ಇಂಗಳೇಶ್ವರ–ಬಿಸನಾಳ ರಸ್ತೆ ಹಾಳು : ದುರಸ್ತಿ ಆಗದಿದ್ದರೆ ಉಗ್ರ ಹೋರಾಟ ಎಚ್ಚರಿಕೆ
ವಿಜಯಪುರ, 28 ಏಪ್ರಿಲ್ (ಹಿ.ಸ.) : ಆ್ಯಂಕರ್ : ವಿಶ್ವಗುರು ಬಸವಣ್ಣನವರ ಜನ್ಮಭೂಮಿ ವಿಜಯಪುರ ಜಿಲ್ಲೆಯ ಇಂಗಳೇಶ್ವರದಿಂದ ಬಿಸನಾಳಕ್ಕೆ ಸಂಪರ್ಕಿಸುವ ರಸ್ತೆ ಸಂಪೂರ್ಣ ಹದಗೆಟ್ಟಿದ್ದು, ಸಾರ್ವಜನಿಕರು ಹಾಗೂ ರೈತರು ತೀವ್ರ ಸಂಕಷ್ಟ ಅನುಭವಿಸುತ್ತಿದ್ದಾರೆ ಎಂದು ರಾಜ್ಯ ರೈತ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ
ರಸ್ತೆ


ವಿಜಯಪುರ, 28 ಏಪ್ರಿಲ್ (ಹಿ.ಸ.) :

ಆ್ಯಂಕರ್ : ವಿಶ್ವಗುರು ಬಸವಣ್ಣನವರ ಜನ್ಮಭೂಮಿ ವಿಜಯಪುರ ಜಿಲ್ಲೆಯ ಇಂಗಳೇಶ್ವರದಿಂದ ಬಿಸನಾಳಕ್ಕೆ ಸಂಪರ್ಕಿಸುವ ರಸ್ತೆ ಸಂಪೂರ್ಣ ಹದಗೆಟ್ಟಿದ್ದು, ಸಾರ್ವಜನಿಕರು ಹಾಗೂ ರೈತರು ತೀವ್ರ ಸಂಕಷ್ಟ ಅನುಭವಿಸುತ್ತಿದ್ದಾರೆ ಎಂದು ರಾಜ್ಯ ರೈತ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಅರವಿಂದ ಕುಲಕರ್ಣಿ ಆರೋಪಿಸಿದರು.

ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಅಖಂಡ ಕರ್ನಾಟಕ ರೈತ ಸಂಘದ ವತಿಯಿಂದ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮಳೆಗಾಲದಲ್ಲಿ ಈ ರಸ್ತೆ ಸಂಪೂರ್ಣ ಕೆಸರು ಗದ್ದೆಯಾಗಿ ಮಾರ್ಪಡುವುದರಿಂದ ರೈತರು, ವಾಹನ ಸವಾರರು ಹಾಗೂ ಗ್ರಾಮಸ್ಥರು ಸಂಚಾರಕ್ಕೆ ಹರಸಾಹಸ ಪಡುವಂತಾಗಿದೆ ಎಂದು ತಿಳಿಸಿದರು.

ರಸ್ತೆ ದುರಸ್ತಿ ಕುರಿತು ಸಂಬಂಧಿತ ಅಧಿಕಾರಿಗಳನ್ನು ಪ್ರಶ್ನಿಸಿದರೂ, ಯಾವ ಇಲಾಖೆ ವ್ಯಾಪ್ತಿಗೆ ರಸ್ತೆ ಬರುತ್ತದೆ ಎಂಬುದನ್ನು ಸ್ಪಷ್ಟಪಡಿಸದೇ ಜವಾಬ್ದಾರಿಯಿಂದ ತಪ್ಪಿಸಿಕೊಳ್ಳಲಾಗುತ್ತಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

ತಕ್ಷಣವೇ ರಸ್ತೆ ದುರಸ್ತಿ ಕಾಮಗಾರಿ ಕೈಗೊಳ್ಳಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ರೈತರ ಪರವಾಗಿ ಉಗ್ರ ಹೋರಾಟ ನಡೆಸಲಾಗುವುದು ಎಂದು ಅರವಿಂದ ಕುಲಕರ್ಣಿ ಎಚ್ಚರಿಕೆ ನೀಡಿದರು.

ಪತ್ರಿಕಾಗೋಷ್ಠಿಯಲ್ಲಿ ಹಲವು ರೈತ ಮುಖಂಡರು ಉಪಸ್ಥಿತರಿದ್ದು, ರಸ್ತೆ ಸಮಸ್ಯೆ ಶೀಘ್ರ ಪರಿಹಾರಕ್ಕೆ ಒತ್ತಾಯಿಸಿದರು.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande