ಬಾಗಲಕೋಟೆಯಲ್ಲಿ ಮಹಿಳಾ ಮೀಸಲಾತಿ ಜಾರಿಗೆ ಸಹಿ ಸಂಗ್ರಹ ಅಭಿಯಾನಕ್ಕೆ ಚಾಲನೆ
ಬಾಗಲಕೋಟೆ, 28 ಏಪ್ರಿಲ್ (ಹಿ.ಸ.) : ಆ್ಯಂಕರ್ : ಮಹಿಳಾ ಮೀಸಲಾತಿ ಜಾರಿಗೆ ಒತ್ತಾಯಿಸಿ ಕೆಪಿಸಿಸಿ ಮಹಿಳಾ ಘಟಕದ ವತಿಯಿಂದ ನಗರದಲ್ಲಿ ಸಹಿ ಸಂಗ್ರಹ ಅಭಿಯಾನಕ್ಕೆ ಇಂದು ಬಾಗಲಕೋಟೆಯಲ್ಲಿ ಅಧಿಕೃತವಾಗಿ ಚಾಲನೆ ನೀಡಲಾಯಿತು. ಮಹಿಳೆಯರ ರಾಜಕೀಯ ಪ್ರತಿನಿಧಿತ್ವವನ್ನು ಹೆಚ್ಚಿಸುವ ಉದ್ದೇಶದಿಂದ ಈ ಅಭಿಯಾನ ಹಮ
ಸಹಿ


ಬಾಗಲಕೋಟೆ, 28 ಏಪ್ರಿಲ್ (ಹಿ.ಸ.) :

ಆ್ಯಂಕರ್ : ಮಹಿಳಾ ಮೀಸಲಾತಿ ಜಾರಿಗೆ ಒತ್ತಾಯಿಸಿ ಕೆಪಿಸಿಸಿ ಮಹಿಳಾ ಘಟಕದ ವತಿಯಿಂದ ನಗರದಲ್ಲಿ ಸಹಿ ಸಂಗ್ರಹ ಅಭಿಯಾನಕ್ಕೆ ಇಂದು ಬಾಗಲಕೋಟೆಯಲ್ಲಿ ಅಧಿಕೃತವಾಗಿ ಚಾಲನೆ ನೀಡಲಾಯಿತು.

ಮಹಿಳೆಯರ ರಾಜಕೀಯ ಪ್ರತಿನಿಧಿತ್ವವನ್ನು ಹೆಚ್ಚಿಸುವ ಉದ್ದೇಶದಿಂದ ಈ ಅಭಿಯಾನ ಹಮ್ಮಿಕೊಳ್ಳಲಾಗಿದೆ.ಅಭಿಯಾನಕ್ಕೆ ಚಾಲನೆ ನೀಡಿದ ಕೆಪಿಸಿಸಿ ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಸುಮಿತ್ರಾ ಗುಳಬಾಳ ಮಾತನಾಡಿ, ಮಹಿಳೆಯರಿಗೆ ಸಮಾನ ಹಕ್ಕು ಮತ್ತು ಅವಕಾಶಗಳು ಸಿಗಬೇಕಾದರೆ ಮೀಸಲಾತಿ ಜಾರಿ ಅಗತ್ಯವಾಗಿದೆ ಎಂದು ತಿಳಿಸಿದರು. ಸಮಾಜದ ಎಲ್ಲಾ ವರ್ಗದ ಮಹಿಳೆಯರು ರಾಜಕೀಯವಾಗಿ ಸಬಲರಾಗಬೇಕೆಂಬ ಉದ್ದೇಶದಿಂದ ಈ ಅಭಿಯಾನವನ್ನು ಕೈಗೊಳ್ಳಲಾಗಿದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಮಹಿಳಾ ಘಟಕದ ರಾಜ್ಯ ಕಾರ್ಯದರ್ಶಿ ಮಂಜುಳಾ ಕಮತಗಿ ಮಾತನಾಡಿ, ಮಹಿಳಾ ಮೀಸಲಾತಿ ಜಾರಿಯಾದರೆ ದೇಶದ ಅಭಿವೃದ್ಧಿಗೆ ಮತ್ತಷ್ಟು ಬಲ ದೊರೆಯುತ್ತದೆ. ಮಹಿಳೆಯರು ನಿರ್ಧಾರಾತ್ಮಕ ಸ್ಥಾನಗಳಲ್ಲಿ ಹೆಚ್ಚು ಭಾಗವಹಿಸುವಂತಾಗುತ್ತದೆ ಎಂದು ಅಭಿಪ್ರಾಯಪಟ್ಟರು.

ಕಾರ್ಯಕ್ರಮದಲ್ಲಿ ಕೆಪಿಸಿಸಿ ಜಿಲ್ಲಾಧ್ಯಕ್ಷ ಎಸ್.ಜಿ. ನಂಜಯ್ಯನಮಠ ಸೇರಿದಂತೆ ಹಲವು ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದು, ಸಾರ್ವಜನಿಕರಿಂದ ಸಹಿ ಸಂಗ್ರಹಿಸಿ ಅಭಿಯಾನಕ್ಕೆ ಬೆಂಬಲ ಕೋರಿದರು.

ಈ ಸಹಿ ಸಂಗ್ರಹ ಅಭಿಯಾನಕ್ಕೆ ಸಾರ್ವಜನಿಕರಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದ್ದು, ಮಹಿಳಾ ಸಬಲೀಕರಣದ ದಿಶೆಯಲ್ಲಿ ಮಹತ್ವದ ಹೆಜ್ಜೆಯಾಗಿದೆ ಎಂದು ಸಂಘಟಕರು ಅಭಿಪ್ರಾಯಪಟ್ಟರು.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande