
ಕೊಪ್ಪಳ, 29 ಏಪ್ರಿಲ್ (ಹಿ.ಸ.) :
ಆ್ಯಂಕರ್ : ತೋಟಗಾರಿಕೆ ಇಲಾಖೆ ವತಿಯಿಂದ 10ನೇ ವರ್ಷದ ಮಾವು ಮೇಳವನ್ನು ಮೇ 12 ರಿಂದ 22 ರವರೆಗೆ 10 ದಿನಗಳ ಕಾಲ ಕೊಪ್ಪಳ ನಗರದಲ್ಲಿ ಆಯೋಜಿಸಲಾಗಿದ್ದು, ಮಳಿಗೆ ಕಾಯ್ದಿರಿಸಲು ಆಸಕ್ತ ರೈತರಿಗೆ ಸೂಚಿಸಲಾಗಿದೆ.
ಜಿಲ್ಲೆಯಲ್ಲಿ ಬೆಳೆಯಲಾಗುತ್ತಿರುವ ಮಾವು ಬೆಳೆಗೆ ಉತ್ತಮ ಮಾರುಕಟ್ಟೆ ಒದಗಿಸುವ ಮತ್ತು ಕೊಪ್ಪಳ ಜಿಲ್ಲೆಯ ನಾಗರಿಕರಿಗೆ ಉತ್ತಮ ಗುಣಮಟ್ಟದ ಹಣ್ಣುಗಳನ್ನು ಯೋಗ್ಯ ಬೆಲೆಗೆ ಯಾವುದೇ ಮಧ್ಯವರ್ತಿಗಳ ಹಾವಳಿ ಇಲ್ಲದೇ ರೈತರಿಂದ ನೇರವಾಗಿ ಗ್ರಾಹಕರಿಗೆ ಒದಗಿಸುವ ಉದ್ದೇಶದಿಂದ ಮಾವು ಪ್ರದರ್ಶನ ಮತ್ತು ನೈಸರ್ಗಿಕವಾಗಿ ಮಾಗಿಸಿದ ಮಾವಿನ ಹಣ್ಣುಗಳ ಮಾರಾಟ ಮೇಳವನ್ನು ಆಯೋಜಿಸಲು ನಿರ್ಧರಿಸಲಾಗಿದೆ.
ಈ ಮೇಳದಲ್ಲಿ ಭಾಗವಹಿಸುವ ಆಸಕ್ತ ಜಿಲ್ಲೆಯ ಮಾವು ಬೆಳೆಗಾರರು ನೈಸರ್ಗಿಕವಾಗಿ ಮಾಗಿಸಿದ ಮಾವಿನ ಹಣ್ಣುಗಳನ್ನು ಮಾರಾಟ ಮಾಡಲು ಮುಂಗಡವಾಗಿ ಮಾರಾಟ ಮಳಿಗೆಗಳನ್ನು ಕಾಯ್ದಿರಿಸಲು ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬಹುದು.
ಮೊದಲು ಬಂದವರಿಗೆ ಆದ್ಯತೆ ನೀಡಲಾಗುವುದು. ಆಸಕ್ತ ರೈತರು ತಮ್ಮ ಪಹಣಿ ಪ್ರತಿಯೊಂದಿಗೆ, ತಮ್ಮ ಹೆಸರು, ವಿಳಾಸ, ಸರ್ವೆ ನಂಬರ್, ಬೆಳೆ, ತಳಿಗಳು ಹಾಗೂ ವಿಸ್ತೀರ್ಣ ಮುಂತಾದ ವಿವರಗಳೊಂದಿಗೆ ಹೆಸರು ನೋಂದಾಯಿಸಿಕೊಳ್ಳಲು ಸೂಚಿಸಲಾಗಿದೆ. ತಮ್ಮ ಉತ್ಪನ್ನಗಳಿಗೆ ಯೋಗ್ಯ ಬೆಲೆ ದೊರೆಯಲು ಹಾಗೂ ನೇರವಾಗಿ ಗ್ರಾಹಕರಿಗೆ ಮಾರಾಟ ಮಾಡಲು ರೈತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲು ಈ ಮೂಲಕ ತಿಳಿಸಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು (ಜಿಪಂ), ಕೊಪ್ಪಳ ಮೊ:9611888607, ಗಂಗಾವತಿ ಮೊ: 9480257282, ಕುಷ್ಟಗಿ ಮೊ:
9743518608, ಮೊ: 9945644338, ಕೇಂದ್ರ ಸ್ಥಾನಿಕ ಸಹಾಯಕರು, ತೋಟಗಾರಿಕೆ ಉಪನಿರ್ದೇಶಕರ ಕಛೇರಿ (ಜಿಪಂ) ಕೊಪ್ಪಳ, ಮೊ: 8095359179, ತೋಟಗಾರಿಕೆ ಕಿಸಾನ್ ಮಾಲ್ ಕೊಪ್ಪಳ: 9902792635 ಇವರನ್ನು ಸಂಪರ್ಕಿಸಬಹುದು ಎಂದು ತೋಟಗಾರಿಕೆ ಜಂಟಿ ನಿರ್ದೇಶಕರಾದ ಕೃಷ್ಣ ಉಕ್ಕುಂದ ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್