ಗಾಂಧಿ ಚೌಕ ಪೊಲೀಸ್ ಠಾಣೆಯಲ್ಲಿ ಎಸ್ಸಿ/ಎಸ್ಟಿ ಮುಖಂಡರೊಂದಿಗೆ ಕುಂದುಕೊರತೆ ಸಭೆ
ವಿಜಯಪುರ, 28 ಏಪ್ರಿಲ್ (ಹಿ.ಸ.) : ಆ್ಯಂಕರ್ : ವಿಜಯಪುರ ನಗರದ ಗಾಂಧಿ ಚೌಕ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪರಿಶಿಷ್ಟ ಜಾತಿ (SC) ಹಾಗೂ ಪರಿಶಿಷ್ಟ ಪಂಗಡ (ST) ಸಮುದಾಯದ ಮುಖಂಡರೊಂದಿಗೆ ಕುಂದುಕೊರತೆ ಸಭೆಯನ್ನು ಅಧಿಕಾರಿಗಳು ಆಯೋಜಿಸಿದ್ದರು. ಠಾಣೆಯ ಅಧಿಕಾರಿ ಹಾಗೂ ಸಿಬ್ಬಂದಿ ಸಮ್ಮುಖದಲ್ಲಿ ನಡೆದ ಈ
ಸಭೆ


ವಿಜಯಪುರ, 28 ಏಪ್ರಿಲ್ (ಹಿ.ಸ.) :

ಆ್ಯಂಕರ್ : ವಿಜಯಪುರ ನಗರದ ಗಾಂಧಿ ಚೌಕ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪರಿಶಿಷ್ಟ ಜಾತಿ (SC) ಹಾಗೂ ಪರಿಶಿಷ್ಟ ಪಂಗಡ (ST) ಸಮುದಾಯದ ಮುಖಂಡರೊಂದಿಗೆ ಕುಂದುಕೊರತೆ ಸಭೆಯನ್ನು ಅಧಿಕಾರಿಗಳು ಆಯೋಜಿಸಿದ್ದರು.

ಠಾಣೆಯ ಅಧಿಕಾರಿ ಹಾಗೂ ಸಿಬ್ಬಂದಿ ಸಮ್ಮುಖದಲ್ಲಿ ನಡೆದ ಈ ಸಭೆಯ ಉದ್ದೇಶ ಸಮುದಾಯದ ಸಮಸ್ಯೆಗಳನ್ನು ನೇರವಾಗಿ ಕೇಳಿ, ಅವುಗಳಿಗೆ ತ್ವರಿತ ಪರಿಹಾರ ಕಂಡುಹಿಡಿಯುವ ಬಗ್ಗೆ ಚರ್ಚಿಸಲಾಯಿತು.

ಸಭೆಯಲ್ಲಿ ಭಾಗವಹಿಸಿದ ಮುಖಂಡರು ತಮ್ಮ ತಮ್ಮ ಪ್ರದೇಶಗಳಲ್ಲಿ ಎದುರಿಸುತ್ತಿರುವ ಸಾಮಾಜಿಕ, ಭದ್ರತಾ ಹಾಗೂ ಕಾನೂನು ಸಂಬಂಧಿತ ಸಮಸ್ಯೆಗಳ ಕುರಿತು ವಿವರಿಸಿದರು. ವಿಶೇಷವಾಗಿ ಭದ್ರತೆ, ಅಸಮಾನತೆ, ಯುವಕರ ಸಮಸ್ಯೆಗಳು ಹಾಗೂ ಕಾನೂನು ಜಾಗೃತಿ ಕುರಿತಂತೆ ಹಲವು ವಿಚಾರಗಳನ್ನು ಮುಂದಿಟ್ಟರು.

ಪೊಲೀಸ್ ಅಧಿಕಾರಿಗಳು ಮಾತನಾಡಿ, ಸಮಾಜದ ಎಲ್ಲ ವರ್ಗಗಳ ಸುರಕ್ಷತೆ ಮತ್ತು ನ್ಯಾಯವನ್ನು ಕಾಪಾಡುವುದು ಇಲಾಖೆಯ ಮುಖ್ಯ ಕರ್ತವ್ಯವಾಗಿದ್ದು, ಯಾವುದೇ ರೀತಿಯ ಅನ್ಯಾಯ ಅಥವಾ ಅಪರಾಧಗಳನ್ನು ಸಹಿಸಲಾಗುವುದಿಲ್ಲ ಎಂದು ತಿಳಿಸಿದರು. ಸಾರ್ವಜನಿಕರು ಯಾವುದೇ ಸಮಸ್ಯೆಗಳನ್ನು ಎದುರಿಸಿದಾಗ ತಕ್ಷಣ ಪೊಲೀಸ್ ಇಲಾಖೆಗೆ ಮಾಹಿತಿ ನೀಡುವಂತೆ ಮನವಿ ಮಾಡಿದರು.

ಇದೇ ಸಂದರ್ಭದಲ್ಲಿ ಪೊಲೀಸ್ ಇಲಾಖೆ ಮತ್ತು ಜನಸಾಮಾನ್ಯರ ನಡುವಿನ ನಂಬಿಕೆ ಮತ್ತು ಸಹಕಾರವನ್ನು ಹೆಚ್ಚಿಸಲು ಇಂತಹ ಸಭೆಗಳು ಅತ್ಯಂತ ಅಗತ್ಯವೆಂದು ಅಭಿಪ್ರಾಯ ವ್ಯಕ್ತವಾಯಿತು. ಮುಖಂಡರು ಕೂಡ ಪೊಲೀಸರ ಈ ಕ್ರಮವನ್ನು ಮೆಚ್ಚಿಕೊಂಡು, ಮುಂದಿನ ದಿನಗಳಲ್ಲಿ ಸಹ ಇಂತಹ ಸಂವಾದಗಳು ನಡೆಯಬೇಕು ಎಂದು ಅಭಿಲಾಷೆ ವ್ಯಕ್ತಪಡಿಸಿದರು.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande