ಏ. 30 ರಿಂದ ಎರಡನೇ ಹಂತದ ದ್ವಿತೀಯ ಪಿಯುಸಿ ಪರೀಕ್ಷೆ
ಕೊಪ್ಪಳ, 27 ಏಪ್ರಿಲ್ (ಹಿ.ಸ.) : ಆ್ಯಂಕರ್ : ಎರಡನೇ ಹಂತದ ದ್ವಿತೀಯ ಪಿ.ಯು.ಸಿ ವಾರ್ಷಿಕ ಪರೀಕ್ಷೆಗಳು ಏಪ್ರಿಲ್ 30 ರಿಂದ ಮೇ 13 ರವರೆಗೆ ಕೊಪ್ಪಳ ಜಿಲ್ಲೆಯ ವಿವಿಧ ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದ್ದು, ಪರೀಕ್ಷೆಗಳು ಸುಗಮ ಹಾಗೂ ಶಾಂತಿಯುತವಾಗಿ ನಡೆಯುವ ಉದ್ದೇಶದಿಂದ ಪರೀಕ್ಷಾ ಕೇಂದ್ರದ ಸುತ್ತಲೂ
econd phase of Secondary PUC examination from April 30


ಕೊಪ್ಪಳ, 27 ಏಪ್ರಿಲ್ (ಹಿ.ಸ.) :

ಆ್ಯಂಕರ್ : ಎರಡನೇ ಹಂತದ ದ್ವಿತೀಯ ಪಿ.ಯು.ಸಿ ವಾರ್ಷಿಕ ಪರೀಕ್ಷೆಗಳು ಏಪ್ರಿಲ್ 30 ರಿಂದ ಮೇ 13 ರವರೆಗೆ ಕೊಪ್ಪಳ ಜಿಲ್ಲೆಯ ವಿವಿಧ ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದ್ದು, ಪರೀಕ್ಷೆಗಳು ಸುಗಮ ಹಾಗೂ ಶಾಂತಿಯುತವಾಗಿ ನಡೆಯುವ ಉದ್ದೇಶದಿಂದ ಪರೀಕ್ಷಾ ಕೇಂದ್ರದ ಸುತ್ತಲೂ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿಗಳಾದ ಡಾ. ಸುರೇಶ ಬಿ. ಇಟ್ನಾಳ ಅವರು ಆದೇಶ ಹೊರಡಿಸಿದ್ದಾರೆ.

ದ್ವಿತೀಯ ಪಿ.ಯು.ಸಿ ವಾರ್ಷಿಕ ಪರೀಕ್ಷೆ-2ರ ಪರೀಕ್ಷೆಗಳು ಏಪ್ರಿಲ್ 30 ರಿಂದ ಮೇ 13 ರವರೆಗೆ ಬೆಳಿಗ್ಗೆ 10 ಗಂಟೆ ಯಿಂದ ಮಧ್ಯಾಹ್ನ 1 ಗಂಟೆಯವರೆಗೆ ಜಿಲ್ಲೆಯ ಕೊಪ್ಪಳದ ಬಾಲಕಿಯರ ಸರಕಾರಿ ಪದವಿ ಪೂರ್ವ ಕಾಲೇಜು, ಗಂಗಾವತಿಯ ಬಾಲಕರ ಸರಕಾರಿ ಪದವಿ ಪೂರ್ವ ಕಾಲೇಜು, ಕುಷ್ಟಗಿಯ ಬಾಲಕಿಯರ ಸರಕಾರಿ ಪದವಿ ಪೂರ್ವ ಕಾಲೇಜು, ಯಲಬುರ್ಗಾದ ಸರಕಾರಿ ಪದವಿ ಪೂರ್ವ ಕಾಲೇಜು ಮತ್ತು ಕಾರಟಗಿಯ ಸರಕಾರಿ ಪದವಿ ಪೂರ್ವ ಕಾಲೇಜು, ಈ ಐದು ಪರೀಕ್ಷಾ ಕೇಂದ್ರಗಳಲ್ಲಿ ಜರುಗಲಿದ್ದು, ಪರೀಕ್ಷೆಗಳನ್ನು ಸುಗಮ ಮತ್ತು ಶಾಂತಿಯುತವಾಗಿ ನಡೆಸುವ ಉದ್ದೇಶದಿಂದ ಪರೀಕ್ಷಾ ಕೇಂದ್ರಗಳ ಸುತ್ತ 200 ಮೀಟರ್ ಅಂತರದ ಪ್ರದೇಶದಲ್ಲಿ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ 2023ರ ಕಲಂ 163 ರನ್ವಯ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

ನಿಷೇಧಾಜ್ಞೆ ಜಾರಿಯನ್ವಯ ಪರೀಕ್ಷಾ ಕೇಂದ್ರಗಳ ಸುತ್ತಲೂ 200 ಮೀಟರ್ ವ್ಯಾಪ್ತಿಯಲ್ಲಿ ಯಾವುದೇ ರೀತಿಯ ಎಸ್.ಟಿ.ಡಿ. ಮೊಬೈಲ್, ಪೇಜರ್, ಜರಾಕ್ಸ್, ಟೈಪಿಂಗ್ ಮುಂತಾದವುಗಳನ್ನು ನಿಷೇಧಿಸಲಾಗಿದೆ. ಪರೀಕ್ಷಾ ಕೇಂದ್ರಗಳ ಹಾಗೂ ನಿಯೋಜಿತ ಶಿಕ್ಷಕರನ್ನು ಜಾಗೃತ ದಳದವರನ್ನು ಹೊರತುಪಡಿಸಿ ಇನ್ನುಳಿದವರಿಗೆ ಪರವಾನಿಗೆ ಇಲ್ಲದೆ ಪರೀಕ್ಷಾ ಕೇಂದ್ರದಲ್ಲಿ ಪ್ರವೇಶ ಮಾಡುವುದನ್ನು ನಿಷೇಧಿಸಿದೆ.

ಪರೀಕ್ಷಾ ಕೇಂದ್ರಗಳ ಸುತ್ತಲೂ ಜನರು ಮಾರಕಾಸ್ತ್ರಗಳನ್ನು ಹಿಡಿದು ತಿರುಗಾಡುವುದನ್ನು ನಿಷೇಧಿಸಿದೆ.

ಈ ಆದೇಶವು ಮದುವೆ, ಶವ ಸಂಸ್ಕಾರಗಳು ಹಾಗೂ ಇನ್ನಿತರ ಧಾರ್ಮಿಕ ಕಾರ್ಯಕ್ರಮಗಳಿಗೆ ಅನ್ವಯವಾಗುವುದಿಲ್ಲ ಎಂದು ಜಿಲ್ಲಾಧಿಕಾರಿಗಳು ಆದೇಶದಲ್ಲಿ ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande