ಪಶ್ಚಿಮ ಸಿಂಗ್ಭೂಮ್ ಅರಣ್ಯದಲ್ಲಿ ನಕ್ಸಲರೊಂದಿಗೆ ಗುಂಡಿನ ಚಕಮಕಿ
ಪಶ್ಚಿಮ ಸಿಂಗ್ಭೂಮ್, 29 ಏಪ್ರಿಲ್ (ಹಿ.ಸ.) : ಆ್ಯಂಕರ್ : ಜಾರ್ಖಂಡ್ ರಾಜ್ಯದ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯ ಟೋಂಟೋ–ಗೋಯೆಲ್ಕೆರಾ ಪೊಲೀಸ್ ಠಾಣಾ ವ್ಯಾಪ್ತಿಯ ದಟ್ಟ ಅರಣ್ಯ ಪ್ರದೇಶದಲ್ಲಿ ಬುಧವಾರ ಭದ್ರತಾ ಪಡೆಗಳು ಮತ್ತು ಮಾವೋವಾದಿಗಳ ನಡುವೆ ತೀವ್ರ ಗುಂಡಿನ ಚಕಮಕಿ ನಡೆದಿದೆ. ಜಿಲ್ಲಾ ಪೊಲೀಸ್ ವರಿಷ್ಠಾಧ
ಪಶ್ಚಿಮ ಸಿಂಗ್ಭೂಮ್ ಅರಣ್ಯದಲ್ಲಿ ನಕ್ಸಲರೊಂದಿಗೆ ಗುಂಡಿನ ಚಕಮಕಿ


ಪಶ್ಚಿಮ ಸಿಂಗ್ಭೂಮ್, 29 ಏಪ್ರಿಲ್ (ಹಿ.ಸ.) :

ಆ್ಯಂಕರ್ : ಜಾರ್ಖಂಡ್ ರಾಜ್ಯದ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯ ಟೋಂಟೋ–ಗೋಯೆಲ್ಕೆರಾ ಪೊಲೀಸ್ ಠಾಣಾ ವ್ಯಾಪ್ತಿಯ ದಟ್ಟ ಅರಣ್ಯ ಪ್ರದೇಶದಲ್ಲಿ ಬುಧವಾರ ಭದ್ರತಾ ಪಡೆಗಳು ಮತ್ತು ಮಾವೋವಾದಿಗಳ ನಡುವೆ ತೀವ್ರ ಗುಂಡಿನ ಚಕಮಕಿ ನಡೆದಿದೆ.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಮಿತ್ ರೇಣು ಈ ಘಟನೆ ದೃಢಪಡಿಸಿದ್ದು, ಕಾರ್ಯಾಚರಣೆ ಇನ್ನೂ ಮುಂದುವರಿದಿದೆ ಎಂದು ತಿಳಿಸಿದ್ದಾರೆ. ಕೋಬ್ರಾ 209 ಬೆಟಾಲಿಯನ್ ಸೇರಿದಂತೆ ವಿವಿಧ ಭದ್ರತಾ ಪಡೆಗಳ ಜಂಟಿ ತಂಡವು ರುತುಗುತು ಅರಣ್ಯದಲ್ಲಿ ಶೋಧ ಕಾರ್ಯಾಚರಣೆ ನಡೆಸುತ್ತಿದ್ದ ವೇಳೆ ಮಾವೋವಾದಿಗಳೊಂದಿಗೆ ಮುಖಾಮುಖಿಯಾಗಿದ್ದು, ಬಳಿಕ ಎರಡೂ ಕಡೆಯಿಂದ ಗುಂಡಿನ ದಾಳಿ ಆರಂಭಗೊಂಡಿತು.

ಮೂಲಗಳ ಪ್ರಕಾರ, ಈ ಕಾರ್ಯಾಚರಣೆ ಕುಖ್ಯಾತ ಮಾವೋವಾದಿ ಕಮಾಂಡರ್ ಮಿಸ್ಸಿರ್ ಬೆಸ್ರಾ ಬಂಧನ ಅಥವಾ ನಿರ್ಮೂಲನೆಗಾಗಿ ಕೈಗೊಳ್ಳಲಾಗಿದ್ದು, ಆತನ ಮೇಲೆ ರೂ.1 ಕೋಟಿ ಬಹುಮಾನ ಘೋಷಿಸಲಾಗಿದೆ.

ಕಳೆದ ಎರಡು ದಿನಗಳಿಂದ ಗೋಯೆಲ್ಕೆರಾ ಪೊಲೀಸ್ ಠಾಣಾ ವ್ಯಾಪ್ತಿಯ ಬೊರೊಯ್ ಹಾಗೂ ಟೂನ್ಬೆಡಾ ಗ್ರಾಮಗಳ ಸುತ್ತಮುತ್ತ ಭದ್ರತಾ ಪಡೆಗಳು ತೀವ್ರ ಶೋಧ ಕಾರ್ಯಾಚರಣೆ ನಡೆಸುತ್ತಿವೆ. ಯೋಧರ ಚಲನವಲನವನ್ನು ಗಮನಿಸಿದ ಮಾವೋವಾದಿಗಳು ರುತುಗುತು ಅರಣ್ಯದಲ್ಲಿ ಕಾಣಿಸಿಕೊಂಡು ಗುಂಡಿನ ಚಕಮಕಿಗೆ ಕಾರಣರಾದರು ಎನ್ನಲಾಗಿದೆ.

ಭದ್ರತಾ ಪಡೆಗಳು ಇಡೀ ಪ್ರದೇಶವನ್ನು ಸುತ್ತುವರಿದು ಭಾರೀ ಶೋಧ ಕಾರ್ಯಾಚರಣೆ ಮುಂದುವರೆಸಿವೆ. ಹೆಚ್ಚುವರಿ ಪಡೆಗಳನ್ನು ನಿಯೋಜಿಸಲಾಗಿದ್ದು, ಪ್ರದೇಶದಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ.

“ಉನ್ನತ ಮಟ್ಟದ ಮಾವೋವಾದಿ ನಾಯಕರನ್ನು ಬಂಧಿಸುವುದು ಅಥವಾ ತಟಸ್ಥಗೊಳಿಸುವುದು ಕಾರ್ಯಾಚರಣೆಯ ಪ್ರಮುಖ ಉದ್ದೇಶವಾಗಿದೆ. ಯಾವುದೇ ಪರಿಸ್ಥಿತಿಯನ್ನು ಎದುರಿಸಲು ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ,” ಎಂದು ಎಸ್.ಪಿ. ಅಮಿತ್ ರೇಣು ತಿಳಿಸಿದ್ದಾರೆ.

ಮುನ್ನೆಚ್ಚರಿಕಾ ಕ್ರಮವಾಗಿ ಹತ್ತಿರದ ಗ್ರಾಮಗಳಲ್ಲಿ ಜಾಗರೂಕತೆ ಹೆಚ್ಚಿಸಲಾಗಿದ್ದು, ಗ್ರಾಮಸ್ಥರು ಅರಣ್ಯ ಪ್ರದೇಶಕ್ಕೆ ತೆರಳದಂತೆ ಸೂಚಿಸಲಾಗಿದೆ. ನಕ್ಸಲ್ ಪೀಡಿತ ಪ್ರದೇಶದಲ್ಲಿ ನಡೆಯುತ್ತಿರುವ ಈ ಕಾರ್ಯಾಚರಣೆ ಮಹತ್ವದ್ದೆಂದು ಪರಿಗಣಿಸಲಾಗಿದೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande