
ನವದೆಹಲಿ, 29 ಏಪ್ರಿಲ್ (ಹಿ.ಸ.) :
ಆ್ಯಂಕರ್ : ಪಶ್ಚಿಮ ಬಂಗಾಳ ವಿಧಾನ ಸಭಾ ಚುನಾವಣೆಯ ದ್ವಿತೀಯ ಹಂತದ ಮತದಾನ ಇಂದು ನಡೆಯುತ್ತಿದ್ದು, ಎಲ್ಲ ಮತದಾರರೂ ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸುವಂತೆ ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ.
ಎಕ್ಸ್ ಮೂಲಕ ಸಂದೇಶ ಹಂಚಿಕೊಂಡಿರುವ ಅವರು, “ಪ್ರಜಾಪ್ರಭುತ್ವವನ್ನು ಇನ್ನಷ್ಟು ಚೈತನ್ಯಶೀಲ ಹಾಗೂ ಭಾಗವಹಿಸುವಿಕೆಯಿಂದ ಕೂಡಿಸಲು ಪ್ರತಿಯೊಬ್ಬರೂ ತಮ್ಮ ಮತದಾನದ ಹಕ್ಕನ್ನು ಚಲಾಯಿಸಬೇಕು” ಎಂದು ತಿಳಿಸಿದ್ದಾರೆ.
ವಿಶೇಷವಾಗಿ ಮಹಿಳೆಯರು ಮತ್ತು ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಮತದಾನಕ್ಕೆ ಮುಂದಾಗಬೇಕು ಎಂದು ಅವರು ಒತ್ತಾಯಿಸಿದ್ದು, “ನಮ್ಮ ಪ್ರಜಾಪ್ರಭುತ್ವದ ಶಕ್ತಿ ಜನರ ಸಕ್ರಿಯ ಭಾಗವಹಿಸುವಿಕೆಯಲ್ಲಿ ಇದೆ” ಎಂದು ಹೇಳಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa