‘ಜನಿವಾರ’ ವಿವಾದ ; ಕಠಿಣ ಕ್ರಮಕ್ಕೆ ಅಶೋಕ ಆಗ್ರಹ
ಬೆಂಗಳೂರು, 28 ಏಪ್ರಿಲ್ (ಹಿ.ಸ.) : ಆ್ಯಂಕರ್ : ಬೆಂಗಳೂರು ಮಡಿವಾಳದಲ್ಲಿರುವ ಕೃಪಾನಿಧಿ ಸಂಸ್ಥೆಯ ಕಾಲೇಜಿನಲ್ಲಿ ನಡೆದ ಸಿಇಟಿ ಪರೀಕ್ಷೆಯ ವೇಳೆ ವಿದ್ಯಾರ್ಥಿಯ ‘ಜನಿವಾರ’ ತೆಗೆಸಿದ ಘಟನೆ ಕುರಿತು ಕಠಿಣ ಕ್ರಮಕ್ಕೆ ಪ್ರತಿಪಕ್ಷ ನಾಯಕ ಆರ್.ಅಶೋಕ ಆಗ್ರಹಿಸಿದ್ದಾರೆ. ಈ ಕುರಿತು ಎಕ್ಸನಲ್ಲಿ ಪ್ರತಿಕ್ರಿಯೆ ನ
‘ಜನಿವಾರ’ ವಿವಾದ ; ಕಠಿಣ ಕ್ರಮಕ್ಕೆ ಅಶೋಕ ಆಗ್ರಹ


ಬೆಂಗಳೂರು, 28 ಏಪ್ರಿಲ್ (ಹಿ.ಸ.) :

ಆ್ಯಂಕರ್ : ಬೆಂಗಳೂರು ಮಡಿವಾಳದಲ್ಲಿರುವ ಕೃಪಾನಿಧಿ ಸಂಸ್ಥೆಯ ಕಾಲೇಜಿನಲ್ಲಿ ನಡೆದ ಸಿಇಟಿ ಪರೀಕ್ಷೆಯ ವೇಳೆ ವಿದ್ಯಾರ್ಥಿಯ ‘ಜನಿವಾರ’ ತೆಗೆಸಿದ ಘಟನೆ ಕುರಿತು ಕಠಿಣ ಕ್ರಮಕ್ಕೆ ಪ್ರತಿಪಕ್ಷ ನಾಯಕ ಆರ್.ಅಶೋಕ ಆಗ್ರಹಿಸಿದ್ದಾರೆ.

ಈ ಕುರಿತು ಎಕ್ಸನಲ್ಲಿ ಪ್ರತಿಕ್ರಿಯೆ ನೀಡಿರುವ ಅವರು, ಈ ಘಟನೆ ಸಾಮಾನ್ಯ ಅಚಾತುರ್ಯವಲ್ಲ , ಹಿಂದೂ ಧರ್ಮದ ಮೇಲೆ ನಡೆದ ನೇರ ದಾಳಿ ಎಂದು ಆರೋಪಿಸಿದ್ದಾರೆ. ಪರೀಕ್ಷಾ ಕೇಂದ್ರಗಳಲ್ಲಿ ತಪಾಸಣೆ ಹೆಸರಿನಲ್ಲಿ ಧಾರ್ಮಿಕ ಚಿಹ್ನೆಗಳನ್ನು ಕಳಚಿಸುವುದು ಧಾರ್ಮಿಕ ಸ್ವಾತಂತ್ರ್ಯದ ಉಲ್ಲಂಘನೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಪರೀಕ್ಷಾ ವೇಳೆ ಇಂತಹ ಕ್ರಮಗಳು ವಿದ್ಯಾರ್ಥಿಗಳ ಮಾನಸಿಕ ಸ್ಥಿತಿಗೂ ಹಾನಿ ಉಂಟುಮಾಡುತ್ತವೆ ಎಂದು ತಿಳಿಸಿರುವ ಅವರು, ಕೇವಲ ಸಿಬ್ಬಂದಿಗಳ ಅಮಾನತು ಸಾಲದು ಎಂದು ಹೇಳಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಕೃಪಾನಿಧಿ ಕಾಲೇಜಿನ ಮಾನ್ಯತೆಯನ್ನು ರದ್ದುಪಡಿಸುವಂತೆ ಅವರು ಒತ್ತಾಯಿಸಿದ್ದಾರೆ. ಜೊತೆಗೆ, ತಪ್ಪಿತಸ್ಥರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಹೇಳಿದ್ದಾರೆ.

ಭವಿಷ್ಯದಲ್ಲಿ ಯಾವುದೇ ಪರೀಕ್ಷಾ ಕೇಂದ್ರಗಳಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ಸರ್ಕಾರ ಕಟ್ಟುನಿಟ್ಟಿನ ಮಾರ್ಗಸೂಚಿಗಳನ್ನು ಜಾರಿಗೊಳಿಸಬೇಕು ಎಂದು ಅಶೋಕ ಒತ್ತಾಯಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande