ಕನಕಗಿರಿ ಉತ್ಸವದ ಲಾಂಚನ ಬಿಡುಗಡೆ
ಕೊಪ್ಪಳ, 28 ಏಪ್ರಿಲ್ (ಹಿ.ಸ.) : ಆ್ಯಂಕರ್ : 16 ಮತ್ತು 17 ರಂದು ಐತಿಹಾಸಿಕ ಹಾಗೂ ಸಾಂಸ್ಕೃತಿಕ ವೈಭವವನ್ನು ಒಳಗೊಂಡ ಕನಕಗಿರಿ ಉತ್ಸವವನ್ನು ಅತ್ಯಂತ ವೈಭವದಿಂದ ಆಚರಿಸಲು ಸಕಲ ಸಿದ್ಧತೆಗಳು ಆರಂಭಗೊ0ಡಿದ್ದು, ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಉತ್ಸವದ ಅಧಿಕೃತ ಲಾಂಚನವನ್ನು ಹಿಂದುಳಿದ ವರ
ಕನಕಗಿರಿ  ಉತ್ಸವದ ಲೋಗೋ ಬಿಡುಗಡೆ


ಕನಕಗಿರಿ  ಉತ್ಸವದ ಲೋಗೋ ಬಿಡುಗಡೆ


ಕೊಪ್ಪಳ, 28 ಏಪ್ರಿಲ್ (ಹಿ.ಸ.) :

ಆ್ಯಂಕರ್ : 16 ಮತ್ತು 17 ರಂದು ಐತಿಹಾಸಿಕ ಹಾಗೂ ಸಾಂಸ್ಕೃತಿಕ ವೈಭವವನ್ನು ಒಳಗೊಂಡ ಕನಕಗಿರಿ ಉತ್ಸವವನ್ನು ಅತ್ಯಂತ ವೈಭವದಿಂದ ಆಚರಿಸಲು ಸಕಲ ಸಿದ್ಧತೆಗಳು ಆರಂಭಗೊ0ಡಿದ್ದು, ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಉತ್ಸವದ ಅಧಿಕೃತ ಲಾಂಚನವನ್ನು ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ ಮತ್ತು ಸಂಸ್ಕೃತಿ ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ್ ಎಸ್. ತಂಗಡಗಿ ಅವರು ಬಿಡುಗಡೆಗೊಳಿಸಿದರು.

ಈ ಸಂದರ್ಭ ಕೊಪ್ಪಳ ಶಾಸಕರಾದ ಕೆ.ರಾಘವೇಂದ್ರ ಹಿಟ್ನಾಳ, ಜಿಲ್ಲಾಧಿಕಾರಿ ಡಾ.ಸುರೇಶ ಬಿ.ಇಟ್ನಾಳ, ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವರ್ಣಿತ್ ನೇಗಿ, ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ, ಉಪ ವಿಭಾಗಾಧಿಕಾರಿ ಕ್ಯಾ.ಮಹೇಶ ಮಾಲಗಿತ್ತಿ, ಸೇರಿದಂತೆ ಇಲಾಖೆಗಳ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು, ಎಲ್ಲ ತಾಲ್ಲೂಕುಗಳ ತಹಶೀಲ್ದಾರರು, ತಾಲ್ಲೂಕು ಪಂಚಾಯತಿಗಳ ಕಾರ್ಯನಿರ್ವಾಹಕ ಅಧಿಕಾರಿಗಳು ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande