್ಯೆ ಆರತಿ ಶಹಾಪುರ, ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ರಮೇಜಾ ನದಾಫ, ಮಹಾದೇವಿ ಗೊಕಾಕ, ವಿದ್ಯಾವತಿ ಅಂಕಲಗಿ ಸೇರಿದಂತೆ ಜಿಲ್ಲೆಯ ಮಹಿಳಾ ಕಾಂಗ್ರೆಸ್ ಮುಖಂಡರು ಮತ್ತು ಪದಾಧಿಕಾರಿಗಳು ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande