


ಬಳ್ಳಾರಿ, 28 ಏಪ್ರಿಲ್ (ಹಿ.ಸ.) :
ಆ್ಯಂಕರ್ : ಪ್ರಧಾನಿ ನರೇಂದ್ರ ಮೋದಿ ಅವರನ್ನು `ಭಯೋತ್ಪಾದಕ' ಎಂದು ಕರೆದಿರುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರು ದೇಶದ ಜನತೆಯ ಕ್ಷಮೆ ಕೇಳಬೇಕು ಎಂದು ಜಿಲ್ಲಾ ಕಾಂಗ್ರೆಸ್ ಕಚೇರಿಯನ್ನು ಜಿಲ್ಲಾ ಬಿಜೆಪಿ ಮುಖಂಡರು ಮಂಗಳವಾರ ಮುತ್ತಿಗೆ ಹಾಕಿ, ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಜಿಲ್ಲಾ ಬಿಜೆಪಿ ಅಧ್ಯಕ್ಷರಾಗಿರುವ ಅನಿಲ್ ನಾಯ್ಡು ನೇತೃತ್ವದಲ್ಲಿ ಕುಮಾರಸ್ವಾಮಿ ಗುಡಿಯಿಂದ ಶ್ರೀಕನಕ ವೃತ್ತದಲ್ಲಿ ಇರುವ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಪಾದಯಾತ್ರೆಯಲ್ಲಿ ಹೊರಟ ಜಿಲ್ಲಾ ಬಿಜೆಪಿ ಮುಖಂಡರನ್ನು ಪೊಲೀಸ್ ಪಡೆಗಳು ಮಾರ್ಗಮಧ್ಯದಲ್ಲಿಯೇ ಮಾಜಿ ಶಾಸಕ ಜಿ. ಸೋಮಶೇಖರರೆಡ್ಡಿ ಮತ್ತು ಬಿಜೆಪಿ ಮುಖಂಡರನ್ನು ತಡೆದು, ವಾಹನಗಳಲ್ಲಿ ಹತ್ತಿಸಿಕೊಂಡು ಹೊರಟರು.
ಜಿ. ಸೋಮಶೇಖರರೆಡ್ಡಿ ಅವರು, ಮಲ್ಲಿಕಾರ್ಜುನಖರ್ಗೆ ಅವರು ವಿಶ್ವವೇ ಮೆಚ್ಚಿರುವ ಪ್ರಧಾನಿ ನರೇಂದ್ರ ಮೋದಿ ಅವರನ್ನು `ಭಯೋತ್ಪಾದಕ' ಎಂದು ಕರೆದು ತಮ್ಮ ನೀಚ ಮನಸ್ಥಿತಿಯನ್ನು ತೋರಿದ್ದಾರೆ. ಮಲ್ಲಿಕಾರ್ಜುನ ಖರ್ಗೆ ಅವರು ತಕ್ಷಣವೇ ದೇಶದ ಜನತೆಯ ಕ್ಷಮೆ ಕೇಳಬೇಕು. ಇಲ್ಲವಾದಲ್ಲಿ ದೇಶಾದ್ಯಂತ ಬಿಜೆಪಿಯವರ ವಿರೋಧವನ್ನು ಎದುರಿಸಬೇಕು ಎಂದು ಹೇಳಿದರು.
ವಿಧಾನಪರಿಷತ್ತಿನ ಸದಸ್ಯ ವೈ.ಎಂ. ಸತೀಶ್ ಅವರು, ರಾಷ್ಟ್ರೀಯ ಕಾಂಗ್ರೆಸ್ ಅಧ್ಯಕ್ಷರಾಗಿರುವ ಮಲ್ಲಿಕಾರ್ಜುನ ಖರ್ಗೆ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಟೀಕಿಸುವ ಆತುರದಲ್ಲಿ `ಭಯೋತ್ಪಾದಕ' ಎಂದು ಕರೆಯುವ ಮೂಲಕ ದೊಡ್ಡ ಅಪರಾಧವನ್ನೇ ಮಾಡಿದ್ದಾರೆ. ಮಲ್ಲಿಕಾರ್ಜುನ ಖರ್ಗೆ ಅವರು ದೇಶದ ಜನತೆಯ ಕ್ಷಮೆಯನ್ನು ಕೇಳಬೇಕು ಎಂದು ಆಗ್ರಹಿಸಿದರು.
ಜಿಲ್ಲಾ ಬಿಜೆಪಿ ಅಧ್ಯಕ್ಷ ಅನಿಲ್ ನಾಯ್ಡು ಅವರು, ವಿಶ್ವವೇ ಮೆಚ್ಚಿರುವ ನರೇಂದ್ರ ಮೋದಿ ಅವರನ್ನು ಮಲ್ಲಿಕಾರ್ಜುನ ಖರ್ಗೆ ಅವರು
`ಭಯೋತ್ಪಾದಕ' ಎಂದಿರುವುದು ಅತ್ಯಂದ ದೊಡ್ಡ ತಪ್ಪು ಎಂದು ಅವರು ತಿಳಿಸಿದರು.
ಪ್ರತಿಭಟನೆಯಲ್ಲಿ ಬಿಜೆಪಿ ಮುಖಂಡರು ಪಾಲ್ಗೊಂಡಿದ್ದರು.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್