ವಿಜಯಪುರದಲ್ಲಿ ಬಿಸಿಲಿನ ತಾಪಕ್ಕೆ 15 ವರ್ಷದ ಬಾಲಕ ಬಲಿ ; ತಾಪಮಾನ ಏರಿಕೆಗೆ ಆತಂಕ
ವಿಜಯಪುರ, 29 ಏಪ್ರಿಲ್ (ಹಿ.ಸ.) : ಆ್ಯಂಕರ್ : ರಾಜ್ಯಾದ್ಯಂತ ಏರಿಕೆಯಾಗುತ್ತಿರುವ ಉರಿ ಬಿಸಿಲಿನ ನಡುವೆ, ವಿಜಯಪುರ ಜಿಲ್ಲೆಯಲ್ಲಿ ಬಿಸಿಲಿನ ತಾಪಕ್ಕೆ 15 ವರ್ಷದ ಬಾಲಕ ಬಲಿಯಾದ ಹೃದಯವಿದ್ರಾವಕ ಘಟನೆ ನಡೆದಿದೆ. ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲ್ಲೂಕಿನ ಇಂಗಳಗಿ ಗ್ರಾಮದಲ್ಲಿ ಈ ಘಟನೆ ಸಂಭವಿಸಿದ
ಸಾವಿ


ವಿಜಯಪುರ, 29 ಏಪ್ರಿಲ್ (ಹಿ.ಸ.) :

ಆ್ಯಂಕರ್ : ರಾಜ್ಯಾದ್ಯಂತ ಏರಿಕೆಯಾಗುತ್ತಿರುವ ಉರಿ ಬಿಸಿಲಿನ ನಡುವೆ, ವಿಜಯಪುರ ಜಿಲ್ಲೆಯಲ್ಲಿ ಬಿಸಿಲಿನ ತಾಪಕ್ಕೆ 15 ವರ್ಷದ ಬಾಲಕ ಬಲಿಯಾದ ಹೃದಯವಿದ್ರಾವಕ ಘಟನೆ ನಡೆದಿದೆ.

ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲ್ಲೂಕಿನ ಇಂಗಳಗಿ ಗ್ರಾಮದಲ್ಲಿ ಈ ಘಟನೆ ಸಂಭವಿಸಿದ್ದು, ಮೃತ ಬಾಲಕನನ್ನು ಶ್ರೀಶೈಲ ಬಿರಾದಾರ (15) ಎಂದು ಗುರುತಿಸಲಾಗಿದೆ. ಶಾಲೆಯ ಬೇಸಿಗೆ ರಜೆ ಹಿನ್ನೆಲೆ, ಬಾಲಕ ಮಧ್ಯಾಹ್ನದ ತೀವ್ರ ಬಿಸಿಲಿನಲ್ಲಿ ಆಟವಾಡುತ್ತಿದ್ದನು ಎಂದು ತಿಳಿದು ಬಂದಿದೆ.

ದೀರ್ಘಕಾಲ ಬಿಸಿಲಿನಲ್ಲಿ ಕಳೆದ ಪರಿಣಾಮ, ಅವನ ಆರೋಗ್ಯದಲ್ಲಿ ಏಕಾಏಕಿ ವ್ಯತ್ಯಾಸ ಕಂಡು ಬಂದಿದ್ದು, ತಕ್ಷಣವೇ ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಬಾಲಕ ಮೃತಪಟ್ಟಿದ್ದಾನೆ.

ಉತ್ತರ ಕರ್ನಾಟಕ ಭಾಗದಲ್ಲಿ, ವಿಶೇಷವಾಗಿ ವಿಜಯಪುರ ಜಿಲ್ಲೆಯಲ್ಲಿ, ತಾಪಮಾನ ದಿನೇದಿನೇ ಏರಿಕೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಆರೋಗ್ಯ ಇಲಾಖೆ ಸಾರ್ವಜನಿಕರಿಗೆ ಎಚ್ಚರಿಕೆ ನೀಡಿದ್ದು, ಮಧ್ಯಾಹ್ನದ ತೀವ್ರ ಬಿಸಿಲಿನ ಸಮಯದಲ್ಲಿ ಹೊರಗೆ ಹೋಗುವುದನ್ನು ತಪ್ಪಿಸಲು ಸೂಚಿಸಿದೆ. ವಿಶೇಷವಾಗಿ ಮಕ್ಕಳು ಮತ್ತು ವೃದ್ಧರ ಬಗ್ಗೆ ಹೆಚ್ಚಿನ ಜಾಗ್ರತೆ ವಹಿಸಬೇಕೆಂದು ತಿಳಿಸಿದೆ.

ವೈದ್ಯರ ಪ್ರಕಾರ, ಉರಿ ಬಿಸಿಲಿನಲ್ಲಿ ದೀರ್ಘಕಾಲ ಇರುವುದರಿಂದ ದೇಹದಲ್ಲಿ ನೀರಿನಾಂಶ ಕಡಿಮೆಯಾಗಿ ‘ಹೀಟ್ಸ್ಟ್ರೋಕ್’ ಸಂಭವಿಸುವ ಸಾಧ್ಯತೆ ಹೆಚ್ಚಿದೆ. ಆದ್ದರಿಂದ, ಹೆಚ್ಚಿನ ಪ್ರಮಾಣದಲ್ಲಿ ನೀರು ಮತ್ತು ದ್ರವಾಹಾರ ಸೇವಿಸುವುದು, ನೆರಳಿನಲ್ಲಿ ಇರಲು ಪ್ರಯತ್ನಿಸುವುದು ಹಾಗೂ ಅಗತ್ಯವಿದ್ದಲ್ಲಿ ವೈದ್ಯಕೀಯ ಸಹಾಯ ಪಡೆಯುವುದು ಅತ್ಯವಶ್ಯಕವಾಗಿದೆ.

ಈ ದುರ್ಘಟನೆ ಹಿನ್ನೆಲೆಯಲ್ಲಿ ಸಾರ್ವಜನಿಕರು ಎಚ್ಚರಿಕೆ ವಹಿಸಿ, ಆರೋಗ್ಯದ ಕಡೆ ಗಮನ ಹರಿಸುವಂತೆ ಅಧಿಕಾರಿಗಳು ಮನವಿ ಮಾಡಿದ್ದಾರೆ

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande