
ಕೊಪ್ಪಳ, 29 ಏಪ್ರಿಲ್ (ಹಿ.ಸ.) :
ಆ್ಯಂಕರ್ : ಕರ್ನಾಟಕ ಸರ್ಕಾರದಿಂದ ಅನುದಾನಿತ ಸ್ವಾಯತ್ತ ಹಾಗೂ ಎಐಸಿಟಿಇ ಮಾನ್ಯತೆ ಪಡೆದ ಸಂಸ್ಥೆಯಾದ ಜೆಎಸ್ಎಸ್ ಮಹಾವಿದ್ಯಾಪೀಠ ಜೆಎಸ್ಎಸ್ ವಿಶೇಷಚೇತನರ ಪಾಲಿಟೆಕ್ನಿಕ್, ಮೈಸೂರು ಇವರ ವತಿಯಿಂದ 2026-27ನೇ ಸಾಲಿಗೆ (ಅಖಿಲ ಭಾರತ ಮಟ್ಟದಲ್ಲಿ) ವಿಶೇಷಚೇತನ ವಿದ್ಯಾರ್ಥಿ, ವಿದ್ಯಾರ್ಥಿನಿಯರಿಂದ ಮೂರು ವರ್ಷಗಳ ಅವಧಿಯ ಡಿಪ್ಲೊಮಾ ಕೋರ್ಸುಗಳ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ.
ಅನುದಾನಿತ ಕೋರ್ಸುಗಳಾದ ಆರ್ಕಿಟೆಕ್ಚರ್ ಅಸಿಸ್ಟೆಂಟ್ಷಿಪ್, ಕಮರ್ಷಿಯಲ್ ಪ್ರಾಕ್ಟೀಸ್, ಕಂಪ್ಯೂಟರ್ ಸೈನ್ಸ್ ಮತ್ತು ಇಂಜಿನಿಯರಿ0ಗ್, ಅನುದಾನ ರಹಿತ ಕೋರ್ಸುಗಳಾದ ಜ್ಯುವೆಲರಿ ಡಿಸೈನ್ ಮತ್ತು ಟೆಕ್ನಾಲಜಿ, ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಷನ್ ಇಂಜಿನಿಯರಿ0ಗ್, ಕಂಪ್ಯೂಟರ್ ಅಪ್ಲಿಕೇಷನ್ಸ್ (ಫಾರ್ ವಿಜ್ಯುವಲಿ ಇಂಪರ್ಡ್), ಅಪಾರೇಲ್ ಡಿಸೈನ್ ಮತ್ತು ಫ್ಯಾಬ್ರಿಕೇಷನ್ ಟೆಕ್ನಾಲಜಿ, ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಮತ್ತು ಎಲೆಕ್ಟ್ರಿಕ್ ವೆಹಿಕಲ್ ಟೆಕ್ನಾಲಜಿ ಕೋರ್ಸುಗಳು ಲಭ್ಯವಿದ್ದು, ಅರ್ಜಿ ಸಲ್ಲಿಸಬಹುದು.
ಕರ್ನಾಟಕ ಎಸ್ಎಸ್ಎಲ್ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿದ ಹಾಗೂ ಶೇ.40 ಮತ್ತು ಮೇಲ್ಪಟ್ಟು ಮೂಳೆ ಮತ್ತು ಕೀಲು ಅಂಗವಿಕಲತೆ, ಶೇ.60 ಡಿಬಿ ಮತ್ತು ಮೇಲ್ಪಟ್ಟು ಕಿವುಡು ಹಾಗೂ ಮೂಗು ಅಂಗವಿಕಲತೆ ಮತ್ತು ಕಂಪ್ಯೂಟರ್ ಅಪ್ಲಿಕೇಷನ್ಸ್ (ಫಾರ್ ವಿಜ್ಯುವಲಿ ಇಂರ್ಡ್) ಕೋರ್ಸಿಗೆ 6/60 ಅಥವಾ 20/200 ಸ್ನೆಲೆನ್ ಅಂಧತ್ವ ಹೊಂದಿದ ಅರ್ಹ ಅಭ್ಯರ್ಥಿಗಳು ಡಿಪ್ಲೊಮಾ ಕೊರ್ಸುಗಳಿಗೆ ಅರ್ಜಿ ಸಲ್ಲಿಸಬಹುದು.
ಅರ್ಹ ವಿದ್ಯಾರ್ಥಿಗಳಿಗೆ ರಾಜ್ಯ ಮತ್ತು ರಾಷ್ಟ್ರ ಮಟ್ಟದ ವಿದ್ಯಾರ್ಥಿವೇತನದ ಆರ್ಥಿಕ ಸಹಾಯ ದೊರೆಯುತ್ತದೆ. ಪಾಲಿಟೆಕ್ನಿಕ್ನ ಯಶಸ್ವಿ ವಿದ್ಯಾರ್ಥಿಗಳಿಗೆ ಉದ್ಯೋಗ ಮತ್ತು ತರಬೇತಿ ಕೇಂದ್ರದ ಮೂಲಕ ಉದ್ಯೋಗಾವಕಾಶವನ್ನು ಕಲ್ಪಿಸಿಕೊಡಲಾಗುತ್ತದೆ. ವಿದ್ಯಾರ್ಥಿ ಹಾಗೂ ವಿದ್ಯಾರ್ಥಿನಿಯರಿಗೆ ಪ್ರತ್ಯೇಕ ವಿದ್ಯಾರ್ಥಿನಿಲಯದ ಸೌಲಭ್ಯ ಕಲ್ಪಿಸಲಾಗಿದೆ.
ಅರ್ಜಿಯನ್ನು ಸಲ್ಲಿಸಲು 2026ರ ಜೂನ್ 6 ಕೊನೆಯ ದಿನವಾಗಿದ್ದು, ನಿಗದಿತ ದಿನಾಂಕದೊಳಗೆ ಅರ್ಜಿಯನ್ನು ಕಚೇರಿಗೆ ತಲುಪಿಸಬೇಕು. ಪ್ರವೇಶ ಅರ್ಜಿಯನ್ನು ಜೆಎಸ್ಎಸ್ ವಿಶೇಷಚೇತನರ ಪಾಲಿಟೆಕ್ನಿಕ್, ಜೆಎಸ್ಎಸ್ ತಾಂತ್ರಿಕ ಶಿಕ್ಷಣ ಸಂಸ್ಥೆಗಳ ಸಮುಚ್ಛಯ, ಮೈಸೂರು-570006 ವಿಳಾಸದಿಂದ ಸಾಮಾನ್ಯ ವರ್ಗದ ಅಭ್ಯರ್ಥಿಗಳು ರೂ. 200 ಗಳ ಹಾಗೂ ಎಸ್ಸಿ, ಎಸ್ಟಿ ಅಥವಾ ಪ್ರ-1 ವರ್ಗದವರು ರೂ. 100 ರ ನಗದು ಅಥವಾ ಡಿಡಿ ಮೂಲಕ ಮೈಸೂರಿನಲ್ಲಿ ಸಂದಾಯವಾಗುವಂತೆ ಕಳುಹಿಸಿ ಪಡೆಯಬಹುದು ಅಥವಾ ವೆಬ್ಸೈಟ್ www.jsspda.org ಮೂಲಕ ಡೌನ್ಲೋಡ್ ಮಾಡಿಕೊಳ್ಳಬಹುದು. ಹೆಚ್ಚಿನ ಮಾಹಿತಿಗಾಗಿ ವೆಬ್ಸೈಟ್, ಇ-ಮೇಲ್ jsspda@gmail.com ಅಥವಾ ಮೊ.ಸಂ. 9844644937 ಮೂಲಕ ಸಂಪರ್ಕಿಸಬಹುದು ಎಂದು ಮೈಸೂರು ಜೆಎಸ್ಎಸ್ ವಿಶೇಷಚೇತನರ ಪಾಲಿಟೆಕ್ನಿಕ್ ಪ್ರಾಂಶುಪಾಲರು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್