ಬರಗಾಲ : ನೀರಿನ ಸಮಸ್ಯೆ ಪರಿಹಾರಕ್ಕೆ ಪ್ರತಿಜಿಲ್ಲೆಗೆ ₹50 ಕೋಟಿ ಬಿಡುಗಡೆಗೆ ಒತ್ತಾಯ
ಬಾಗಲಕೋಟೆ, 28 ಏಪ್ರಿಲ್ (ಹಿ.ಸ.) : ಆ್ಯಂಕರ್ : ರಾಜ್ಯದಲ್ಲಿ ಉಂಟಾದ ಬರಗಾಲದ ಹಿನ್ನೆಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ತೀವ್ರವಾಗಿದ್ದು, ಇದನ್ನು ಪರಿಣಾಮಕಾರಿಯಾಗಿ ನಿವಾರಿಸಲು ಪ್ರತಿ ಜಿಲ್ಲೆಗೆ ಕನಿಷ್ಠ ₹50 ಕೋಟಿ ಬಿಡುಗಡೆ ಮಾಡಬೇಕು ಎಂದು ಸಂಸದ ಗೋವಿಂದ ಕಾರಜೋಳ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ
ಕಾರಜೋಳ


ಬಾಗಲಕೋಟೆ, 28 ಏಪ್ರಿಲ್ (ಹಿ.ಸ.) :

ಆ್ಯಂಕರ್ : ರಾಜ್ಯದಲ್ಲಿ ಉಂಟಾದ ಬರಗಾಲದ ಹಿನ್ನೆಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ತೀವ್ರವಾಗಿದ್ದು, ಇದನ್ನು ಪರಿಣಾಮಕಾರಿಯಾಗಿ ನಿವಾರಿಸಲು ಪ್ರತಿ ಜಿಲ್ಲೆಗೆ ಕನಿಷ್ಠ ₹50 ಕೋಟಿ ಬಿಡುಗಡೆ ಮಾಡಬೇಕು ಎಂದು ಸಂಸದ ಗೋವಿಂದ ಕಾರಜೋಳ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಒತ್ತಾಯಿಸಿದರು.

ಬಾಗಲಕೋಟೆ ನಗರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಆಡಳಿತ ನಡೆಸುವವರು ಜನರ ಮೂಲಭೂತ ಅಗತ್ಯಗಳಿಗೆ ಆದ್ಯತೆ ನೀಡಬೇಕು ಎಂದು ಹೇಳಿದರು. ವಿಶೇಷವಾಗಿ ನೀರಿನ ಸಮಸ್ಯೆ ಪರಿಹಾರಕ್ಕೆ ತುರ್ತು ಕ್ರಮಗಳನ್ನು ಕೈಗೊಳ್ಳುವುದು ಸರ್ಕಾರದ ಹೊಣೆಗಾರಿಕೆ ಎಂದು ಅವರು ತಿಳಿಸಿದರು.

ಬರ ಪರಿಸ್ಥಿತಿಯಿಂದ ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ಕುಡಿಯುವ ನೀರಿನ ಕೊರತೆ ಉಂಟಾಗಿದ್ದು, ಇದರಿಂದ ಜನರು ಸಂಕಷ್ಟ ಅನುಭವಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಸರ್ಕಾರ ತಕ್ಷಣವೇ ಅಗತ್ಯ ಅನುದಾನ ಬಿಡುಗಡೆ ಮಾಡಿ ಸಮಸ್ಯೆ ನಿವಾರಣೆಗೆ ಕ್ರಮ ಕೈಗೊಳ್ಳಬೇಕು ಎಂದು ಅವರು ಒತ್ತಿ ಹೇಳಿದರು.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande