ಮೇ 01 ರಂದು ಭಗವಾನ್ ಬುದ್ಧ ಜಯಂತಿ
ರಾಜ್ಕುಮಾರ್
ಮೇ 01 ರಂದು ಭಗವಾನ್ ಬುದ್ಧ ಜಯಂತಿ


ಮೇ 01 ರಂದು ಭಗವಾನ್ ಬುದ್ಧ ಜಯಂತಿ


ಬಳ್ಳಾರಿ, 28 ಏಪ್ರಿಲ್ (ಹಿ.ಸ.) :

ಆ್ಯಂಕರ್ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಮಹಾನಗರ ಪಾಲಿಕೆ ಇವರ ಸಂಯುಕ್ತಾಶ್ರಯದಲ್ಲಿ ಮೇ 01 ರಂದು ಸಂಜೆ 06.30 ಗಂಟೆಗೆ ನಗರದ ಡಾ.ರಾಜ್‌ ಕುಮಾರ್ ರಸ್ತೆಯ ಸಾಂಸ್ಕೃತಿಕ ಸಮುಚ್ಚಯದ ಹೊಂಗಿರಣ ಸಭಾಂಗಣದಲ್ಲಿ ಭಗವಾನ್ ಬುದ್ಧ ಜಯಂತಿ ಕಾರ್ಯಕ್ರಮ ಏರ್ಪಡಿಸಲಾಗಿದೆ.

ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು ಹಾಗೂ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಬಿ.ಜೆಡ್.ಜಮೀರ್ ಅಹ್ಮದ್ ಖಾನ್ ಅವರು ಕಾರ್ಯಕ್ರಮ ಉದ್ಘಾಟಿಸುವರು. ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ಅವರು ಅಧ್ಯಕ್ಷತೆ ವಹಿಸುವರು.

ಮುಖ್ಯ ಅತಿಥಿಗಳಾಗಿ ಸಂಸದರಾದ ಈ.ತುಕರಾಮ್, ಕೆ.ರಾಜಶೇಖರ ಬಸವರಾಜ ಹಿಟ್ನಾಳ್, ರಾಜ್ಯಸಭೆ ಸದಸ್ಯ ಡಾ.ಸೈಯದ್ ನಾಸೀರ್ ಹುಸೇನ್, ಕರ್ನಾಟಕ ರಾಜ್ಯ ಸಹಕಾರ ಕೈಮಗ್ಗ ನೇಕಾರ ಮಹಾಮಂಡಳಿ ನಿಯಮಿತ(ಕಾವೇರಿ ಹ್ಯಾಂಡ್ಲೂಮ್ಸ್)ದ ಅಧ್ಯಕ್ಷರೂ ಆದ ಕಂಪ್ಲಿ ಶಾಸಕ ಜೆ.ಎನ್.ಗಣೇಶ್, ಡಾ.ಬಾಬು ಜಗಜೀವನ್ ರಾಂ ಚರ್ಮ ಕೈಗಾರಿಕಾ ಅಭಿವೃದ್ದಿ ನಿಗಮ ನಿಯಮಿತದ ಅಧ್ಯಕ್ಷ ಮುಂಡರಗಿ ನಾಗರಾಜ್, ಬಳ್ಳಾರಿ ಗ್ರಾಮೀಣ ಶಾಸಕ ಬಿ.ನಾಗೇಂದ್ರ, ಸಿರುಗುಪ್ಪ ಶಾಸಕ ಬಿ.ಎಂ.ನಾಗರಾಜ, ಸಂಡೂರು ಶಾಸಕಿ ಈ.ಅನ್ನಪೂರ್ಣ, ವಿಧಾನ ಪರಿಷತ್ ಶಾಸಕರಾದ ಡಾ.ಚಂದ್ರಶೇಖರ ಬಿ.ಪಾಟೀಲ, ಶಶೀಲ್ ಜಿ.ನಮೋಶಿ, ವೈ.ಎಂ.ಸತೀಶ್, ಮಹಾನಗರ ಪಾಲಿಕೆಯ ಮಹಾಪೌರರಾದ ಪಿ.ಗಾದೆಪ್ಪ, ಬಳ್ಳಾರಿ ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಜೆ.ಎಸ್.ಆಂಜನೇಯಲು, ಕರ್ನಾಟಕ ಸ್ಟೇಟ್ ಮಿನರಲ್ಸ್ ಕಾರ್ಪೋರೇಷನ್ ಲಿಮಿಟೆಡ್ ನ ಉಪಾಧ್ಯಕ್ಷ ಹೆಚ್.ಲಕ್ಷö್ಮಣ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಕೆ.ಇ.ಚಿದಾನಂದಪ್ಪ, ಭಾರತೀಯ ಬೌದ್ಧ ಮಹಾಸಭಾ ಜಿಲ್ಲಾ ಘಟಕ ಅಧ್ಯಕ್ಷ ಕಮಲರತ್ನ ಬಂತೇಜಿ ಸೇರಿದಂತೆ ಇತರರು ಭಾಗವಹಿಸುವರು.

ಬಳ್ಳಾರಿಯ ಎಸ್ಎಸ್ಎ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಸೋಮನಾಥ್ ಸಿ.ಹೆಚ್ ಅವರು ಜಯಂತಿ ಕುರಿತು ವಿಶೇಷ ಉಪನ್ಯಾಸ ನೀಡುವರು. ಸಿರುಗುಪ್ಪ ದಳವಾಯಿ ಅಂಬಣ್ಣ ತಂಡದಿ0ದ ಭಕ್ತಿ ಸಂಗೀತ ಕಾರ್ಯಕ್ರಮ ಇರಲಿದೆ.

*ಮೆರವಣಿಗೆ:*

ಜಯಂತಿ ಅಂಗವಾಗಿ ಅಂದು ಸಂಜೆ 05 ಗಂಟೆಗೆ ಮೆರವಣಿಗೆ ನಡೆಯಲಿದೆ. ಮೆರವಣಿಗೆಯು ಬಳ್ಳಾರಿ ನಗರದ ಹಳೇ ಜಿಲ್ಲಾಧಿಕಾರಿಗಳ ಕಚೇರಿ ಆವರಣದಿಂದ ಆರಂಭಗೊ0ಡು ಗಡಿಗೆ ಚನ್ನಪ್ಪ ವೃತ್ತ, ಡಾ.ರಾಜ್ ಕುಮಾರ್ ರಸ್ತೆ, ಇಂದಿರಾ ವೃತ್ತ, ಸಾಂಸ್ಕೃತಿಕ ಸಮುಚ್ಚಯದ ಸಭಾಂಗಣದವರೆಗೆ ನಡೆಯಲಿದೆ.

ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ., ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸುಮನ್ ಡಿ.ಪನ್ನೇಕರ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಹಾರೀಸ್ ಸುಮೇರ್, ಅಪರ ಜಿಲ್ಲಾಧಿಕಾರಿ ಮಹಮ್ಮದ್ ಝುಬೇರ್.ಎನ್., ಮಹಾನಗರ ಪಾಲಿಕೆ ಆಯುಕ್ತ ಪಿ.ಎಸ್. ಮಂಜುನಾಥ ಸೇರಿದಂತೆ ಇತರರು ಉಪಸ್ಥಿತರಿರುವರು.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande