ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಭದ್ರತಾ ಯೋಜನೆಗೆ ಬಿಸಿಎಎಸ್ ಅನುಮೋದನೆ
ನವದೆಹಲಿ, 28 ಏಪ್ರಿಲ್ (ಹಿ.ಸ.) : ಆ್ಯಂಕರ್ : ನಾಗರಿಕ ವಿಮಾನಯಾನ ಭದ್ರತಾ ಬ್ಯೂರೋ (ಬಿಸಿಎಎಸ್)ವು ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಏರೋಡ್ರೋಮ್ ಭದ್ರತಾ ಯೋಜನೆಗೆ ಅನುಮೋದನೆ ನೀಡಿದೆ. ಇದು ವಿಮಾನ ಕಾರ್ಯಾಚರಣೆ ಪ್ರಾರಂಭಿಸುವ ದಿಕ್ಕಿನಲ್ಲಿ ಮಹತ್ವದ ಹೆಜ್ಜೆಯಾಗಿದೆ. ಮಂಗಳವಾರ ಪ್ರಕಟಣೆ ಹೊರ
ನೋಯ್ಡಾ ವಿಮಾನ ನಿಲ್ದಾಣ


ನವದೆಹಲಿ, 28 ಏಪ್ರಿಲ್ (ಹಿ.ಸ.) :

ಆ್ಯಂಕರ್ : ನಾಗರಿಕ ವಿಮಾನಯಾನ ಭದ್ರತಾ ಬ್ಯೂರೋ (ಬಿಸಿಎಎಸ್)ವು ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಏರೋಡ್ರೋಮ್ ಭದ್ರತಾ ಯೋಜನೆಗೆ ಅನುಮೋದನೆ ನೀಡಿದೆ. ಇದು ವಿಮಾನ ಕಾರ್ಯಾಚರಣೆ ಪ್ರಾರಂಭಿಸುವ ದಿಕ್ಕಿನಲ್ಲಿ ಮಹತ್ವದ ಹೆಜ್ಜೆಯಾಗಿದೆ.

ಮಂಗಳವಾರ ಪ್ರಕಟಣೆ ಹೊರಡಿಸಿದ ವಿಮಾನ ನಿಲ್ದಾಣ ಆಡಳಿತ, “ಸುರಕ್ಷಿತ, ಸಮರ್ಥ ಮತ್ತು ಸುಗಮ ಕಾರ್ಯಾಚರಣೆಗಾಗಿ ಅಗತ್ಯವಿರುವ ಎಲ್ಲಾ ವ್ಯವಸ್ಥೆಗಳು, ಪ್ರಕ್ರಿಯೆಗಳು ಹಾಗೂ ಸಿಬ್ಬಂದಿಯನ್ನು ಪೂರ್ಣ ಸಿದ್ಧತೆಯಲ್ಲಿ ಇರಿಸಲು ನಾವು ಗಮನ ಹರಿಸಿದ್ದೇವೆ” ಎಂದು ತಿಳಿಸಿದೆ. ಈಗ ವಿಮಾನಯಾನ ಸೇವೆಗಳನ್ನು ಆರಂಭಿಸುವ ದಿನಾಂಕವನ್ನು ನಿಗದಿ ಮಾಡಲು ವಿಮಾನಯಾನ ಸಂಸ್ಥೆಗಳು ಮತ್ತು ಇತರ ಪಾಲುದಾರರೊಂದಿಗೆ ಚರ್ಚೆಗಳು ನಡೆಯುತ್ತಿವೆ.

ಈ ವಿಮಾನ ನಿಲ್ದಾಣವು ಉತ್ತರ ಪ್ರದೇಶದ ಜೇವರ್ ಪ್ರದೇಶದಲ್ಲಿ ನಿರ್ಮಾಣವಾಗಿದ್ದು, ಪ್ರಾದೇಶಿಕ ಸಂಪರ್ಕ ಮತ್ತು ಆರ್ಥಿಕ ಬೆಳವಣಿಗೆಯನ್ನು ಉತ್ತೇಜಿಸುವ ಉದ್ದೇಶ ಹೊಂದಿದೆ.

ಇದನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಮಾರ್ಚ್ 28ರಂದು ಉದ್ಘಾಟಿಸಿದ್ದರು. ಕಾರ್ಯಾರಂಭವಾದ ನಂತರ, ಇಂದಿರಾ ಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಮೇಲೆ ಇರುವ ಪ್ರಯಾಣಿಕರ ಒತ್ತಡವನ್ನು ಕಡಿಮೆ ಮಾಡುವುದರ ಜೊತೆಗೆ, ರಾಷ್ಟ್ರೀಯ ರಾಜಧಾನಿ ಪ್ರದೇಶದ ಪ್ರಮುಖ ವಾಯುಯಾನ ಕೇಂದ್ರವಾಗಿ ಹೊರಹೊಮ್ಮುವ ನಿರೀಕ್ಷೆಯಿದೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande