
ತಿರುಪತಿ, 28 ಏಪ್ರಿಲ್ (ಹಿ.ಸ.) :
ಆ್ಯಂಕರ್ : ಉಪ ರಾಷ್ಟ್ರಪತಿ ಸಿ. ಪಿ. ರಾಧಾಕೃಷ್ಣನ್ ಅವರು ಆಂಧ್ರ ಪ್ರದೇಶದ ಪ್ರಸಿದ್ಧ ತಿರುಮಲ ವೆಂಕಟೇಶ್ವರ ದೇವಾಲಯಕ್ಕೆ ಭೇಟಿ ನೀಡಿ ಶ್ರೀ ವೆಂಕಟೇಶ್ವರ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿದರು.
ದರ್ಶನದ ಬಳಿಕ ದೇಶದ ಜನರ ಶಾಂತಿ, ಸಮೃದ್ಧಿ ಮತ್ತು ಯೋಗಕ್ಷೇಮಕ್ಕಾಗಿ ಅವರು ಪ್ರಾರ್ಥಿಸಿದರು. ದೇವಸ್ಥಾನದ ಅಧಿಕಾರಿಗಳು ಉಪ ರಾಷ್ಟ್ರಪತಿ ಅವರನ್ನು ಆತ್ಮೀಯವಾಗಿ ಸ್ವಾಗತಿಸಿ ಸಂಪ್ರದಾಯಬದ್ಧ ಗೌರವ ಸಲ್ಲಿಸಿದರು.
ಭೇಟಿ ಹಿನ್ನೆಲೆಯಲ್ಲಿ ಭದ್ರತಾ ವ್ಯವಸ್ಥೆಗಳನ್ನು ಕಟ್ಟು ನಿಟ್ಟಾಗಿ ಜಾರಿಗೊಳಿಸಲಾಗಿತ್ತು. ಭಕ್ತರ ದರ್ಶನ ವ್ಯವಸ್ಥೆಯನ್ನೂ ಸಮರ್ಪಕವಾಗಿ ನಿರ್ವಹಿಸಲಾಯಿತು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa