ಕೇರವಾಡ ಸರ್ಕಾರಿ ಶಾಲೆಗೆ ಹೊಸ ತರಗತಿ ಕೊಠಡಿ ನಿರ್ಮಾಣಕ್ಕೆ ಶಂಕುಸ್ಥಾಪನೆ
ದಾಂಡೇಲಿ, 29 ಏಪ್ರಿಲ್ (ಹಿ.ಸ.) : ಆ್ಯಂಕರ್ : ಗ್ರಾಮೀಣ ಪ್ರದೇಶಗಳಲ್ಲಿ ಶಿಕ್ಷಣ ಮೂಲಸೌಕರ್ಯ ಬಲಪಡಿಸುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆಯಾಗಿ,ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿ ತಾಲೂಕಿನ ಆಲೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಕೇರವಾಡ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಹೊಸ ತರಗತಿ ಕೊಠಡಿ ನ
ಶಂಕುಸ್ಥಾಪನೆ


ದಾಂಡೇಲಿ, 29 ಏಪ್ರಿಲ್ (ಹಿ.ಸ.) :

ಆ್ಯಂಕರ್ : ಗ್ರಾಮೀಣ ಪ್ರದೇಶಗಳಲ್ಲಿ ಶಿಕ್ಷಣ ಮೂಲಸೌಕರ್ಯ ಬಲಪಡಿಸುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆಯಾಗಿ,ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿ ತಾಲೂಕಿನ ಆಲೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಕೇರವಾಡ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಹೊಸ ತರಗತಿ ಕೊಠಡಿ ನಿರ್ಮಾಣ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಲಾಯಿತು.

2025-26ನೇ ಸಾಲಿನ ತಾಲೂಕು ಪಂಚಾಯತ್ ಅನಿರ್ಬಂಧಿತ ಅನುದಾನದಡಿ ಮಂಜೂರಾದ ಈ ಕಾಮಗಾರಿಗೆ ಶಾಸಕ ಆರ್.ವಿ.ದೇಶಪಾಂಡೆ ಅವರು ಭೂಮಿಪೂಜೆ ನೆರವೇರಿಸಿ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಗ್ರಾಮೀಣ ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣ ವಾತಾವರಣ ಕಲ್ಪಿಸುವುದು ಸರ್ಕಾರದ ಪ್ರಮುಖ ಆದ್ಯತೆಯಾಗಿದೆ ಎಂದು ತಿಳಿಸಿದರು.

ಹೊಸ ತರಗತಿ ಕೊಠಡಿ ನಿರ್ಮಾಣದಿಂದ ಶಾಲೆಯ ಮೂಲಸೌಕರ್ಯ ಸುಧಾರಣೆಗೊಂಡು, ವಿದ್ಯಾರ್ಥಿಗಳಿಗೆ ಅನುಕೂಲಕರ ಕಲಿಕಾ ಪರಿಸರ ದೊರೆಯಲಿದೆ ಎಂದು ಅಭಿಪ್ರಾಯಪಟ್ಟರು.

ಕಾರ್ಯಕ್ರಮದಲ್ಲಿ ಬಿಸಿಸಿ ಅಧ್ಯಕ್ಷರು, ಸ್ಥಳೀಯ ಮುಖಂಡರು, ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದು, ಕಾಮಗಾರಿಯನ್ನು ಸಮಯಕ್ಕೆ ಪೂರ್ಣಗೊಳಿಸುವಂತೆ ಸೂಚನೆ ನೀಡಲಾಯಿತು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande