
ಬೆಂಗಳೂರು, 28 ಏಪ್ರಿಲ್ (ಹಿ.ಸ.) :
ಆ್ಯಂಕರ್ : ರಾಜ್ಯದಾದ್ಯಂತ ಇಂದು ಒಣಹವೆ ಹಾಗೂ ಬಿಸಿಲಿನ ವಾತಾವರಣ ಮುಂದುವರಿಯುವ ಸಾಧ್ಯತೆ ಇರುವುದಾಗಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮಧ್ಯಾಹ್ನ ವೇಳೆಯಲ್ಲಿ ಉಷ್ಣಾಂಶ ಹೆಚ್ಚಾಗಿ ಜನರು ಬಿಸಿಗಾಳಿಯ ತೀವ್ರತೆಯನ್ನು ಅನುಭವಿಸುವ ಸಾಧ್ಯತೆ ಇದೆ.
ಮಧ್ಯಾಹ್ನ ನಂತರ ರಾಜ್ಯದ ಹಲವು ಭಾಗಗಳಲ್ಲಿ ಮೋಡ ಕವಿದ ವಾತಾವರಣ ನಿರ್ಮಾಣವಾಗುವ ಸಾಧ್ಯತೆ ಇದ್ದು, ಅಲ್ಲಲ್ಲಿ ಗುಡುಗು–ಸಿಡಿಲು ಸಹಿತ ಜೋರಾದ ಗಾಳಿಯೊಂದಿಗೆ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ. ವಿಶೇಷವಾಗಿ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಕೆಲವೆಡೆ ಆಲಿಕಲ್ಲು ಮಳೆಯಾಗುವ ಸಾಧ್ಯತೆಯೂ ಇದೆ ಎಂದು ಇಲಾಖೆ ತಿಳಿಸಿದೆ.
ಬಿಸಿಲಿನ ತೀವ್ರತೆಯಿಂದ ಸಾರ್ವಜನಿಕರು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು. ವಿಶೇಷವಾಗಿ ಮಧ್ಯಾಹ್ನ ವೇಳೆಯಲ್ಲಿ ಹೊರಾಂಗಣ ಚಟುವಟಿಕೆಗಳನ್ನು ತಪ್ಪಿಸುವುದು, ಹೆಚ್ಚು ನೀರು ಸೇವಿಸುವುದು ಮತ್ತು ಗುಡುಗು-ಸಿಡಿಲಿನ ವೇಳೆ ಸುರಕ್ಷಿತ ಸ್ಥಳಗಳಲ್ಲಿ ಇರಲು ಸೂಚಿಸಲಾಗಿದೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa