ಮೇ 1 : ಶ್ರೀ ಭಗವಾನ್ ಬುದ್ಧ ಜಯಂತಿ
ಕೊಪ್ಪಳ, 29 ಏಪ್ರಿಲ್ (ಹಿ.ಸ.) : ಆ್ಯಂಕರ್ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಕೊಪ್ಪಳ ನಗರಸಭೆ ಇವರ ಸಂಯುಕ್ತಾಶ್ರಯದಲ್ಲಿ ಶ್ರೀ ಭಗವಾನ್ ಬುದ್ಧ ಜಯಂತಿಯನ್ನು ಮೇ 1 ರಂದು ಬೆಳಿಗ್ಗೆ 9.30 ಗಂಟೆಗೆ ಕೊಪ್ಪಳದ ಡಾ. ಬಿ.ಆರ್.ಅಂಬೇಡ್ಕರ್ ವೃತ್ತದ ಆವರಣದಲ್ಲಿ ಆಯೋಜಿ
ಮೇ 1 : ಶ್ರೀ ಭಗವಾನ್ ಬುದ್ಧ ಜಯಂತಿ


ಕೊಪ್ಪಳ, 29 ಏಪ್ರಿಲ್ (ಹಿ.ಸ.) :

ಆ್ಯಂಕರ್ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಕೊಪ್ಪಳ ನಗರಸಭೆ ಇವರ ಸಂಯುಕ್ತಾಶ್ರಯದಲ್ಲಿ ಶ್ರೀ ಭಗವಾನ್ ಬುದ್ಧ ಜಯಂತಿಯನ್ನು ಮೇ 1 ರಂದು ಬೆಳಿಗ್ಗೆ 9.30 ಗಂಟೆಗೆ ಕೊಪ್ಪಳದ ಡಾ. ಬಿ.ಆರ್.ಅಂಬೇಡ್ಕರ್ ವೃತ್ತದ ಆವರಣದಲ್ಲಿ ಆಯೋಜಿಸಲಾಗಿದೆ.

ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ತಂಗಡಗಿ ಶಿವರಾಜ ಸಂಗಪ್ಪ ಅವರು ಕಾರ್ಯಕ್ರಮ ಉದ್ಘಾಟಿಸುವರು. ಕರ್ನಾಟಕ ವಿಧಾನ ಸಭೆಯ ವಿರೋಧ ಪಕ್ಷದ ಮುಖ್ಯ ಸಚೇತಕರು ಹಾಗೂ ಕುಷ್ಟಗಿ ಶಾಸಕರಾದ ದೊಡ್ಡನಗೌಡ ಹನುಮಗೌಡ ಪಾಟೀಲ, ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರು ಹಾಗೂ ಯಲಬುರ್ಗಾ ಶಾಸಕರಾದ ಬಸವರಾಜ ರಾಯರಡ್ಡಿ ಅವರು ಕಾರ್ಯಕ್ರಮದ ಘನ ಉಪಸ್ಥಿತಿ ವಹಿಸುವರು. ಕೊಪ್ಪಳ ಶಾಸಕರಾದ ಕೆ.ರಾಘವೇಂದ್ರ ಹಿಟ್ನಾಳ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು.

ಮುಖ್ಯ ಅತಿಥಿಗಳಾಗಿ ಕೊಪ್ಪಳ ಸಂಸದರಾದ ಕೆ.ರಾಜಶೇಖರ ಹಿಟ್ನಾಳ, ಗಂಗಾವತಿ ಶಾಸಕರಾದ ಜಿ.ಜನಾರ್ಧನ ರೆಡ್ಡಿ, ವಿಧಾನ ಪರಿಷತ್ ಸದಸ್ಯರುಗಳಾದ ಶಶೀಲ್ ಜಿ.ನಮೋಶಿ, ಡಾ.ಚಂದ್ರಶೇಖರ ಬಿ.ಪಾಟೀಲ, ಶರಣಗೌಡ ಅನ್ನದಾನಗೌಡ ಪಾಟೀಲ ಬಯ್ಯಾಪೂರ ಹಾಗೂ ಹೇಮಲತಾ ನಾಯಕ, ಮುನಿರಾಬಾದ್ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರ ತುಂಗಭದ್ರಾ ಯೋಜನೆಯ ಅಧ್ಯಕ್ಷರಾದ ಹಸನಸಾಬ ನಬಿಸಾಬ ದೋಟಿಹಾಳ, ಕೊಪ್ಪಳ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಪ್ರಸನ್ನ ವಿ. ಗಡಾದ, ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ರೆಡ್ಡಿ ಶ್ರೀನಿವಾಸ ಅವರು ಭಾಗವಹಿಸುವರು.

ವಿಶೇಷ ಆಹ್ವಾನಿತರಾಗಿ ಬಾಗಲಕೋಟೆಯ ಭೂಸ್ವಾದೀನ ಪುನರ್ವಸತಿ ಮತ್ತು ಪುನರ್ ನಿರ್ಮಾಣ ಹಾಗೂ ಕೃಷ್ಣ ಮೇಲ್ದಂಡೆ ಯೋಜನೆಯ ಆಯುಕ್ತರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ಕೆ.ಪಿ. ಮೋಹನ್ರಾಜ್ ಅವರು ಆಗಮಿಸುವರು. ಧಾರವಾಡದ ನಿವೃತ್ತ ಉಪ ಅಧೀಕ್ಷಕರಾದ ಗಿರೀಶ ಕಾಂಬ್ಳೆ ಅವರು ಕಾರ್ಯಕ್ರಮದಲ್ಲಿ ವಿಶೇಷ ಉಪನ್ಯಾಸ ನೀಡುವರು.

ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಡಾ. ಸುರೇಶ ಬಿ. ಇಟ್ನಾಳ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವರ್ಣಿತ್ ನೇಗಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ರಾಮ್ ಎಲ್. ಅರಸಿದ್ದಿ, ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ ಅವರು ಭಾಗವಹಿಸುವರು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಕರ್ಣಕುಮಾರ ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande