ಜಮಖಂಡಿಯಲ್ಲಿ ಪಂಚಕಲ್ಯಾಣಕ ಮಹೋತ್ಸವ : ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ಗೆ ಸನ್ಮಾನ
ಬಾಗಲಕೋಟೆ, 28 ಏಪ್ರಿಲ್ (ಹಿ.ಸ.) : ಆ್ಯಂಕರ್ : ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕು ಆಲಗೂರು ಗ್ರಾಮದಲ್ಲಿ ರಾಷ್ಟ್ರಸಂತ ಆಚಾರ್ಯ ಶ್ರೀ 108 ಗುಣಧರನಂದಿ ಮಹಾರಾಜರ ಪಾವನ ಸಾನಿಧ್ಯದಲ್ಲಿ ನಡೆಯುತ್ತಿರುವ ಪಂಚಕಲ್ಯಾಣಕ ಮಹೋತ್ಸವ ಭಕ್ತಿಭಾವದಿಂದ ನೆರವೇರಿತು. ಈ ಸಂದರ್ಭದಲ್ಲಿ ವಿಜಯಪುರ ಶಾಸಕ ಬಸನಗೌಡ ಪಾ
ಸಭೆ


ಬಾಗಲಕೋಟೆ, 28 ಏಪ್ರಿಲ್ (ಹಿ.ಸ.) :

ಆ್ಯಂಕರ್ : ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕು ಆಲಗೂರು ಗ್ರಾಮದಲ್ಲಿ ರಾಷ್ಟ್ರಸಂತ ಆಚಾರ್ಯ ಶ್ರೀ 108 ಗುಣಧರನಂದಿ ಮಹಾರಾಜರ ಪಾವನ ಸಾನಿಧ್ಯದಲ್ಲಿ ನಡೆಯುತ್ತಿರುವ ಪಂಚಕಲ್ಯಾಣಕ ಮಹೋತ್ಸವ ಭಕ್ತಿಭಾವದಿಂದ ನೆರವೇರಿತು.

ಈ ಸಂದರ್ಭದಲ್ಲಿ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಪೂಜ್ಯ ಆಚಾರ್ಯರು ವಾತ್ಸಲ್ಯ ಪೂರ್ವಕವಾಗಿ ಸನ್ಮಾನಿಸಿ ಆಶೀರ್ವದಿಸಿದರು.

ಕಾರ್ಯಕ್ರಮದಲ್ಲಿ ಭಕ್ತರು ಹಾಗೂ ಸ್ಥಳೀಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಧಾರ್ಮಿಕ ಉತ್ಸಾಹ ವ್ಯಕ್ತಪಡಿಸಿದರು.

ಇದೇ ವೇಳೆ ವಿಜಯಪುರ ಮಹಾನಗರ ಪಾಲಿಕೆ ಸದಸ್ಯರಾದ ಶಿವರುದ್ರ ಬಾಗಲಕೋಟ ಕೂಡ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದು ಧಾರ್ಮಿಕ ಕಾರ್ಯಕ್ರಮಕ್ಕೆ ಮತ್ತಷ್ಟು ಮೆರುಗು ನೀಡಿದರು.

ಪಂಚಕಲ್ಯಾಣಕ ಮಹೋತ್ಸವವು ಗ್ರಾಮದಲ್ಲಿ ಆಧ್ಯಾತ್ಮಿಕ ವಾತಾವರಣ ನಿರ್ಮಿಸಿ, ಭಕ್ತರಲ್ಲಿ ಭಕ್ತಿ ಮತ್ತು ಸೌಹಾರ್ದತೆಯನ್ನು ಹೆಚ್ಚಿಸಿದೆ.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande