
ಭಾಲ್ಕಿ, 29 ಏಪ್ರಿಲ್ (ಹಿ.ಸ.) :
ಆ್ಯಂಕರ್ : ಬೀದರ್ ಜಿಲ್ಲೆಯ ಭಾಲ್ಕಿ ನಗರದ ದಾಡಗಿ ಬೇಸ್ ಓಣಿಯ ಶ್ರೀ ಹನುಮಾನ್ ಮಂದಿರದಲ್ಲಿ ನಡೆದ ಕಳಸಾರೋಹಣ ಮಹೋತ್ಸವದಲ್ಲಿ ಸಚಿವ ಈಶ್ವರ ಖಂಡ್ರೆ ಭಾಗವಹಿಸಿ ಶ್ರೀ ಆಂಜನೇಯ ಸ್ವಾಮಿಯ ದರ್ಶನ ಪಡೆದು ಕಳಸ ಪೂಜೆ ನೆರವೇರಿಸಿ ಕಳಸಾರೋಹಣಕ್ಕೆ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, “ದೇವಾಲಯಗಳು ನಮ್ಮ ಆಧ್ಯಾತ್ಮಿಕ ಬದುಕಿಗೆ ಶಕ್ತಿ ನೀಡುವ ಪ್ರಮುಖ ಕೇಂದ್ರಗಳಾಗಿವೆ. ಭಕ್ತರ ಭಾವನೆಗಳನ್ನು ಒಗ್ಗೂಡಿಸುವ ಇಂತಹ ಪವಿತ್ರ ಸ್ಥಳಗಳು ಸಮಾಜದಲ್ಲಿ ಸೌಹಾರ್ದತೆ ಮತ್ತು ಒಗ್ಗಟ್ಟನ್ನು ಬೆಳೆಸುವಲ್ಲಿ ಮಹತ್ವದ ಪಾತ್ರ ವಹಿಸುತ್ತವೆ” ಎಂದು ಹೇಳಿದರು.
ಮಂದಿರದ ಜೀರ್ಣೋದ್ಧಾರ ಕಾರ್ಯಕ್ಕಾಗಿ ಸುಮಾರು ₹8 ಲಕ್ಷ ಅನುದಾನ ನೀಡಲಾಗಿದ್ದು, ಸ್ಥಳೀಯ ಭಕ್ತರ ಸಹಕಾರದಿಂದ ದೇವಾಲಯವನ್ನು ಸುಂದರವಾಗಿ ಅಭಿವೃದ್ಧಿಪಡಿಸಿರುವುದು ಸಂತೋಷದ ಸಂಗತಿ ಎಂದು ಸಚಿವರು ಹೇಳಿದರು. ಇಂತಹ ಧಾರ್ಮಿಕ ಕಾರ್ಯಗಳು ಜನರಲ್ಲಿ ಶಾಂತಿ, ನೆಮ್ಮದಿ ಮತ್ತು ಸಕಾರಾತ್ಮಕ ಚಿಂತನೆ ಬೆಳೆಸಲು ನೆರವಾಗುತ್ತವೆ ಎಂದು ಅಭಿಪ್ರಾಯಪಟ್ಟರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa