ನವನಗರ ಪೊಲೀಸ್ ಠಾಣೆಗೆ ಐಜಿಪಿ ಭೇಟಿ ; ಕಾನೂನು ಸುವ್ಯವಸ್ಥೆ ಕುರಿತು ಸಮಗ್ರ ಪರಿಶೀಲನೆ
ಬಾಗಲಕೋಟೆ, 29 ಏಪ್ರಿಲ್ (ಹಿ.ಸ.) : ಆ್ಯಂಕರ್ : ಉತ್ತರ ವಲಯದ ಮಾನ್ಯ ಆರಕ್ಷಕ ಮಹಾನಿರೀಕ್ಷಕರಾದ ಶ್ರೀ ಚೇತನ್ ಸಿಂಗ್ ರಾಥೋರ್ (ಐ.ಪಿ.ಎಸ್.) ಅವರು ಇಂದು ಬಾಗಲಕೋಟೆಯ ನವನಗರ ಪೊಲೀಸ್ ಠಾಣೆಗೆ ಭೇಟಿ ನೀಡಿ ಪರಿವೀಕ್ಷಣೆ ನಡೆಸಿದರು. ಠಾಣೆಯ ವ್ಯಾಪ್ತಿಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ಕ್ರಮಗಳು, ಅ
Igp


ಬಾಗಲಕೋಟೆ, 29 ಏಪ್ರಿಲ್ (ಹಿ.ಸ.) :

ಆ್ಯಂಕರ್ : ಉತ್ತರ ವಲಯದ ಮಾನ್ಯ ಆರಕ್ಷಕ ಮಹಾನಿರೀಕ್ಷಕರಾದ ಶ್ರೀ ಚೇತನ್ ಸಿಂಗ್ ರಾಥೋರ್ (ಐ.ಪಿ.ಎಸ್.) ಅವರು ಇಂದು ಬಾಗಲಕೋಟೆಯ ನವನಗರ ಪೊಲೀಸ್ ಠಾಣೆಗೆ ಭೇಟಿ ನೀಡಿ ಪರಿವೀಕ್ಷಣೆ ನಡೆಸಿದರು.

ಠಾಣೆಯ ವ್ಯಾಪ್ತಿಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ಕ್ರಮಗಳು, ಅಪರಾಧ ಪ್ರಕರಣಗಳ ಪತ್ತೆ ಹಾಗೂ ನಿಯಂತ್ರಣಕ್ಕೆ ಕೈಗೊಳ್ಳಲಾಗುತ್ತಿರುವ ವಿವಿಧ ಕಾರ್ಯಚಟುವಟಿಕೆಗಳ ಕುರಿತು ಅವರು ಸಮಗ್ರ ಪರಿಶೀಲನೆ ನಡೆಸಿದರು.

ಈ ಸಂದರ್ಭದಲ್ಲಿ ಅಧಿಕಾರಿಗಳು ಮತ್ತು ಸಿಬ್ಬಂದಿಯವರೊಂದಿಗೆ ಸಭೆ ನಡೆಸಿದ ಐಜಿಪಿ ಅವರು, ಸಾರ್ವಜನಿಕ ಸ್ನೇಹಿ ಪೊಲೀಸ್ ಸೇವೆಯನ್ನು ಮತ್ತಷ್ಟು ಪರಿಣಾಮಕಾರಿಯಾಗಿ ಒದಗಿಸುವ ಅಗತ್ಯತೆಯನ್ನು ಒತ್ತಿ ಹೇಳಿದರು. ಅಪರಾಧ ತಡೆಗಟ್ಟುವ ಕ್ರಮಗಳನ್ನು ಬಲಪಡಿಸುವುದು, ಸಾರ್ವಜನಿಕರೊಂದಿಗೆ ವಿಶ್ವಾಸದ ಬಾಂಧವ್ಯವನ್ನು ವೃದ್ಧಿಸುವುದು ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಹೆಚ್ಚಿನ ಜಾಗೃತಿ ವಹಿಸುವಂತೆ ಸೂಚನೆ ನೀಡಿದರು.

ಇದಲ್ಲದೆ, ಪೊಲೀಸ್ ಸಿಬ್ಬಂದಿ ಕರ್ತವ್ಯನಿಷ್ಠೆಯಿಂದ ಹಾಗೂ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿ, ಸಮಾಜದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಕಾಪಾಡುವಲ್ಲಿ ಪ್ರಮುಖ ಪಾತ್ರ ವಹಿಸಬೇಕೆಂದು ತಿಳಿಸಿದರು.

ಈ ಸಂದರ್ಭದಲ್ಲಿ ಬಾಗಲಕೋಟೆ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಶ್ರೀ ಸಿದ್ಧಾರ್ಥ ಗೋಯಲ್ (ಐ.ಪಿ.ಎಸ್.) ಸೇರಿದಂತೆ ಇತರೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande