ಮಹಿಳಾ ಸಬಲೀಕರಣಕ್ಕೆ ಮೀಸಲಾತಿ ಅಗತ್ಯ : ಸುಮಿತ್ರಾ ಗುಳಬಾಳ
ಬಾಗಲಕೋಟೆ, 28 ಏಪ್ರಿಲ್ (ಹಿ.ಸ.) : ಆ್ಯಂಕರ್ : ಮಹಿಳೆಯರಿಗೆ ರಾಜಕೀಯ ಹಾಗೂ ಆಡಳಿತಾತ್ಮಕ ಕ್ಷೇತ್ರಗಳಲ್ಲಿ ಸಮಾನ ಅವಕಾಶಗಳು ದೊರಕಬೇಕೆಂಬ ಉದ್ದೇಶದಿಂದ ಜಾರಿಗೆ ತರಲಾಗಿರುವ ಮಹಿಳಾ ಮೀಸಲು ವ್ಯವಸ್ಥೆ ದೇಶದ ಅಭಿವೃದ್ಧಿಗೆ ಮಹತ್ವದ ಹೆಜ್ಜೆಯಾಗಿದೆ ಎಂದು ಬಾಗಲಕೋಟೆ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಸ
ಮೀಸಲಾತಿ


ಬಾಗಲಕೋಟೆ, 28 ಏಪ್ರಿಲ್ (ಹಿ.ಸ.) :

ಆ್ಯಂಕರ್ : ಮಹಿಳೆಯರಿಗೆ ರಾಜಕೀಯ ಹಾಗೂ ಆಡಳಿತಾತ್ಮಕ ಕ್ಷೇತ್ರಗಳಲ್ಲಿ ಸಮಾನ ಅವಕಾಶಗಳು ದೊರಕಬೇಕೆಂಬ ಉದ್ದೇಶದಿಂದ ಜಾರಿಗೆ ತರಲಾಗಿರುವ ಮಹಿಳಾ ಮೀಸಲು ವ್ಯವಸ್ಥೆ ದೇಶದ ಅಭಿವೃದ್ಧಿಗೆ ಮಹತ್ವದ ಹೆಜ್ಜೆಯಾಗಿದೆ ಎಂದು ಬಾಗಲಕೋಟೆ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಸುಮಿತ್ರಾ ಗುಳಬಾಳ ಅವರು ಅಭಿಪ್ರಾಯಪಟ್ಟರು.

ನಗರದಲ್ಲಿ ಮಂಗಳವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮಹಿಳೆಯರಿಗೆ ಶೇಕಡಾ 33ರಷ್ಟು ಮೀಸಲಾತಿ ಒದಗಿಸುವ ಕುರಿತು ಕೇಂದ್ರ ಸರ್ಕಾರ ಕೈಗೊಂಡಿರುವ ಕ್ರಮವನ್ನು ಸ್ವಾಗತಿಸಿದರೂ, ಅದನ್ನು ಶೀಘ್ರವಾಗಿ ಜಾರಿಗೆ ತರುವ ಅಗತ್ಯವಿದೆ ಎಂದು ಒತ್ತಾಯಿಸಿದರು.

ಮಹಿಳೆಯರು ರಾಜಕೀಯದಲ್ಲಿ ಹೆಚ್ಚು ಸಂಖ್ಯೆಯಲ್ಲಿ ಭಾಗವಹಿಸಿದಾಗ ಮಾತ್ರ ಸಮಾಜದ ಸಮಗ್ರ ಅಭಿವೃದ್ಧಿ ಸಾಧ್ಯವಾಗುತ್ತದೆ ಎಂದು ಅವರು ತಿಳಿಸಿದರು.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande