ಟಣಕನಕಲ್ ಐಟಿಐ ಪ್ರವೇಶಕ್ಕೆ ಅರ್ಜಿ ಆಹ್ವಾನ
ಕೊಪ್ಪಳ, 28 ಏಪ್ರಿಲ್ (ಹಿ.ಸ.) : ಆ್ಯಂಕರ್ : ಟಣಕನಕಲ್ನ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ 2026 ನೇ ಸಾಲಿನ ವಿವಿಧ ವೃತ್ತಿಗಳ ಐಟಿಐ ಪ್ರವೇಶ ಪ್ರಕ್ರಿಯೆಯು ಪ್ರಾರಂಭವಾಗಿದ್ದು, ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಇಲಾಖೆಯ ಅಧಿಕೃತ ವೆಬ್ಸೈಟ್: www.cite.
ಟಣಕನಕಲ್ ಐಟಿಐ ಪ್ರವೇಶಕ್ಕೆ ಅರ್ಜಿ ಆಹ್ವಾನ


ಕೊಪ್ಪಳ, 28 ಏಪ್ರಿಲ್ (ಹಿ.ಸ.) :

ಆ್ಯಂಕರ್ : ಟಣಕನಕಲ್ನ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ 2026 ನೇ ಸಾಲಿನ ವಿವಿಧ ವೃತ್ತಿಗಳ ಐಟಿಐ ಪ್ರವೇಶ ಪ್ರಕ್ರಿಯೆಯು ಪ್ರಾರಂಭವಾಗಿದ್ದು, ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಇಲಾಖೆಯ ಅಧಿಕೃತ ವೆಬ್ಸೈಟ್: www.cite.karnataka.gov.in ಮೂಲಕ ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಬಹುದು. ಅಥವಾ ಸಂಸ್ಥೆಗೆ ಭೇಟಿ ಖುದ್ದಾಗಿ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಮೇ 8 ಕೊನೆಯ ದಿನವಾಗಿದೆ.

ಅರ್ಜಿ ಸಲ್ಲಿಸಲು ಅಭ್ಯರ್ಥಿಯು ದಿನಾಂಕ: 01-08-2026 ಕ್ಕೆ ಕನಿಷ್ಟ 14 ವರ್ಷ ಪೂರೈಸಿರಬೇಕು. ಎಸ್ಎಸ್ಎಲ್ಸಿ ಉತ್ತೀರ್ಣರಾಗಿರಬೇಕು. ಕೆಲವು ನಿರ್ದಿಷ್ಟ ವೃತ್ತಿಗಳಿಗೆ(ವೆಲ್ಡರ್, ಕಾರ್ಪೆಂಟರ್, ಶೀಟ್ ಮೆಟಲ್ ವರ್ಕರ್, ಇತ್ಯಾದಿ) 8ನೇ ತರಗತಿ ಉತ್ತೀರ್ಣರಾಗಿದ್ದರೂ ಅರ್ಜಿ ಸಲ್ಲಿಸಬಹುದು. ಕನಿಷ್ಟ 5 ವರ್ಷ ಕಡ್ಡಾಯವಾಗಿ ಕರ್ನಾಟಕದಲ್ಲಿ ವ್ಯಾಸಂಗ ಮಾಡಿರಬೇಕು.

ಅಭ್ಯರ್ಥಿಗಳಿಗೆ ನೆರವಾಗಲು ಟಣಕನಕಲ್ ಸಂಸ್ಥೆಯಲ್ಲಿ ಹೆಲ್ಪ್ಡೆಸ್ಕ್ ಅನ್ನು ಪ್ರಾರಂಭಿಸಲಾಗಿದ್ದು, ಇಲ್ಲಿಗೆ ಬಂದು ಮಾಹಿತಿ ಪಡೆಯಬಹುದು. ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ: 9945577155, 9742532353, 8660977220, 9945672606, 9448813422 ಗಳಿಗೆ ಸಂಪರ್ಕಿಸಬಹುದು ಎಂದು ಸಂಸ್ಥೆ ತಿಳಿಸಿದೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande