ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ವಿವಿಧ ವಿಷಯಗಳ ಸಮಗ್ರ ಸಭೆ ; ಹಲವಾರು ವಿಚಾರಗಳ ಪರಿಶೀಲನೆ
ವಿಜಯಪುರ, 29 ಏಪ್ರಿಲ್ (ಹಿ.ಸ.) : ಆ್ಯಂಕರ್ : ವಿಜಯಪುರ ಜಿಲ್ಲಾಧಿಕಾರಿಗಳ ಕಾರ್ಯಾಲಯದಲ್ಲಿ ಇಂದು ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ವಿವಿಧ ಮಹತ್ವದ ವಿಷಯಗಳ ಕುರಿತ ಸಮಗ್ರ ಸಭೆ ನಡೆಯಿತು. ಸಭೆಯಲ್ಲಿ ಕಾನೂನು ಸುವ್ಯವಸ್ಥೆ, ರಸ್ತೆ ಸುರಕ್ಷತೆ ಹಾಗೂ ಸಾರ್ವಜನಿಕ ಹಿತಾಸಕ್ತಿಗೆ ಸಂಬಂಧಿಸಿದ ಹಲವಾರು ಪ್
ಸಭೆ


ವಿಜಯಪುರ, 29 ಏಪ್ರಿಲ್ (ಹಿ.ಸ.) :

ಆ್ಯಂಕರ್ : ವಿಜಯಪುರ

ಜಿಲ್ಲಾಧಿಕಾರಿಗಳ ಕಾರ್ಯಾಲಯದಲ್ಲಿ ಇಂದು ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ವಿವಿಧ ಮಹತ್ವದ ವಿಷಯಗಳ ಕುರಿತ ಸಮಗ್ರ ಸಭೆ ನಡೆಯಿತು. ಸಭೆಯಲ್ಲಿ ಕಾನೂನು ಸುವ್ಯವಸ್ಥೆ, ರಸ್ತೆ ಸುರಕ್ಷತೆ ಹಾಗೂ ಸಾರ್ವಜನಿಕ ಹಿತಾಸಕ್ತಿಗೆ ಸಂಬಂಧಿಸಿದ ಹಲವಾರು ಪ್ರಮುಖ ವಿಷಯಗಳ ಬಗ್ಗೆ ಚರ್ಚೆ ನಡೆಯಿತು.

ಸಭೆಯಲ್ಲಿ ಹಿಟ್ ಅಂಡ್ ರನ್ ಪ್ರಕರಣಗಳು, ಎನ್-ಕಾರ್ಡ್ (N-Cord) ವಿಚಾರಗಳು, ಕೋಟ್ಪಾ (COTPA) ಕಾಯ್ದೆ ಅನುಷ್ಠಾನ, ರಸ್ತೆ ಸುರಕ್ಷತೆ, ರಸ್ತೆ ಅಪಘಾತಗಳು ಹಾಗೂ ಐ.ಎಂ.ವಿ ಸಂಬಂಧಿತ ವಿಷಯಗಳನ್ನು ವಿಶ್ಲೇಷಿಸಲಾಯಿತು. ಇದರ ಜೊತೆಗೆ ಮರಳು ಗಣಿಗಾರಿಕೆ (ಮೈನ್ಸ್), ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಹಾಗೂ ಅಬಕಾರಿ ಇಲಾಖೆಯ ವಿಚಾರಗಳ ಕುರಿತು ಅಧಿಕಾರಿಗಳಿಂದ ವಿವರವಾದ ಮಾಹಿತಿ ಪಡೆಯಲಾಯಿತು.

ಇನ್ನೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ, ಪೋಕ್ಸೊ (POCSO) ಪ್ರಕರಣಗಳು, ಎಸ್ಸಿ/ಎಸ್ಟಿ ಸಂಬಂಧಿತ ಪ್ರಕರಣಗಳು, ಪೊಲೀಸ್ ದೂರು ಪ್ರಾಧಿಕಾರದ ಕಾರ್ಯವೈಖರಿ ಕುರಿತು ಸಮೀಕ್ಷೆ ನಡೆಸಲಾಯಿತು. ಮಹಾನಗರ ಪಾಲಿಕೆ, ಪೊಲೀಸ್ ಇಲಾಖೆ ಹಾಗೂ ಬೂಡಾ (BUDA) ಸಂಬಂಧಿತ ವಿಷಯಗಳ ಮೇಲೂ ಚರ್ಚೆ ನಡೆಯಿತು.

ಸಭೆಯಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳು ಪಾಲ್ಗೊಂಡು ತಮ್ಮ ತಮ್ಮ ಇಲಾಖೆಗಳ ಪ್ರಗತಿ ಹಾಗೂ ಸವಾಲುಗಳ ಕುರಿತು ಮಾಹಿತಿ ನೀಡಿದರು. ಸಾರ್ವಜನಿಕರ ಸುರಕ್ಷತೆ ಹಾಗೂ ಕಲ್ಯಾಣದ ದೃಷ್ಟಿಯಿಂದ ವಿವಿಧ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸುವ ಅಗತ್ಯವಿದೆ ಎಂದು ಜಿಲ್ಲಾಧಿಕಾರಿಗಳು ಅಧಿಕಾರಿಗಳಿಗೆ ಸೂಚಿಸಿದರು.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande