ಉತ್ನಾಳದಲ್ಲಿ ಹುಲಿಗೆಮ್ಮ ದೇವಿಯ ನೂತನ ದೇವಸ್ಥಾನ ಉದ್ಘಾಟನೆ, ಮೂರ್ತಿ ಪ್ರತಿಷ್ಠಾಪನೆಗೆ ಭಕ್ತಿ ಸಂಭ್ರಮ
ವಿಜಯಪುರ, 28 ಏಪ್ರಿಲ್ (ಹಿ.ಸ.) : ಆ್ಯಂಕರ್ : ವಿಜಯಪುರ ಜಿಲ್ಲೆಯ ದೇವರಹಿಪ್ಪರಗಿ ಮತ ಕ್ಷೇತ್ರದ ಉತ್ನಾಳ ಗ್ರಾಮದಲ್ಲಿ ಹುಲಿಗೆಮ್ಮ ದೇವಿ ದೇವಸ್ಥಾನದ ನೂತನ ಕಟ್ಟಡದ ಉದ್ಘಾಟನೆ ಹಾಗೂ ಮೂರ್ತಿ ಪ್ರತಿಷ್ಠಾಪನಾ ಕಾರ್ಯಕ್ರಮವನ್ನು ಶಾಸಕ ರಾಜುಗೌಡ ಪಾಟೀಲ್ ಭಕ್ತಿಭಾವದಿಂದ ಸಂಭ್ರಮದಿಂದ ನೆರವೇರಿತು. ಕಾರ್ಯ
ಸ್ಥಾಪಿಸಿ


ವಿಜಯಪುರ, 28 ಏಪ್ರಿಲ್ (ಹಿ.ಸ.) :

ಆ್ಯಂಕರ್ : ವಿಜಯಪುರ ಜಿಲ್ಲೆಯ ದೇವರಹಿಪ್ಪರಗಿ ಮತ ಕ್ಷೇತ್ರದ ಉತ್ನಾಳ ಗ್ರಾಮದಲ್ಲಿ ಹುಲಿಗೆಮ್ಮ ದೇವಿ ದೇವಸ್ಥಾನದ ನೂತನ ಕಟ್ಟಡದ ಉದ್ಘಾಟನೆ ಹಾಗೂ ಮೂರ್ತಿ ಪ್ರತಿಷ್ಠಾಪನಾ ಕಾರ್ಯಕ್ರಮವನ್ನು ಶಾಸಕ ರಾಜುಗೌಡ ಪಾಟೀಲ್ ಭಕ್ತಿಭಾವದಿಂದ ಸಂಭ್ರಮದಿಂದ ನೆರವೇರಿತು.

ಕಾರ್ಯಕ್ರಮದ ಅಂಗವಾಗಿ ಬೆಳಿಗ್ಗೆ ವಿಶೇಷ ಪೂಜೆಗಳು, ಹೋಮ-ಹವನಗಳು ಹಾಗೂ ಧಾರ್ಮಿಕ ವಿಧಿವಿಧಾನಗಳು ನೆರವೇರಿಸಲ್ಪಟ್ಟವು. ಪೂಜ್ಯರ ಮಾರ್ಗದರ್ಶನದಲ್ಲಿ ಮೂರ್ತಿ ಪ್ರತಿಷ್ಠಾಪನೆ ಕಾರ್ಯ ವೈದಿಕ ಮಂತ್ರೋಚ್ಚಾರಣೆಗಳ ನಡುವೆ ನಡೆಯಿತು. ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ದೇವಿಯ ಆಶೀರ್ವಾದ ಪಡೆದರು. ಬಳಿಕ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದ ಶಾಸಕರು, ಗ್ರಾಮದಲ್ಲಿ ಹೊಸ ದೇವಸ್ಥಾನ ನಿರ್ಮಾಣವಾಗಿರುವುದು ಧಾರ್ಮಿಕ ಮತ್ತು ಸಾಂಸ್ಕೃತಿಕ ಏಕತೆಗೆ ಸಾಕ್ಷಿಯಾಗಿದ್ದು, ಇಂತಹ ಕಾರ್ಯಗಳು ಸಮಾಜದಲ್ಲಿ ಭಕ್ತಿ ಮತ್ತು ಸೌಹಾರ್ದತೆಯನ್ನು ಬೆಳೆಸುತ್ತವೆ ಎಂದು ತಿಳಿಸಲಾಯಿತು. ದೇವಿಯ ಕೃಪೆಯಿಂದ ಗ್ರಾಮದಲ್ಲಿ ಶಾಂತಿ, ಸಮೃದ್ಧಿ ನೆಲೆಸಲಿ ಎಂಬ ಆಶಯ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಪೂಜ್ಯರು, ಗ್ರಾಮದ ಹಿರಿಯರು, ತಾಯಂದಿರು, ಯುವಕ ಮಿತ್ರರು ಸೇರಿದಂತೆ ಅನೇಕರು ಉಪಸ್ಥಿತರಿದ್ದು, ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು. ಭಕ್ತರ ಭಜನೆ, ಜೈಘೋಷಗಳು ಹಾಗೂ ಧಾರ್ಮಿಕ ಕಾರ್ಯಕ್ರಮಗಳು ಸಮಾರಂಭಕ್ಕೆ ವಿಶೇಷ ಮೆರುಗು ನೀಡಿದವು.

ಉತ್ನಾಳ ಗ್ರಾಮದಲ್ಲಿ ನಡೆದ ಈ ದೇವಸ್ಥಾನ ಉದ್ಘಾಟನೆ ಹಾಗೂ ಮೂರ್ತಿ ಪ್ರತಿಷ್ಠಾಪನಾ ಕಾರ್ಯಕ್ರಮವು ಭಕ್ತರ ಮನಸ್ಸಿನಲ್ಲಿ ಭಕ್ತಿ, ಸಂತೋಷ ಮತ್ತು ಸಂಭ್ರಮವನ್ನು ತುಂಬಿದ ಮಹತ್ವದ ಕ್ಷಣಕ್ಕೆ ಸಾಕ್ಷಿಯಾಯಿತು.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande