ಕಾಂಗ್ರೆಸ್ ವಿರುದ್ಧ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ವಾಗ್ದಾಳಿ
ನವದೆಹಲಿ, 28 ಏಪ್ರಿಲ್ (ಹಿ.ಸ.) : ಆ್ಯಂಕರ್ : ಕಾಂಗ್ರೆಸ್ ನ ''ಬ್ರದರ್ಸ್'' ಕುಕ್ಕರ್ ಬಾಂಬ್ ಬ್ಲಾಸ್ಟರ್ ಎಂಬುದು ಸ್ಪಷ್ಟವಾಗಿದೆ. ಇಂಥವರನ್ನೆಲ್ಲ ಕುಟುಂಬದವರಂತೆ ಪರಿಗಣಿಸುವ ಪಕ್ಷವನ್ನು ಭಾರತ ಎಂದಿಗೂ ಸ್ವೀಕರಿಸುವುದಿಲ್ಲ ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ ಜೋಶಿ ಹೇಳ
ಕಾಂಗ್ರೆಸ್ ವಿರುದ್ಧ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ವಾಗ್ದಾಳಿ


ನವದೆಹಲಿ, 28 ಏಪ್ರಿಲ್ (ಹಿ.ಸ.) :

ಆ್ಯಂಕರ್ : ಕಾಂಗ್ರೆಸ್ ನ 'ಬ್ರದರ್ಸ್' ಕುಕ್ಕರ್ ಬಾಂಬ್ ಬ್ಲಾಸ್ಟರ್ ಎಂಬುದು ಸ್ಪಷ್ಟವಾಗಿದೆ. ಇಂಥವರನ್ನೆಲ್ಲ ಕುಟುಂಬದವರಂತೆ ಪರಿಗಣಿಸುವ ಪಕ್ಷವನ್ನು ಭಾರತ ಎಂದಿಗೂ ಸ್ವೀಕರಿಸುವುದಿಲ್ಲ ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ ಜೋಶಿ ಹೇಳಿದ್ದಾರೆ.

'ಮಂಗಳೂರು ಕುಕ್ಕರ್ ಬ್ಲಾಸ್ಟ್' ಆರೋಪಿಗೆ ವಿಶೇಷ ನ್ಯಾಯಾಲಯ ವಿಧಿಸಿರುವ ತೀರ್ಪು ಉಲ್ಲೇಖಿಸಿ ಪ್ರತಿಕ್ರಿಯಿಸಿರುವ ಸಚಿವರು, 'ಇಂದು ನ್ಯಾಯ ಗೆದ್ದಿದೆ ಮತ್ತು ಕಾಂಗ್ರೆಸ್ ಪಕ್ಷದ ಕೆಟ್ಟ ಮನಸ್ಥಿತಿ ಸೋತಿದೆ' ಎಂದಿದ್ದಾರೆ.

ಭಯೋತ್ಪಾದನೆಯಲ್ಲಿ ತೊಡಗಿದವರನ್ನು ಬ್ರದರ್ಸ್ ಎನ್ನುತ್ತಿದ್ದ ಕಾಂಗ್ರೆಸ್ ನಾಯಕರಿಗೆ ಇದೀಗ ನ್ಯಾಯಾಲಯದ ತೀರ್ಪಿನಿಂದ ಮುಖಭಂಗವಾಗಿದೆ. ಕಾಂಗ್ರೆಸ್ ಪಕ್ಷದ 'ಬ್ರದರ್ ಒಬ್ಬ ಭಯೋತ್ಪಾದಕ' ಎಂದರೆ ಕಾಂಗ್ರೆಸ್ ನ ಓಲೈಕೆ ರಾಜಕಾರಣ ಅದೆಷ್ಟು ಅಪಾಯಕಾರಿ ಮಾತು ಆತಂಕಕಾರಿ ಎಂಬುದು ಬಹಿರಂಗಗೊಂಡಿದೆ ಎಂದು ಜೋಶಿ ವಾಗ್ದಾಳಿ ನಡೆಸಿದ್ದಾರೆ.

*ಬ್ರದರ್ಸ್ ಎನ್ನುವುದು ನಾಚಿಕೆಗೇಡು:*

ಐಸಿಸ್ ಸಂಬಂಧಿತ ಭಯೋತ್ಪಾದನೆ ಪ್ರಕರಣದಲ್ಲಿ ತೊಡಗಿದ ವ್ಯಕ್ತಿಗಳನ್ನು ಡಿಕೆ ಶಿವಕುಮಾರ್ ಮತ್ತು ಕಾಂಗ್ರೆಸ್ ನಾಯಕರು ಬ್ರದರ್ಸ್ ಎನ್ನುವುದು ನಾಚಿಕೆಗೇಡಿನ ಸಂಗತಿ ಎಂದು ಕಿಡಿ ಕಾರಿದ್ದಾರೆ.

*ಗಲಭೆಕೋರರ ಪರ ಇದೆಯೇ ಈ ಸರ್ಕಾರ:?* ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಗಲಭೆಕೋರರ ಪರ ಇದ್ದಂತಿದೆ. 2020ರ ದೆಹಲಿ ಗಲಭೆ ಪ್ರಕರಣದ ಆರೋಪಿ ಉಮರ್ ಖಾಲಿದ್ ಗೆ ಬೆಂಗಳೂರಿನಲ್ಲಿ ಕಾರ್ಯಕ್ರಮ ನಡೆಸಲು ಸರ್ಕಾರ ಅನುಮತಿ ನೀಡಿರುವುದು ತೀವ್ರ ಖಂಡನೀಯ ಎಂದು ಸಚಿವ ಪ್ರಲ್ಹಾದ ಜೋಶಿ ಹರಿ ಹಾಯ್ದಿದ್ದಾರೆ.

*ತಕ್ಷಣ ಅನುಮತಿ ರದ್ದುಪಡಿಸಲು:*

ಭಯೋತ್ಪಾದನೆ ಹಿನ್ನೆಲೆ ಇರುವಂತಹ ವ್ಯಕ್ತಿಗಳಿಗೆ ವೇದಿಕೆ ಕಲ್ಪಿಸುವುದು ಸೂಕ್ತವಲ್ಲ. ಕರ್ನಾಟಕ ಸರ್ಕಾರ ತಕ್ಷಣ ಆಯೋಜಕರಿಗೆ ನೀಡಿರುವ ಅನುಮತಿಯನ್ನು ರದ್ದುಗೊಳಿಸಬೇಕು ಎಂದು ಸಚಿವರು ಆಗ್ರಹಿಸಿದ್ದಾರೆ.

ರಾಷ್ಟ್ರೀಯ ಭದ್ರತೆ ವಿಚಾರದಲ್ಲಿ ರಾಜಿ ಮಾಡಿಕೊಳ್ಳಲು ಎಂದಿಗೂ ಸಾಧ್ಯವಿಲ್ಲ. ರಾಜ್ಯ ಸರ್ಕಾರ ಸಾರ್ವಜನಿಕ ಸುರಕ್ಷತೆ ಮತ್ತು ಕಾನೂನುಗಳ ನಿಯಮಕ್ಕೆ ಆದ್ಯತೆ ನೀಡಬೇಕೆಂದು ಆಗ್ರಹಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande